
ಚಿನ್ನಾಭರಣ ಮಳಿಗೆ ದರೋಡೆ
Team Udayavani, Jun 9, 2020, 6:08 AM IST

ಬೆಂಗಳೂರು: ಚಿನ್ನಾಭರಣ ಮಳಿಗೆಯ ರೋಲಿಂಗ್ ಶೆಟರ್ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ಶಿವಾನಂದ ವೃತ್ತದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಗಜೇಂದ್ರ ಎಂಬವರಿಗೆ ಸೇರಿದ ಚಿರಾಗ್ ಆಭರಣ ಮಳಿಗೆಯಲ್ಲಿ ಘಟನೆ ನಡೆದಿದ್ದು, ಒಂದು ಕೆ.ಜಿ. ಚಿನ್ನ, 3 ಕೆ.ಜಿ. ಬೆಳ್ಳಿ, ವಜ್ರ ಸೇರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ ಎಂದು ಪೊಲೀಸರು ಹೇಳಿದರು.
ಭಾನುವಾರ ತಡರಾತ್ರಿ ಎರಡು ಗಂಟೆ ಸುಮಾರಿಗೆ ಚಿನ್ನಾಭರಣ ಮಳಿಗೆಯ ರೋಲಿಂಗ್ ಶೆಟರ್ ಅನ್ನು ಗ್ಯಾಸ್ ಕಟರ್ ನಿಂದ ಕತ್ತರಿಸಿ, ಒಳ ನುಗ್ಗಿರುವ ಕಳ್ಳರು, ಅಂಗಡಿಯಲ್ಲಿರುವ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಿಸಿ ಕ್ಯಾಮೆರಾ ಒಡೆದು ಹಾಕಿದ್ದು, ವೈರ್ ಕತ್ತರಿಸಿ, ಹಾರ್ಡ್ ಡಿಸ್ಕ್ ಧ್ವಂಸ ಮಾಡಿದ್ದಾರೆ. ಮುಖ್ಯ ಲಾಕರ್ ಒಡೆಯಲು ಸಾಧ್ಯವಾಗಿಲ್ಲ. ಕೊನೆಗೆ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಮಳಿಗೆಯ ಸಿಸಿಕ್ಯಾಮೆರಾದಲ್ಲಿ ಇಬ್ಬರು ಆರೋಪಿಗಳು ಹೊರಗೆ ಭದ್ರತೆಯಲ್ಲಿದ್ದು, ಇತರರು ಒಳಗೆ ನುಗ್ಗಿರುವುದು ಗೊಚರಿಸಿದೆ. ಸ್ಥಳಕ್ಕೆ ಧಾವಿಸಿದ ಹೈಗ್ರೌಂಡ್ಸ್ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚುಗಾರರ ತಂಡದ ಜತೆ ಪರಿಶೀಲಿಸಿದ್ದಾರೆ. ಬಳಿಕ ಗಜೇಂದ್ರ ಅವರು ನೀಡಿದ ದೂರಿನ ಅನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
