ಕೋವಿಡ್‌ ಚಿಕಿತ್ಸೆಗೆ ಏಕರೂಪ ದರ: ಸುಧಾಕರ್‌

Team Udayavani, Jun 16, 2020, 6:02 AM IST

kovid-chikitse

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್‌ ಚಿಕಿತ್ಸೆ ಪ್ರಾರಂಭಿಸಲಿದ್ದು ರಾಜ್ಯಾದ್ಯಂತ ಏಕರೂಪ (ಬೆಂಗಳೂರಿನಲ್ಲಿ ತುಸು ವ್ಯತ್ಯಯ ಸಾಧ್ಯತೆ) ದರ ನಿಗದಿಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಗೃಹ ಕಚೇರಿ “ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆ ಬಳಿಕ ಮಾತನಾಡಿ, ಕೋವಿಡ್‌ ಚಿಕಿತ್ಸೆಗೆ ನಿರಾಕರಿಸುವ ಆಸ್ಪತ್ರೆಗಳ  ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ಸಂಬಂಧಪಟ್ಟಂತೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು. ಸರ್ಕಾರವೇ ಚಿಕಿತ್ಸಾ ದರ, ಪರೀಕ್ಷಾ ಶುಲ್ಕ ಇತರೆ ಶುಲ್ಕ ನಿಗದಿಪಡಿಸಲಿದೆ. ಬೆಂಗಳೂರಿನಲ್ಲಿ ತುಸು ವ್ಯತ್ಯಯ ಹೊರತುಪಡಿಸಿದರೆ ರಾಜ್ಯಾದ್ಯಂತ ಏಕರೂಪದ ದರ ನಿಗದಿಪಡಿಸಲಾಗುವುದು. ಯಾವುದೇ ಕಾರಣಕ್ಕೂ ಸುಲಿಗೆಗೆ ಅವಕಾಶ ನೀಡಲ್ಲ. ಸುಲಿಗೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರತಿ ಖಾಸಗಿ, ಕಾರ್ಪೋರೇಟ್‌ ಆಸ್ಪತ್ರೆಗಳಲ್ಲೂ ಐಸೋಲೇಷನ್‌ ವಾರ್ಡ್‌ ಸಿದ್ಧಪಡಿಸಿ ಚಿಕಿತ್ಸೆ ನಡೆಸಲು ಮುಂದಾಗಬೇಕು ಎಂದು ಮನವಿ ಮಾಡಿದರು. ಎಬಿಎಆರ್‌ಕೆ (ಆಯುಷ್ಮಾನ್‌  ಭಾರತ್‌) ಯೋಜನೆಯಡಿಯೂ ಅನುದಾನ ಪಡೆಯುವ ರೀತಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವುದಿಲ್ಲ. ಹೀಗಾಗಿ ಬಡವರು ಕೇಂದ್ರ-ರಾಜ್ಯ  ಸರ್ಕಾರದಿಂದ ವಿಮೆ ಶುಲ್ಕ ಕೊಡಬೇಕಾಗುತ್ತದೆ.

ಎಬಿಎಆರ್‌ಕೆ ಯೋಜನೆಯನ್ನೂ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಲಾಗುವುದೆಂದರು. ಪಿಪಿಇ ಕಿಟ್‌ ಇತರೆ ಉಪಕರಣ ಖರೀದಿ  ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಎಂಡಿಎ ಹಾಗೂ ಸಿಇ ಅನುಮೋದನೆ ದೊರಕಿರುವ ಅಂತಾರಾಷ್ಟ್ರೀಯ ಗುಣಮಟ್ಟದ ಕಿಟ್‌ಗಳನ್ನೇ ಖರೀದಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ಎಲ್ಲ ಜಿಲ್ಲೆಗಳಿಗೆ ಖುದ್ದಾಗಿ ತಾನೇ  ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ.

ರಾಜ್ಯಾದ್ಯಂತ ಪ್ರತಿ ವಾರ್ಡ್‌ನ ಬೂತ್‌ ಮಟ್ಟದಲ್ಲಿ ಕಾರ್ಯಪಡೆ ರಚಿಸಲು ತೀರ್ಮಾನಿಸಲಾಗಿದೆ. ಮೊದಲು ವಾರ್ಡ್‌ ಹಂತದಲ್ಲಿ, ನಂತರ ಬೂತ್‌ ಮಟ್ಟದಲ್ಲಿ ಕಾರ್ಯಪಡೆ ರಚನೆಯಾಗಲಿದೆ.  ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಹಳ್ಳಿಯಲ್ಲಿ 3 ಮಂದಿಯ ಕಾರ್ಯಪಡೆ ರಚಿಸಲಾಗುವುದೆಂದರು. ಜನಪ್ರತಿನಿಧಿಗಳು ಸಾಮಾಜಿಕ ಅಂತರ ಮರೆತು  ಸಭೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ವೈರಾಣುವಿಗೆ ಸಾಮಾನ್ಯ  ಜನ, ಬಡವರು, ಶ್ರೀಮಂತರು ಎಂಬ ಭೇದಭಾವ ಇರುವುದಿಲ್ಲ.

ಎಲ್ಲರ ಮೇಲೂ ಸರ್ಕಾರವೇ ನಿಗಾ ಇಡಲು ಸಾಧ್ಯವಿಲ್ಲ ಮಾಸ್ಕ್ ನಮಗೆ ರಾಮಬಾಣ. ಬಳಸದವರು ಮುಂದೆ ಪರಿತಪಿಸುತ್ತಾರೆ. ಮದುವೆ ಸಮಾರಂಭಕ್ಕೆ ಅವಕಾಶವಿದ್ದು,  ಪಾಲ್ಗೊಳ್ಳುವವರ ಸಂಖ್ಯೆಗೆ ಮಿತಿ ಇದೆ. ಸಮಾರಂಭ ಮಾಡಲು ಮಾರ್ಗಸೂಚಿ ಪಾಲನೆ ಅಗತ್ಯ. ಉಲ್ಲಂ ಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಕೋವಿಡ್‌-19 ವೈರಸ್‌ ಸಾರ್ಸ್‌ಗಿಂತ ಅಪಾಯ ತರುವ  ವೈರಾಣುವಲ್ಲ.

ಆದರೂ ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರದಿಂದ ಜನ ಭಯಭೀತರಾಗಿದ್ದಾರೆ. ನಾನು ಟಿ.ವಿಗಳನ್ನು ವೀಕ್ಷಿಸುವುದನ್ನೇ ನಿಲ್ಲಿಸಿದ್ದೇನೆ ಎಂದು ವಿಷಾದದಿಂದ ಹೇಳುತ್ತೇನೆ. ನಾವು ಹಿಂದೆಲ್ಲಾ ಮಾರಣಾಂತಿಕ ರೋಗಗಳ ಮಧ್ಯೆ ಬದುಕಿದ್ದೇವೆ. ಮಳೆಗಾಲದಲ್ಲಿ ಲಕ್ಷಾಂತರ ಮಂದಿ ಡೆಂಘೀ, ಚಿಕೂನ್‌ ಗುನ್ಯಾಗೆ ತುತ್ತಾಗುತ್ತಾರೆ. ಅದೇ ರೀತಿ ಇದೂ ಒಂದು ವೈರಾಣು ಅಷ್ಟೇ. ಆದರೆ, ಮಾಧ್ಯಮಗಳಿಂದಾಗಿ ಹಳ್ಳಿಗಳಲ್ಲಿ ಜನ ಭಯಭೀತರಾಗಿದ್ದಾರೆ. ಸಣ್ಣ ಬದಲಾವಣೆ  ಮಾಡಿಕೊಂಡರೂ ನಿಯಂತ್ರಿಸ ಬಹುದಾಗಿದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ 19 ಪತ್ತೆಗೆ ದುಬಾರಿ ಶುಲ್ಕ ಸಂಗ್ರಹಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು. ಸಂಕಷ್ಟದ ಸಂದರ್ಭದಲ್ಲಿ ಸಾರ್ವಜನಿಕರಿಂದ ದುಬಾರಿ ಹಣ ಪಡೆದು ಸುಲಿಗೆ ಮಾಡಲು ಅವಕಾಶ ನೀಡದಂತೆ ಮನವಿ ಮಾಡಲಾಗುವುದು.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.