ಎಂಟಿಬಿ ಆಸ್ತಿ ಬರೋಬ್ಬರಿ 1224 ಕೋಟಿ


Team Udayavani, Jun 19, 2020, 5:01 AM IST

mtb-aasti

ಬೆಂಗಳೂರು: ವಿಧಾನ ಪರಿಷತ್‌ಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್‌ ಬರೋಬ್ಬರಿ 1224 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಜ್ರ, ಪ್ಲಾಟಿನಂ ಸೇರಿದಂತೆ ಅಪಾರ  ಪ್ರಮಾಣದ ಚಿನ್ನಾಭರಣ ಹೊಂದಿರುವುದಾಗಿಯೂ ಘೋಷಿಸಿಕೊಂಡಿದ್ದಾರೆ.

ಎಂ.ಟಿ.ಬಿ.ನಾಗರಾಜ್‌ ಅವರ ಹೆಸರಲ್ಲಿ 884 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿ ಹಾಗೂ ಪತ್ನಿ ಶಾಂತಕುಮಾರಿ ಅವರ ಹೆಸರಲ್ಲಿ 331 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ.  ಎಂ.ಟಿ.ಬಿ.ನಾಗರಾಜ್‌ ಹೆಸರಲ್ಲಿ 461 ಕೋಟಿ ರು. ಮೌಲ್ಯದ ಚರಾಸ್ತಿ, 416 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಅವರ ಪತ್ನಿ 160 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 179 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ನಾಗರಾಜ್‌  ಅವರು 52.75 ಕೋಟಿ ರೂ. ಸಾಲ ಹೊಂದಿದ್ದರೆ, ಅವರ ಪತ್ನಿ ಹೆಸರಲ್ಲಿ 1.97 ಕೋಟಿ ರೂ. ಸಾಲವಿದೆ ಎಂದು ಆಸ್ತಿ ವಿವರದಲ್ಲಿ ಘೋಷಿಸಿಕೊಂಡಿದ್ದಾರೆ. ಎಂ.ಟಿ.ಬಿ.  ಗರಾಜ್‌   2.23 ಕೋಟಿ ರೂ. ಮೌಲ್ಯದ ವಜ್ರ, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಹೊಂದಿದ್ದರೆ, ಪತ್ನಿಯ ಬಳಿ 1.48 ಕೋಟಿ. ರೂ. ಮೌಲ್ಯದ ವಜ್ರ, ಪ್ಲಾಟಿನಂ ಸೇರಿದಂತೆ ಚಿನ್ನಾಭರಣವಿದೆ. ಒಟ್ಟು 2.48 ಕೋಟಿ ರೂ. ಮೌಲ್ಯದ ಐದು ಕಾರು  ಹೊಂದಿದ್ದಾರೆ. 51.50 ಲಕ್ಷ ರೂ. ಮೌಲ್ಯದ ಲ್ಯಾಂಡ್‌ ರೋವರ್‌, 96.12 ಕೋಟಿ ರೂ. ಮೌಲ್ಯದ ಮರ್ಸಿಡಿಸ್‌ ಬೆಂಜ್‌ ಕಾರು ಸೇರಿವೆ.

ಶಂಕರ್‌ 301 ಕೋಟಿ: ವಿಧಾನಪರಿಷತ್‌ಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಆರ್‌. ಶಂಕರ್‌ ಕೂಡ ಕೋಟ್ಯಾಧೀಶರಾಗಿದ್ದು, 301.38 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಆರ್‌. ಶಂಕರ್‌  ಹೆಸರಿನಲ್ಲಿ 195 ಕೋಟಿ ರೂ. ಮೌಲ್ಯದ ಆಸ್ತಿ ಇದ್ದರೆ, ಪತ್ನಿ ಧನಲಕ್ಷ್ಮೀ ಹೆಸರಲ್ಲಿ 106 ಕೋಟಿ ರೂ. ಮೌಲ್ಯದ ಆಸ್ತಿ ಇದೆ.

ಶಂಕರ್‌ ತಮ್ಮ ಹೆಸರಲ್ಲಿ 28.90 ಕೋಟಿ ರೂ. ಮೌಲ್ಯದ ಚರಾಸ್ತಿ, 166.30 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ  ಹೊಂದಿದ್ದಾರೆ. ಪತ್ನಿ ಹೆಸರಲ್ಲಿ13.90 ಕೋಟಿ ರೂ. ಮೌಲ್ಯದ ಚರಾಸ್ತಿ, 82.25 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಆರ್‌. ಶಂಕರ್‌ 44.63 ಕೋಟಿ ರೂ. ಹಾಗೂ ಅವರ ಪತ್ನಿ 21.93 ಕೋಟಿ ರೂ. ಸಾಲ ಹೊಂದಿದ್ದಾರೆ. ಆರ್‌.ಶಂಕರ್‌  ಬಳಿ 73.72 ಲಕ್ಷ ರೂ. ಮೌಲ್ಯದ 2 ಕೆ.ಜಿ. ಚಿನ್ನವಿದೆ. ಪತ್ನಿ ಬಳಿಯೂ 2 ಕೆ.ಜಿ. ಚಿನ್ನ ಹಾಗೂ 10 ಲಕ್ಷ ರೂ.ಮೌಲ್ಯದ ವಜ್ರದ ಆಭರಣವಿದೆ ಎಂದು ವಿವರದಲ್ಲಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.