“ವಿಕ್ಟೋರಿಯಾ’ ಸಿಬ್ಬಂದಿಗೆ ಮತ್ತೆ ಸೋಂಕು
Team Udayavani, Jun 18, 2020, 5:35 AM IST
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಮೂವರು ನರ್ಸ್ ಹಾಗೂ ಒಬ್ಬರು ಗ್ರೂಪ್ ಡಿ ಸಿಬ್ಬಂದಿಗೆ ಬುಧವಾರ ಸೋಂಕು ಇರುವುದು ದೃಢಪಟ್ಟಿದೆ. 32, 33 ವರ್ಷದ ಇಬ್ಬರು ಮಹಿಳಾ ಆರೋಗ್ಯ ಕಾರ್ಯಕರ್ತೆಯರು, 36 ವರ್ಷದ ಆರೋಗ್ಯ ಕಾರ್ಯಕರ್ತನಿಗೆ ಬುಧವಾರ ಸೋಂಕು ದೃಢಪಟ್ಟಿದೆ.
ಇನ್ನೊಬ್ಬರು ಗ್ರೂಪ್ ಡಿ ನೌಕರರಿಗೂ ಸೋಂಕು ದೃಢಪಟ್ಟಿದ್ದು, ಇವರ ವಿವರ ಆರೋಗ್ಯ ಇಲಾಖೆ ಬುಲೆಟಿನ್‌ನಲ್ಲಿ ದಾಖಲಾಗಿಲ್ಲ. ಸೋಂಕು ದೃಢಪಟ್ಟ ಮೂವರು ನರ್ಸ್‌ಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು, ಗ್ರೂಪ್ ಡಿ ನೌಕರನ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಇವರು ಕೆಲಸ ಮುಗಿಸಿ ಮನೆಗೆ ತೆರಳುವಾಗ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋ ಧನಾ ಸಂಸ್ಥೆಯ ಡೀನ್ ಡಾ.ಜಯಂತಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗೆ ಸೋಂಕು ದೃಢಪಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ
ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?
ಡೆಂಗ್ಯೂ ಪ್ರಕರಣ ಭಾರೀ ಏರಿಕೆ : ಇಂದು ರಾಷ್ಟ್ರೀಯ ಡೆಂಗ್ಯೂ ದಿನ
ಆನ್ಲೈನ್ನಲ್ಲಿ ಆ್ಯಸಿಡ್ ಖರೀದಿಸಿದ್ದ ನಾಗೇಶ : ತನಿಖೆ ವೇಳೆ ವಿಚಾರ ಬಹಿರಂಗ
ಕೆಪಿಎಸ್ಸಿಯಲ್ಲೂ ನಡೆದಿದೆ ಅಕ್ರಮ : ಅಭ್ಯರ್ಥಿಗಳಿಂದಲೇ ಪೊಲೀಸ್ ಆಯುಕ್ತರಿಗೆ ದೂರು