Kidnap case: ತಾಯಿಯಿಂದಲೇ ಮಗಳ ಅಪಹರಣ?

ಪುತ್ರಿ ನನ್ನ ಬಳಿ ಇದ್ದಾಳೆಂದು ಸ್ಪಷ್ಟನೆ ನೀಡಿದ ಮಾಲೀಕನ ಮಾಜಿ ಪತ್ನಿ

Team Udayavani, Jan 5, 2024, 9:29 AM IST

4-kidnap-case

ಬೆಂಗಳೂರು: ಅಂಗಡಿಗೆ ಕೆಲಸಕ್ಕೆ ಸೇರಿದ್ದ ಯುವಕನೊಬ್ಬ ಮಾಲೀಕನ ಮೂರು ವರ್ಷದ ಮಗಳನ್ನು ಅಪಹರಿಸಿ ರುವ ಘಟನೆ ಬಸವನಗುಡಿ ಯಲ್ಲಿ ನಡೆದಿದೆ.

ಈ ಸಂಬಂಧ ಬನಶಂಕರಿ ನಿವಾಸಿ, ಮಗುವಿನ ತಂದೆ ಶಫಿವುಲ್ಲಾ ಎಂಬವರು ಬನಶಂಕರಿ ಪೊಲೀಸ್‌ ಠಾಣೆಗೆ ವಾಸೀಂ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಮಗು ಪತ್ತೆಯಾಗಿದ್ದು, ತಾಯಿ ಬಳಿ ಇದೆ ಎಂಬುದು ಗೊತ್ತಾಗಿದೆ. ಕೌಟುಂಬಿಕ ವಿಚಾರವಾಗಿ ಮಗುವಿನ ತಾಯಿಯೇ ವಾಸೀಂ ಎಂಬಾತನ ಮೂಲಕ ಕರೆಸಿಕೊಂಡಿದ್ದಾಳೆ ಎಂಬುದು ಪತ್ತೆಯಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ನಗರದಲ್ಲಿ ಪೀಠೊಪಕರಣಗಳ ಅಂಗಡಿ ನಡೆಸುತ್ತಿರುವ ಶಫಿವುಲ್ಲಾ 2015ರಲ್ಲಿ ಮದುವೆಯಾಗಿದ್ದು, ದಂಪ ತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ಶಫಿವುಲ್ಲಾ ದಂಪತಿ ವೈಯಕ್ತಿಕ ಕಾರಣಗಳಿಗೆ 3 ವರ್ಷಗಳ ಹಿಂದೆ ವಿಚ್ಛೇ ದನ ಪಡೆದುಕೊಂಡಿದ್ದಾರೆ. ಶಫಿವುಲ್ಲಾ ಮಗಳ ಜತೆ ಬನಶಂಕರಿಯಲ್ಲಿ ವಾಸವಾಗಿದ್ದಾರೆ. ಪತ್ನಿ ಬೇರೆಡೆ ವಾಸವಾಗಿದ್ದಾರೆ.

ಈ ಮಧ್ಯೆ ಒಂದೂವರೆ ವರ್ಷಗಳ ಹಿಂದೆ ಶಫಿವುಲ್ಲಾ ಅವರ ಪೀಠೊಪಕರಣಗಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಾಸೀಂ, ಕೆಲ ತಿಂಗಳಿಂದ ಕೆಲಸ ಬಿಟ್ಟಿದ್ದ. ಆದರೆ, ಕಳೆದ ಡಿ.28ರಂದು ಅಂಗಡಿ ಬಳಿ ಬಂದ ವಾಸೀಂ, ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಕೇಳಿದ್ದಾನೆ. ಅದಕ್ಕೆ ಒಪ್ಪಿದ ಶಫಿವುಲ್ಲಾ ಇಂದಿನಿಂದಲೇ ಕೆಲಸ ಮಾಡುವಂತೆ ಸೂಚಿಸಿ, ಹೊರಗಡೆ ಹೋಗಿದ್ದಾರೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ವಾಸೀಂ, ಶಫಿವುಲ್ಲಾರ ಮಗಳನ್ನು ಚಾಕೊಲೇಟ್‌ ಆಸೆ ತೋರಿಸಿ ಕರೆದೊಯ್ದಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ವಾಸೀಂ, ಆ ಮಗುವನ್ನು ಶಫಿವುಲ್ಲಾರ ಮಾಜಿ ಪತ್ನಿಗೆ ಒಪ್ಪಿಸಿದ್ದಾನೆ ಎಂಬುದು ಗೊತ್ತಾಗಿದೆ. ಆಕೆಯನ್ನು ವಿಚಾರಣೆ ನಡೆಸಿದಾಗ ಮಗುವಿನ ಮೇಲೆ ತನಗೂ ಹಕ್ಕಿದೆ. ಹೀಗಾಗಿ ಆಕೆ ನನ್ನ ಬಳಿಯೇ ಇದ್ದಾಳೆ ಎಂದು ಹೇಳಿಕೆ ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

————————————-

ತಾಯಿಯಿಂದಲೇ ಅಪ್ರಾಪ್ತ ಪುತ್ರಿ ಮದುವೆ: ಕೇಸು ದಾಖಲು

ಬೆಂಗಳೂರು: ಅಪ್ರಾಪ್ತ ಪುತ್ರಿಗೆ ತನ್ನ ಸಹೋದರನ ಜತೆ ಬಾಲ್ಯ ವಿವಾಹ ಮಾಡಿಸಿದ ಆರೋಪದಡಿ ಸಂತ್ರಸ್ತೆಯ ತಾಯಿ ಹಾಗೂ ಆಕೆಯ ಸೋದರಮಾವನ ವಿರುದ್ಧ ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್‌.ಆರ್‌.ನಗರದಲ್ಲಿರುವ ದೇವಾಲಯದಲ್ಲಿ 16 ವರ್ಷದ ಪುತ್ರಿಗೆ ಆಕೆಯ ತಾಯಿಯೇ ತನ್ನ ಸಹೋದರನ ಜತೆ 2023ರ ಡಿ.4ರಂದು ಮದುವೆ ಮಾಡಿಸಿದ್ದಾಳೆ. ಆದರೆ, ಈ ಮದುವೆಗೆ ಸಂತ್ರಸ್ತೆ ಒಪ್ಪಿಗೆ ನೀಡಿರಲಿಲ್ಲ. ಆದರೂ, ಬಲವಂತದಿಂದ ಮದುವೆ ಮಾಡಿಸಲಾಗಿದೆ. ಅಲ್ಲದೆ, ಆರೋಪಿ, ಸಂತ್ರಸ್ತೆ ಜತೆ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಈ ವಿಚಾರವನ್ನು ಸಂತ್ರಸ್ತೆ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದಳು.

ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಸಂತ್ರಸ್ತೆ ತಾಯಿ ಹಾಗೂ ಮಾವನ ವಿರುದ್ಧ ಪೋಕೊÕà ಹಾಗೂ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.