ಪಾದರಾಯನಪುರ ಗಲಾಟೆ: ಆರೋಪಿಗಳಿಗೆ ಜಾಮೀನು
Team Udayavani, May 30, 2020, 5:44 AM IST
ಬೆಂಗಳೂರು: ಪಾದರಾಯನಪುರದಲ್ಲಿ ಕೋವಿಡ್ 19 ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸರು ಹಾಗೂ ಬಿಬಿಎಂಪಿ ಆರೋಗ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 126 ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ ಜಾಮೀನು ನೀಡಿದೆ.
ಜಾಮೀನು ಕೋರಿ ವಜೀರ್ ಖಾನ್ ಸೇರಿದಂತೆ 126 ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ಅರ್ಜಿಯನ್ನು ಮಾನ್ಯ ಮಾಡಿ, ಷರತ್ತಿನ ಜಾಮೀನು ನೀಡಿ ಆದೇಶಿಸಿತು. ಜಾಮೀನು ಪಡೆದ ಎಲ್ಲಾ ಆರೋಪಿಗಳಿಗೂ ಕೋವಿಡ್-19 ಪರೀಕ್ಷೆ ನಡೆಸಬೇಕು.
ಕೋವಿಡ್ 19 ಪಾಸಿಟಿವ್ ಇದ್ದವರಿಗೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಬೇಕು. ಉಲ್ಲಂ ಸಿದರೆ ಜಾಮೀನು ರದ್ದುಗೊಳ್ಳಲಿದೆ. ಅಲ್ಲದೇ ಆರೋಪಿಗಳು 1 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಶ್ಯೂರಿಟಿ ಒದಗಿಸಬೇಕು ಎಂದು ಆದೇಶಿಸಿದೆ. ಕೋವಿಡ್-19 ತಪಾಸಣೆಗೆ ಹೋದಾಗ ಗಲಾಟೆ ನಡೆದು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಏ.19ರಂದು ಜೆಜೆಆರ್ ನಗರ ಠಾಣೆ ಪಿಎಸ್ಐ ದೂರು ನೀಡಿದ್ದರು.
ಆರೋಪಿಗಳ ವಿರುದ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾ ಗಿತ್ತು. ಸಿಟಿ ಸಿವಿಲ್ ಕೋರ್ಟ್ ಮೇ 5ರಂದು ಜಾಮೀನು ಅರ್ಜಿ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ