ಬಜೆಟ್‌ನಲ್ಲಿ ಉಪನಗರ ರೈಲಿಗಿಲ್ಲ ಅನುದಾನ

Team Udayavani, Feb 3, 2021, 2:09 PM IST

subsidy

ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲ್ಲಿಯೂ ಬಹುನಿರೀಕ್ಷಿತ ಉಪನಗರ ರೈಲು ಯೋಜನೆಗೆ ಅನುದಾನ ನೀಡಿರುವ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುಸು ನಿರಾಸೆ ಉಂಟುಮಾಡಿದೆ.

ರಾಜ್ಯದ ಹೊಸ ಮಾರ್ಗಗಳಿಗೆ 1,256 ಕೋಟಿ ರೂ. ಹಾಗೂ ಜೋಡಿ ಮಾರ್ಗಗಳ ನಿರ್ಮಾಣಕ್ಕೆ 1,318 ಕೋಟಿ ರೂ. ಮೀಸಲಿಡಲಾಗಿದೆ. ಇದರಲ್ಲಿ ನಗರದ ಕಂಟೋನ್ಮೆಂಟ್‌-ವೈಟ್‌ ಫೀಲ್ಡ್‌ ನಡುವೆ ನಿರ್ಮಿಸಲಿರುವ ಚತುಷ್ಪಥ ರೈಲ್ವೆ ಮಾರ್ಗವೂ ಸೇರಿದೆ. ಜತೆಗೆ ಕೆ-ರೈಡ್‌ (ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ)ಗೆ ವಹಿಸಲಾದ ಎರಡು ಜೋಡಿ ಮಾರ್ಗಗಳ ಅಭಿವೃದ್ಧಿಗೆ 151 ಕೋಟಿ ರೂ. ನೀಡಲಾಗಿದೆ.

ಉಪನಗರ ಯೋಜನೆ ಕುರಿತು ಮಾತ್ರ ಎಲ್ಲಿಯೂ ಸೂಚಿಸಿಲ್ಲ. 148.17 ಕಿ.ಮೀ. ಉದ್ದದ ಉಪನಗರ ರೈಲು ಮಾರ್ಗವು ಸುಮಾರು 16,000 ಕೋಟಿ ಮೊತ್ತದಲ್ಲಿ ನಿರ್ಮಿಸಲಾಗು ತ್ತಿದ್ದು, ಯೋಜನೆಯನ್ನು ನಾಲ್ಕು ಹಂತಗಳಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಕೆಎಸ್‌ಆರ್‌ನಿಂದ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇದು ಸಂಪರ್ಕ ಕಲ್ಪಿಸಲಿದೆ. 2020ರ ನವೆಂಬರ್‌ನಲ್ಲಿ ಕೇಂದ್ರದ ಸಚಿವ ಸಂಪುಟದಿಂದ ಅನುಮೋದನೆ ದೊರಕಿತ್ತು. ಕಳೆದ ಬಾರಿ ಬಜೆಟ್‌ನಲ್ಲಿ ಯೋಜನೆಗಾಗಿ ಹತ್ತು ಕೋಟಿ ರೂ. ನೀಡಲಾಗಿತ್ತು.

ಸಂಚಾರದಟ್ಟಣೆ ನಿವಾರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸಲಿರುವ ಉಪನಗರ ರೈಲು ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ ಶೇ. 80ರಷ್ಟು ರೈಲ್ವೆ ಇಲಾಖೆಯಿಂದ ಲಭ್ಯವಾಗಲಿದ್ದು, ಉಳಿದ ಶೇ. 20ರಷ್ಟು ಅಂದರೆ ಅಂದಾಜು 103 ಎಕರೆ ಯಷ್ಟು ಭೂಮಿಯನ್ನು ಖಾಸಗಿಯವರಿಂದ ಸ್ವಾಧೀನ ಪಡಿಸಿಕೊಳ್ಳಬೇಕಿದೆ. ಈ ಮಧ್ಯೆ ಕೆ-ರೈಡ್‌ನಿಂದ ಮಣ್ಣಿನ ಪರೀಕ್ಷೆ, ಟೆಂಡರ್‌ ಪ್ರಕ್ರಿಯೆ ಸೇರಿದಂತೆ ಹಲವು ಕಾರ್ಯಗಳು ಪ್ರಗತಿಯಲ್ಲಿವೆ. ಈ ಸಂದರ್ಭದಲ್ಲಿ ಯೋಜನೆ ಪ್ರಗತಿಗೆ ಕನಿಷ್ಠ 100 ಕೋಟಿ ರೂ.ಗಳಾದರೂ ನೀಡಬೇಕಿತ್ತು. ಆದರೆ, ರೈಲ್ವೆ ಪಿಂಕ್‌ ಬುಕ್‌ನಲ್ಲಿ ಎಲ್ಲಿಯೂ ಹಣ ನೀಡಿರುವುದು ಕಂಡುಬಂದಿಲ್ಲ. ಇದು ಪ್ರಗತಿಗೆ ಹಿನ್ನಡೆ ಉಂಟಾಗಬಹುದು ಎಂದು ನಗರ ರೈಲು ತಜ್ಞ ಸಂಜೀವ್‌ ದ್ಯಾಮಣ್ಣವರ ಬೇಸರ ವ್ಯಕ್ತಪಡಿಸಿದರು.

“ಉಪನಗರ ರೈಲು ಯೋಜನೆಗೆ ಈ ವರ್ಷ ಅನುದಾನದ ಅವಶ್ಯಕತೆ ಇಲ್ಲ. ಈಗಾಗಲೇ ಹಣ ಲಭ್ಯವಿದೆ. ಇನ್ನು ರಾಜ್ಯ ಸರ್ಕಾರದಿಂದಲೂ ನೀಡಲಾಗುತ್ತಿದೆ. ಹಾಗಾಗಿ, ಸಮಸ್ಯೆ ಆಗದು’ ಎಂದು ಸಂಸದ ಪಿ.ಸಿ. ಮೋಹನ್‌ “ಉದಯವಾಣಿ’ಗೆ ಸ್ಪಷ್ಟಪಡಿಸಿದರು.

ಅಂದ ಹಾಗೆ ಉದ್ದೇಶಿತ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ತಲಾ ಶೇ. 20ರಷ್ಟು ಅನುದಾನ ಒದಗಿಸಲಿದ್ದು, ಉಳಿದ ಶೇ. 60ರಷ್ಟು ಮೊತ್ತವನ್ನು ಸಾಲಗಳಿಂದ ಹೊಂದಿಸಿಕೊಳ್ಳುವ ಹೊಣೆ ಕೆ-ರೈಡ್‌ ಮೇಲಿದೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.