ವಾರಿಯರ‍್ಸ್‌ಗಳಲ್ಲೂ ಸೋಂಕು, ಸೃಷ್ಟಿಯಾದ ತಲ್ಲಣ


Team Udayavani, Jun 7, 2020, 5:44 AM IST

warrior-sonku

ಬೆಂಗಳೂರು: ನಗರದ ಪೊಲೀಸ್‌ ಠಾಣೆ, ಪಾಲಿಕೆ ಕಚೇರಿ ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ವಿವಿಧ ವಲಯದಲ್ಲಿ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಕೋವಿಡ್‌ 19 ದೃಢಪಡುತ್ತಿರುವುದು ತಲ್ಲಣ ಮೂಡಿಸಿದೆ. ಇತ್ತೀಚೆಗೆ  ಬೆಳಗಾವಿಯಲ್ಲಿ ನರ್ಸ್‌ವೊಬ್ಬರು ಕ್ವಾರಂಟೈನ್‌ನಲ್ಲಿದ್ದು, ಮಗಳ ಸಮೀಪಕ್ಕೆ ಬಂದು ಮಾತನಾಡಲಾಗದೆ ಕಣ್ಣೀರಿಟ್ಟ ದೃಶ್ಯ ರಾಜ್ಯದ ಲ್ಲಷ್ಟೇ ಅಲ್ಲದೇ ಹೊರ ರಾಜ್ಯಗಳ ಸುದ್ದಿ ಮಾಧ್ಯಮಗಳಲ್ಲೂ ಪ್ರಸಾರವಾಗಿತ್ತು

. ಕೌಟುಂ ಬಿಕ ಬಾಂಧವ್ಯ ಅನುಭವಿಸಲಾಗದೆ, ಮತ್ತೂಂದು ಕಡೆ ಯಾರಿಗೆ ಸೋಂಕು ಬರುತ್ತದೆಯೋ, ಯಾವಾಗ ಕ್ವಾರಂಟೈನ್‌ ಆಗಬೇಕೋ ಎಂಬ ಆತಂಕದಲ್ಲೇ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದು ಕೇವಲ ವೈದ್ಯಕೀಯ ಸಿಬ್ಬಂದಿಯ ಸ್ಥಿತಿಯಲ್ಲ. ಸಾರ್ವಜನಿಕ ಸಂಪರ್ಕದಲ್ಲಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳ ಸಿಬ್ಬಂದಿ ಇಂತಹ ನೋವನ್ನು ಅನುಭವಿಸುತ್ತಿದ್ದಾರೆ.

ನಗರದಲ್ಲಿ ಪೊಲೀಸ್‌, ಬ್ಯಾಂಕ್‌ ಸಿಬ್ಬಂದಿ ಹಾಗೂ ಪಾಲಿಕೆ ಸದಸ್ಯ ಸೇರಿ ವಿವಿಧ  ವಲಯಗಳಲ್ಲಿರುವವರಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಹಾಗೂ ಆಯಾ ಪ್ರದೇಶಗಳು ಸೀಲ್‌ಡೌನ್‌ ಆಗುತ್ತಿರುವುದು ಅಧಿಕಾರಿಗಳ ಆತ್ಮಸ್ಥೆರ್ಯ ಕುಗ್ಗಿಸಿದೆ. ಆತಂಕದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿಗಳು, ಪೊಲೀಸ್‌ ಠಾಣೆ,  ಬ್ಯಾಂಕ್‌ ಸೇರಿದಂತೆ ವಿವಿಧ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದರ ನಡುವೆಯೇ ಕೆಲಸ ಮಾಡುತ್ತಿದ್ದಾರೆ. ಇನ್ನು ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಬಿಬಿಎಂಪಿ ಕಾರ್ಯವೈಖರಿ ಹಾಗೂ ಮೇಯರ್‌ ಸಾರ್ವಜನಿಕ ಭೇಟಿ,  ಮೇಯರ್‌ ವೈದ್ಯಕೀಯ ನಿಧಿಗೆ ತಾತ್ಕಾಲಿಕ ತಡೆ ನೀಡಿರುವುದು ಸೇರಿದಂತೆ ಕೆಲವು ಮಾರ್ಪಾಡು ಮಾಡಿಕೊಳ್ಳಲಾಗಿದೆ.

ಅಲ್ಲದೆ, ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ವಿವಿಧ ವಿಭಾಗಗಳನ್ನು ಸಂಪರ್ಕಿಸುವ ಹೆಚ್ಚುವರಿ ಗೇಟ್‌ಗಳನ್ನು  ಮುಚ್ಚಲಾಗಿದ್ದು, ಒಂದೇ ಗೇಟ್‌ನ ಮೂಲಕ ಎಲ್ಲರು ಪ್ರವೇಶಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಮುಖ್ಯ ಕಟ್ಟಡಗಳನ್ನು ಪ್ರವೇಶಿಸುವವರನ್ನು ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿದೆ. ಅಗತ್ಯ ಮೀಟಿಂಗ್‌ಗಳನ್ನು ಮಾತ್ರ  ಮಾಡಲಾಗುತ್ತಿದೆ. ಸಾರ್ವಜನಿಕರೊಂದಿಗೆ ವ್ಯವಹರಿಸುವಾಗ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇದರ ಹೊರತಾಗಿಯೂ ಆತಂಕ ಕಡಿಮೆಯಾಗಿಲ್ಲ.

ಮಗಳ ಪ್ರಶ್ನೆಗೆ ಉತ್ತರಿಸಲಾಗುತ್ತಿಲ್ಲ!: ಪಾಲಿಕೆ ಸದಸ್ಯ ಇಮ್ರಾನ್‌ಪಾಷಾ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಅವರು ಅನುಭವಿಸುತ್ತಿರುವ  ನೋವನ್ನು ಉದಯವಾಣಿಯೊಂದಿಗೆ ಹಂಚಿಕೊಂಡಿದ್ದಾರೆ. “ಕಳೆದ ಒಂದು ವಾರದಿಂದ ಕ್ವಾರಂಟೈನ್‌ನಲ್ಲಿ ಇದ್ದೇನೆ. ಕ್ವಾರಂಟೈನ್‌ಗೆ ಒಳಗಾಗುವ ಮುನ್ನವೂ ಮನೆಯಲ್ಲೂ ಮಾಸ್ಕ್ ಹಾಕಿಕೊಂಡು ಇರುತ್ತಿದ್ದೆ. ಅಪ್ಪಾ ಇನ್ನು ಎಷ್ಟು  ದಿನ ಮನೆಗೆ ಬರುವುದಕ್ಕೆ ಎಂದು ಮಗಳು ಕೇಳುವ ಪ್ರಶ್ನೆಗೆ ಉತ್ತರಿಸಲಾಗುತ್ತಿಲ್ಲ” ಎಂದು ನೋವು ತೋಡಿಕೊಂಡರು.

ಅವ್ಯವಸ್ಥೆ ಬದಲಾಗುತ್ತಿಲ್ಲ: ಆಡಳಿತ ವಲಯದಲ್ಲಿಯೂ ಕೋವಿಡ್‌ 19 ಆತಂಕ ಕಾಣಿಸಿಕೊಂಡ ಮೇಲೂ ಬಿಬಿಎಂಪಿ, ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಕಚೇರಿಗಳ ಸಿಬ್ಬಂದಿಗೆ ನೆರವಾಗುವ ನಿಟ್ಟಿನಲ್ಲಿ ಆಯಾ ಸಂಸ್ಥೆಗಳು ಯೋಜನೆ  ರೂಪಿಸಿಕೊಂಡಿಲ್ಲ. ಕೆಲವು ಅಧಿಕಾರಿಗಳು ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರಾದರೂ ಇದು ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗುತ್ತಿಲ್ಲ. ಇನ್ನು ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ನಿತ್ಯ ಸಚಿವರು ಸೇರಿದಂತೆ ಅಧಿಕಾರಿಗಳು ಸಭೆ  ಸೇರುತ್ತಲ್ಲೇ ಇದ್ದಾರೆ.

ಈ ವೇಳೆ ಸರ್ಮಪಕವಾಗಿ ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳುತ್ತಿಲ್ಲ. ಮುಖ್ಯವಾಗಿ ಈ ಕಚೇರಿಗಳಿಗೆ ನಿತ್ಯ ಯಾರು ಬಂದು ಹೋಗುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹ  ಮಾಡಿಕೊಳ್ಳುತ್ತಿಲ್ಲ. ಹೀಗಾಗಿ, ಕೋವಿಡ್‌ 19 ಆತಂಕ ಹೆಚ್ಚುತ್ತಲೇ ಇದೆ. ಈ ಮಧ್ಯೆ ಕ್ವಾರಂ ಟೈನ್‌ಗೆ ಒಳಗಾಗುವ ಸಿಬ್ಬಂದಿಗೆ ಸೂಕ್ತ ವಾಹನ ವ್ಯವಸ್ಥೆ ಕಲ್ಪಿಸದ ಆರೋ ಪವೂ ಇದೆ. ಕ್ವಾರಂಟೈನ್‌ ಬಗ್ಗೆಯೂ ದೂರುಗಳು ಕೇಳಿಬರುತ್ತಿವೆ.

ಟಾಪ್ ನ್ಯೂಸ್

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

ಡೆಂಗ್ಯೂ ಪ್ರಕರಣ ಭಾರೀ ಏರಿಕೆ : ಇಂದು ರಾಷ್ಟ್ರೀಯ ಡೆಂಗ್ಯೂ ದಿನ

ಡೆಂಗ್ಯೂ ಪ್ರಕರಣ ಭಾರೀ ಏರಿಕೆ : ಇಂದು ರಾಷ್ಟ್ರೀಯ ಡೆಂಗ್ಯೂ ದಿನ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

khadar

ನವ ಸಮಾಜ ನಿರ್ಮಾಣದ ಕಾರಣಕರ್ತರಾಗಿ: ಖಾದರ್‌

1

2.08 ಲಕ್ಷ ಕ್ವಿಂಟಲ್‌ ಕಡಲೆ ಖರೀದಿ

bottadka

ಕಡಬ:ಬೊಟ್ಟಡ್ಕದಲ್ಲಿ ಆಗಬೇಕಿದೆ ರೈಲ್ವೇ ಅಂಡರ್‌ಪಾಸ್‌

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.