ಮೀನಿಗೆ ಗಾಳ ಹಾಕುವ ಸ್ಪರ್ಧೆ ಆರಂಭಿಸಲು ಸಿದ್ಧತೆ!

Team Udayavani, May 28, 2020, 5:54 AM IST

sparhe

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಅವಕಾಶವಿರುವ ಕಡೆ ನದಿ, ಹೊಳೆ, ಕೆರೆಗಳಲ್ಲಿ ಗಾಳ ಹಾಕಿ ಮೀನು ಹಿಡಿಯುವ ಪದ್ಧತಿ ಉತ್ತೇಜನಕ್ಕೆ ಅವಕಾಶ ಕಲ್ಪಿಸಲು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲು ಮೀನುಗಾರಿಕೆ  ಇಲಾಖೆ ಸಜ್ಜಾಗಿದೆ. ಪ್ರಾಯೋಗಿಕವಾಗಿ ನಗರದ ಸ್ಯಾಂಕಿ ಕೆರೆಯಲ್ಲಿ ತಿಂಗಳಲ್ಲಿ ಗಾಳ ಹಾಕುವ ವ್ಯವಸ್ಥೆಗೆ ಅವಕಾಶ ಕಲ್ಪಿಸಲು ಸಿದ್ಧತೆ ನಡೆಸಿದೆ. ಈ ಪ್ರಯೋಗ  ಯಶಸ್ವಿಯಾದರೆ ನಗರದ ಆಯ್ದ ಕೆರೆ ಸೇರಿದಂತೆ ರಾಜ್ಯದ ಇತರೆಡೆಯೂ  ಹಂತ ಹಂತವಾಗಿ ವಿಸ್ತರಿಸಿ ಕ್ರೀಡಾ ಮೀನುಗಾರಿಕೆಯನ್ನು ಉತ್ತೇಜಿಸಲು ಸಿದ್ಧತೆ ನಡೆಸಿದೆ.

ಈ ಹವ್ಯಾಸ ಮೊದಲಿನಿಂದಲೂ ಇದ್ದು, ಕೆರೆ, ಹೊಳೆಗಳಿಗೆ ಕಲುಷಿತ ನೀರು ಸೇರ್ಪಡೆಯಿಂದ ಈ ಹವ್ಯಾಸಿ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿವೆ. ಇದೀಗ ಮತ್ತೆ ಈ ಪದ್ಧತಿಯನ್ನು  ಪ್ರೋತ್ಸಾಹಿಸಲು ಇಲಾಖೆ ಮುಂದಾಗಿದೆ. ರಾಜ್ಯದ ನದಿ, ಹೊಳೆ, ಕೆರೆಗಳ ಪೈಕಿ ಆಯ್ದ ಕಡೆ ಇಲಾಖೆಯಿಂದಲೇ ಗಾಳ ಹಾಕುವ ಪದ್ಧತಿಗೆ ಅವಕಾಶ ಕಲ್ಪಿಸುವುದು. ಈಗಾಗಲೇ  ಕೆರೆಗಳನ್ನು ಸ್ಥಳೀಯ ಟ್ರಸ್ಟ್‌ ಇಲ್ಲವೇ ಯಾವುದಾದರೂ ಸಂಸ್ಥೆಗೆ ನಿರ್ವಹಣೆಗೆ ನೀಡಿದ್ದರೂ ಅದರಲ್ಲಿ ಗಾಳ ಹಾಕುವ ಪದ್ಧತಿಗೆ ಅವಕಾಶ ಒದಗಿಸುವುದು.

ಆ ಮೂಲಕ ಪ್ರವಾಸಿಗರನ್ನು ಆಕರ್ಷಿಸುವ ಜತೆಗೆ ಕ್ರೀಡಾ ಮೀನುಗಾರಿಕೆ ಉತ್ತೇಜಿಸುವುದು ಯೋಜನೆಯ ಉದ್ದೇಶವಾ ಗಿದೆ ಎಂದು ಇಲಾಖೆ ಮೂಲಗಳು ಹೇಳಿವೆ. ಗಾಳ ಹಾಕುವ ಪದ್ಧತಿಯಡಿ ಹಿಡಿದ ಮೀನು  ಗಳನ್ನು ಮತ್ತೆ ವಾಪಸ್‌ ನೀರಿಗೆ ಬಿಡಬೇಕು. ಇಲ್ಲವೇ ಹಿಡಿದವರೇ ಶುಲ್ಕ ಪಾವತಿಸಿ ಕೊಂಡೊಯ್ಯಲು ಅವಕಾಶ ನೀಡಬೇಕೆ. ಶುಲ್ಕ ವ್ಯವಸ್ಥೆ ಹೇಗಿರಬೇಕು. ಅಗತ್ಯವಿರುವ ಕಡೆ ಇಲಾಖೆಯಿಂ ದಲೇ ಮೀನುಗಳನ್ನು ಒದಗಿಸುವುದು.

ಸಮಯದಲ್ಲಿ ಅವಕಾಶ ನೀಡಬೇಕು. ಸ್ಥಳೀಯ ಪರಿಸರಕ್ಕೆ ಹಾನಿಯಾಗದಂತೆ  ವಹಿಸಬೇಕಾದ ಎಚ್ಚರಿಕೆಗಳೇನು ಎಂಬುದು ಸೇರಿದಂತೆ ಇತರೆ ಅಂಶಗಳ ಬಗ್ಗೆ ಚರ್ಚಿಸಿ ಇನ್ನಷ್ಟೇ ತೀರ್ಮಾನ ಕೈಗೊಳ್ಳಬೇಕಿದೆ ಎಂದು ತಿಳಿಸಿವೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರ   ಗಳಲ್ಲಿ ಕೆರೆಗಳಿಗೆ ಒಳಚರಂಡಿ ನೀರು  ರ್ಪಡೆಯಿಂ  ದ ಎಲ್ಲ ಕಡೆ ಗಾಳ ಹಾಕುವ ಪದ್ಧತಿ ವ್ಯವಸ್ಥೆ ಕಲ್ಪಿಸುವುದು ಕಷ್ಟ ಸಾಧ್ಯ.

ಚರಂಡಿ ನೀರು ಸೇರ್ಪಡೆ ಪ್ರಮಾಣ ಮಿತಿ ಯೊಳಗಿದ್ದರೆ ಅವಕಾಶ ಕಲ್ಪಿಸಬಹುದು. ಈ ಬಗ್ಗೆ ಪರಿಶೀಲನೆ ನಡೆಸಿಯೇ ಅವಕಾಶ ನೀಡಲಾಗುತ್ತದೆ.  ಆದರೆ ಸಂರಕ್ಷಿತ ಕರೆ, ಪ್ರದೇಶಗಳಲ್ಲಿನ ಜಲ ಮೂಲಗಳಿರುವ ಕಡೆ ಈ ಚಟುವಟಿಕೆಗೆ  ಅವಕಾಶ ನೀಡುವುದಿಲ್ಲ ಎಂದು ಹೇಳಿವೆ.

ಕ್ರೀಡಾ ಮೀನುಗಾರಿಕೆಯನ್ನು ಉತ್ತೇಜಿಸುವ ಸಲುವಾಗಿ ರಾಜ್ಯದ ನದಿ, ಹೊಳೆ, ಕೆರೆಗಳ ಪೈಕಿ ಸಾಧ್ಯವಿರುವ ಕಡೆ ಗಾಳ ಹಾಕಿ ಮೀನು ಹಿಡಿಯಲು ಹಾಗೂ ಸ್ಪರ್ಧೆಗಳ ಆಯೋಜನೆಗೆ ಅವಕಾಶ ನೀಡುವ ಬಗ್ಗೆ ಚರ್ಚಿಸಲಾಗಿದೆ. ಬೆಂಗಳೂರಿನ  ಸ್ಯಾಂಕಿ ಕೆರೆ,  ಹಲಸೂರು ಕೆರೆ ಸೇರಿದಂತೆ ಆಯ್ದ ಕೆರೆಗಳು ಹಾಗೂ ರಾಜ್ಯದ ಇತರೆಡೆಯೂ ಅವಕಾಶ ಕಲ್ಪಿಸಲು ಚಿಂತಿಸಲಾಗಿದ್ದು, ಸದ್ಯದಲ್ಲೇ ಇದಕ್ಕೆ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುವುದು. ಸದ್ಯದಲ್ಲೇ ಪ್ರಾಯೋಗಿಕವಾಗಿ ಸ್ಯಾಂಕಿ  ಕೆರೆಯಲ್ಲಿ ಚಾಲನೆ ನೀಡಲು ಚಿಂತಿಸಲಾಗಿದೆ. 
-ಕೋಟ ಶ್ರೀನಿವಾಸ ಪೂಜಾರಿ, ಸಚಿವ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.