ಗುಣಮುಖ ಏರಿಕೆಗೆ ಮಾಹಿತಿ ಸಂಗ್ರಹ ಕಾರಣ? ಬಿಬಿಎಂಪಿಯಿಂದ ಗಂಭೀರವಾಗಿ ಮಾಹಿತಿ ಸಂಗ್ರಹ

ವಲಯ ಮಟ್ಟದ ಕಮಾಂಡ್‌ ಸೆಂಟರ್‌ಗಳೂ ಸಕ್ರಿಯ

Team Udayavani, Aug 6, 2020, 10:30 AM IST

ಗುಣಮುಖ ಏರಿಕೆಗೆ ಮಾಹಿತಿ ಸಂಗ್ರಹ ಕಾರಣ? ಬಿಬಿಎಂಪಿಯಿಂದ ಗಂಭೀರವಾಗಿ ಮಾಹಿತಿ ಸಂಗ್ರಹ

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ಕಳೆದ ಒಂದು ವಾರದಿಂದ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದಕ್ಕೆ ಸೋಂಕಿನಿಂದ ಮುಕ್ತರಾದವರ ಮಾಹಿತಿಯನ್ನೂ ಪಾಲಿಕೆ ಗಂಭೀರವಾಗಿ ದಾಖಲಿಸುತ್ತಿರುವುದು ಕಾರಣ. ಹೀಗಂತ ಹೇಳುತ್ತಿವೆ ಬಿಬಿಎಂಪಿ ಮೂಲಗಳು. ನಗರದಲ್ಲಿನ ಸೋಂಕಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಬಿಬಿಎಂಪಿಯ ಕೇಂದ್ರ ಕಚೇರಿಯಿಂದಲೇ ನಿರ್ವಹಿಸಲಾಗುತ್ತಿತ್ತು. ಇದೀಗ ವಲಯ ಮಟ್ಟದ ಕಮಾಂಡ್‌ ಸೆಂಟರ್‌ಗಳೂ ಸಕ್ರಿಯವಾಗಿವೆ. ಪರಿಣಾಮ ಕಳೆದ ಒಂದು ವಾರದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಕೋವಿಡ್‌ ಆರೈಕೆ ಕೇಂದ್ರದಲ್ಲಿದ್ದು, ಬಿಡುಗಡೆಯಾದವರು
ಹಾಗೂ ಹೋಂ ಐಸೋಲೇಷನ್‌ನಲ್ಲಿದ್ದು, 17 ದಿನ ಪೂರ್ಣಗೊಳಿಸಿದವರಿಗೆ ಕರೆ ಮಾಡಿ, ಅವರು ಗುಣಮುಖರಾದರೇ ಎಂದು ವಿಚಾರಿಸಿಕೊಂಡು ಬುಲೆಟಿನ್‌ ನೀಡಲಾಗುತ್ತಿದೆ.

ಈ ಹಿಂದೆ ಆಸ್ಪತ್ರೆಗಳಿಂದ ಬಿಡುಗಡೆಯಾದವರ ಸಂಖ್ಯೆ ಮಾತ್ರ ದಾಖಲಾಗುತ್ತಿತ್ತು. ಕಳೆದ ಎರಡು ತಿಂಗಳಿಂದ ನಗರದಲ್ಲಿ ಜನ ಹೋಂ ಐಸೋಲೇಷನ್‌ಗೆ
ಆದ್ಯತೆ ನೀಡುತ್ತಿದ್ದು, ಈ ಸಂಖ್ಯೆಯನ್ನು ದಾಖಲಿಸುವಲ್ಲಿ ಪಾಲಿಕೆ ಗಮನಹರಿಸಿರಲಿಲ್ಲ. ಇದೀಗ ಇವರ ಸಂಖ್ಯೆಯನ್ನೂ ದಾಖಲಿಸುತ್ತಿದೆ ಎಂದು ಹೆಸರು
ಹೇಳಲಿ ಚ್ಛಿಸದ ಬಿಬಿಎಂಪಿಯ ಆರೋಗ್ಯಾಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಸೋಂಕಿತರ ಸಂಖ್ಯೆ 64,881ಕ್ಕೆ ಏರಿಕೆ: ನಗರದಲ್ಲಿ ಬುಧುವಾರ 1,848 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 64,881ಕ್ಕೆ ಏರಿಕೆಯಾಗಿದೆ. ಇನ್ನು ಕೋವಿಡ್ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ನಗರದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗುತ್ತಿದೆ. ಕಳೆದ ಒಂದು ವಾರದಲ್ಲಿ ಕೊರೊನಾ ಸೋಂಕಿನಿಂದ ಗುಣ  ಮುಖರಾಗುವವರ ಸಂಖ್ಯೆ ನಿತ್ಯ ಏರಿಕೆಯಾಗುತ್ತಿದ್ದು, ಬುಧವಾರ ಒಂದೇ ದಿನ 3,083 ಜನ ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದು, ನಗರದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 30,960ಕ್ಕೆ ಏರಿಕೆಯಾದಂತಾಗಿದೆ.

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 32,757 ಇದೆ. ಮರಣ ಪ್ರಮಾಣದಲ್ಲಿ ಇಳಿಕೆಯಾಗಿದೆಯಾದರೂ ಒಟ್ಟಾರೆ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ
ಸಂಖ್ಯೆ ಕಡಿಮೆಯಾಗಿಲ್ಲ. ಬುಧವಾರವೂ ಕೊರೊನಾ ಸೋಂಕಿನಿಂದ 29 ಜನ ಸಾವನ್ನಪ್ಪಿದ್ದು, ಇಲ್ಲಿಯವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ
1,163ಕ್ಕೆ ಏರಿಕೆಯಾದಂತಾಗಿದೆ.

ತೀವ್ರ ನಿಗಾ ಘಟಕದಲ್ಲಿ 324 ಜನ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿತ್ಯ ಕಡಿಮೆಯಾಗುತ್ತಿದ್ದರೂ, ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಗೆ ಕಡಿವಾಣ ಬಿದ್ದಿಲ್ಲ. ಕೊರೊನಾ ಸೋಂಕಿ ನಿಂದ ಸಾವನ್ನಪ್ಪುವವರ ಸಂಖ್ಯೆ 30ರ ಆಸುಪಾಸಿ ನಲ್ಲೇ ಇದೆ. ಈ ಮಧ್ಯೆ ಕೊರೊನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿರುವವರ ಸಂಖ್ಯೆಯೂ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ 324 ಜನ ದಾಖಲಾಗಿದ್ದು, ಮತ್ತಷ್ಟು ಜನ ಕೊರೊನಾ ಸೋಂಕಿಗೆ ಬಲಿಯಾಗುವ ಆತಂಕ ಎದುರಾಗಿದೆ.

ಪೀಣ್ಯ ಬಸ್‌ ನಿಲ್ದಾಣ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತನೆ ಕೊರೊನಾ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗದಂತೆ ನೋಡಿಕೊಳ್ಳಲು ನಗರದ ಪೀಣ್ಯ
ಕೆಎಸ್ಸಾರ್ಟಿಸಿ(ಬಸವೇಶ್ವರ) ನಿಲ್ದಾಣವನ್ನು ಕೋವಿಡ್‌ ಚಿಕಿತ್ಸೆ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗಿದೆ. ಬಸವೇಶ್ವರ ಬಸ್‌ ನಿಲ್ದಾಣವನ್ನು 200 ಹಾಸಿಗೆಗಳ ಸಾಮರ್ಥ್ಯದ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಚಿಕಿತ್ಸೆಗೆ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಸಲಹೆಯಂತೆ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಲಕ್ಷಣ ರಹಿತ ಮತ್ತು ಸೌಮ್ಯ ಪ್ರಕರಣಗಳನ್ನು ನಿರ್ವಹಿಸಲಾಗುತ್ತಿದೆ. ಹೀಗಾಗಿ, ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣದಲ್ಲಿ 200 ಹಾಸಿಗೆ ಸಾಮರ್ಥ್ಯದ ಕೋವಿಡ್‌ ಆಸ್ಪತ್ರೆ ಸ್ಥಾಪಿಸಲಾಗಿದ್ದು ಗುರುವಾರದಿಂದಲೇ ಕಾರ್ಯನಿರ್ವಹಿಸಲಿದೆ ಎಂದರು. ಈ ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯ ಇನ್ನೂ 100 ಹೆಚ್ಚಿಸಬಹುದು. ಈ ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನಾಲ್ಕೂ ನಿಗಮಗಳ ಸಿಬ್ಬಂದಿ ಮತ್ತು ಕುಟುಂಬದವರಿಗೆ ಶೇ.50 ಹಾಸಿಗೆಗಳನ್ನು ಒದಗಿಸಲಾಗಿದೆ. ಇಲ್ಲಿ ಅವರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದರು. ಕೆಎಸ್‌ಆರ್‌ಟಿಸಿಯ ನಾಲ್ಕು
ನಿಗಮಗಳಲ್ಲಿ 1 ಸಾವಿರ ಸಿಬ್ಬಂದಿ ಕೊರೊನಾಗೆ ತುತ್ತಾಗಿ 700 ಮಂದಿ ಗುಣಮುಖರಾಗಿದ್ದಾರೆ ಎಂದರು. ಇದೇ ವೇಳೆ ಉಪ ಮುಖ್ಯಮಂತ್ರಿಯವರು ಸಂಜೀವಿನಿ ಮೊಬೈಲ್‌ ಕ್ಲಿನಿಕ್‌ಗೆ ಚಾಲನೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕ ಸಹಾಯ ಕೇಂದ್ರ ಪ್ರಾರಂಭ ನಗರದಲ್ಲಿ 100ಕ್ಕೂ ಹೆಚ್ಚು ಹಾಸಿಗೆ ಸಾಮರ್ಥ್ಯ ಹೊಂದಿರುವ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕ ಸಹಾಯ ಕೇಂದ್ರ (ಸಿಟಿಜನ್‌ ಸರ್ವಿಸ್‌ ಸೆಂಟರ್‌) ಪ್ರಾರಂಭಿಸುವ ಸಂಬಂಧ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಅವರು ಬುಧವಾರ ಆದೇಶ ಮಾಡಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆಗಳನ್ನು ಸರ್ಕಾರಕ್ಕೆ ಬಿಟ್ಟುಕೊಡಬೇಕು. ಸರ್ಕಾರ ನಿಗದಿ ಮಾಡಿರುವಷ್ಟೇ ಶುಲ್ಕ ವಿಧಿಸಬೇಕು ಎಂಬ ನಿಯಮವಿದೆ ಯಾದರೂ, ಇದು ಪಾಲನೆಯಾಗುತ್ತಿಲ್ಲ. ಅಲ್ಲದೆ, ಸಾರ್ವಜನಿಕರಿಗೆ ಸಕಾಲದಲ್ಲಿ ಮಾಹಿತಿ ಸಿಗದೆ ಸಮಸ್ಯೆ ಯಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಹಾಯ ಕೇಂದ್ರ ಪ್ರಾರಂಭಿಸಲಾಗುತ್ತಿದ್ದು, ದಿನ 24ಗಂಟೆ ಹಾಗೂ ವಾರದ ಏಳು ದಿನ ಸಿಬ್ಬಂದಿ ಈ ಸಹಾಯ ಕೇಂದ್ರದ ಮೂಲಕ ಸಹಾಯ ಮಾಡಲಿದ್ದಾರೆ.

ಸಚಿವ ನಾಗೇಶ್‌ ಆಪ್ತರಿಗೆ ಸೋಂಕು
ಅಬಕಾರಿ ಸಚಿವ ಎಚ್‌.ನಾಗೇಶ್‌ ಅವರ ಮೂವರು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ಗನ್‌ಮೆನ್‌ ಹಾಗೂ ಆಪ್ತ ಸಹಾಯಕರಿಗೆ ಕೊರೊನಾ ಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಆಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತಮ್ಮ ಆಪ್ತ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಸಚಿವರೂ
ಹೋಂ ಕ್ವಾರಂಟೈನ್‌ ಆಗಿದ್ದಾರೆ. ಅಲ್ಲದೇ, ವಿಕಾಸ ಸೌಧದಲ್ಲಿರುವ ಅಬಕಾರಿ ಸಚಿವರ ಕೊಠಡಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ರಾಜ್ಯದಲ್ಲಿ ಗುಣಮುಖರ ಪ್ರಮಾಣ ಹೆಚ್ಚಳ
ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳು ಮೇಲುಗೈ ಸಾಧಿಸಿದ್ದು, ಸದ್ಯ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚಿದೆ. ಇದ ರೊಂದಿಗೆ 9 ದಿನಗಳಲ್ಲಿಯೇ ಅರ್ಧ ಲಕ್ಷದಷ್ಟು ಮಂದಿಗೆ ಸೋಂಕು ತಗುಲುವ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳು ಒಂದೂವರೆ ಲಕ್ಷ ಗಡಿದಾಟಿವೆ! ಬುಧವಾರ 5,616 ಮಂದಿ ಹೊಸದಾಗಿ ಸೋಂಕು ತಗುಲಿದ್ದು, ಸೋಂಕು ಚಿಕಿತ್ಸೆ ಪಡೆಯುತ್ತಿರುವವರ ಪೈಕಿ 100 ಮಂದಿ ಮೃತಪಟ್ಟಿದ್ದಾರೆ. ಜತೆಗೆ 5,407 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳು 1,51,449ಕ್ಕೆ ಸೋಂಕಿನಿಂದ ಸಾವೀಗೀದಾವರ ಸಂಖ್ಯೆ 2804ಕ್ಕೆ ಏರಿಕೆಯಾಗಿವೆ. ಪ್ರಸ್ತುತ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 74,679 ಇದ್ದು, ಸಕ್ರಿಯ ಪ್ರಕರಣಗಳು 73,958 ಇವೆ. ಅಂದರೆ, ಶೇ.49.3 ರಷ್ಟು ಗುಣಮುಖರು, ಶೇ.48.8 ರಷ್ಟು ಸಕ್ರಿಯ ಸೋಂಕಿತರು ಇದ್ದಾರೆ. ಇನ್ನು ಸೋಂಕಿತರು ಆಸ್ಪತ್ರೆ, ಕೊರೊನಾ ಕೇರ್‌ ಸೆಂಟರ್‌ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರು ವವರ ಪೈಕಿ 633 ಮಂದಿ ಆರೋಗ್ಯ ಗಂಭೀರವಾಗಿದ್ದು, ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.