ಪ್ರಾಂಗಣದಲ್ಲಷ್ಟೇ ಬ್ರಹ್ಮ ರಥೋತ್ಸವ

ಭಕ್ತರ ಪ್ರವೇಶಕ್ಕೆ ನಿಷೇಧ-ನಿತ್ಯದ ಪೂಜಾ ವಿಧಿ-ವಿಧಾನ ನಿರಂತರ

Team Udayavani, Apr 7, 2020, 1:12 PM IST

07-April-09

ಹೊಸಪೇಟೆ: ಹಂಪಿ ವಿರೂಪಾಕ್ಷ ಸ್ವಾಮಿ ಹಾಗೂ ಪಂಪಾಂಬಿಕಾ ದೇವಿ ಕಲ್ಯಾಣ ಮಹೋತ್ಸವವನ್ನು ಸರಳವಾಗಿ ನಡೆಸಲಾಯಿತು.

ಹೊಸಪೇಟೆ: ಕೊರೊನಾ ಕರಿನೆರಳಿನಿಂದ ಏ.8 ರಂದು ನಡೆಯಬೇಕಿದ್ದ ವಿಶ್ವವಿಖ್ಯಾತ ಐತಿಹಾಸಿಕ ಹಂಪಿ ವಿರೂಪಾಕ್ಷೇಶ್ವರ ಬ್ರಹ್ಮರಥೋತ್ಸವ ಇದೇ ಮೊದಲ ಬಾರಿಗೆ ರದ್ದಾಗಿದೆ. ವಿಜಯನಗರ ಅರಸರ ಕಾಲದಿಂದಲೂ ವೈಭವದಿಂದ ನಡೆಯುತ್ತಿದ್ದ ಪುರಾಣ ಪ್ರಸಿದ್ಧ ಹಂಪಿ ಪಂಪಾ ವಿರೂಪಾಕ್ಷೇಶ್ವರ, ಚಂದ್ರಮೌಳೇಶ್ವರ ಜೋಡು ರಥೋತ್ಸವ ಇದೇ ಮೊದಲ ಬಾರಿಗೆ ರದ್ದಾಗಿದೆ ಎಂದು ಹೇಳಲಾಗುತ್ತಿದೆ. ಆದರೂ ಸಂಪ್ರದಾಯದಂತೆ ದೇವಾಲಯದ ಪ್ರಾಂಗಣದಲ್ಲೇ ಸರಳವಾಗಿ ರಥೋತ್ಸವ ನೆರವೇರಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಏ.2 ರಿಂದ ಹೋಮ, ಹವನ ಸೇರಿದಂತೆ ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತಿವೆ.

ರಥೋತ್ಸವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ವಿರೂಪಾಕ್ಷೇಶ್ವರ ಕಲ್ಯಾಣೋತ್ಸವ ನಡೆಯಿತು. ಅಲ್ಲದೆ, ಏ.10 ರಂದು ಚಕ್ರತೀರ್ಥ ಕೋದಂಡರಾಮ ಸ್ವಾಮಿ
ಕಲ್ಯಾಣೋತ್ಸವ ಹಾಗೂ ರಥೋತ್ಸವ ಕೂಡ ವಿರೂಪಾಕ್ಷೇಶ್ವರ ದೇವಾಲಯದ ಆವರಣದಲ್ಲಿ ನಡೆಯಲಿದೆ. ಕೊರೊನಾ ತಡೆಗಾಗಿ ಲಾಕ್‌ ಡೌನ್‌ ಇರುವುದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಆದರೆ ದೇವಾಲಯದಲ್ಲಿ ಎಂದಿನಂತೆ ವಿರೂಪಾಕ್ಷನಿಗೆ ತ್ರಿಕಾಲ ಪೂಜೆ, ನೈವೇದ್ಯ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿವೆ ಎಂದು ಹಂಪಿ ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿ ಪ್ರದೇಶದಲ್ಲಿ ಇರುವ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಇತರೆ ಎಲ್ಲಾ ಪುರಾತನ ದೇಗುಲಗಳಿಗೆ ಕಳೆದ ಮಾ.21 ರಿಂದ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಈ ಆದೇಶದ ಅನ್ವಯ ಪ್ರವೇಶ ದ್ವಾರವನ್ನು ಬಂದ್‌ ಮಾಡಲಾಗಿತ್ತು.
ಹಂಪಿ ಚಕ್ರತೀರ್ಥ ಕೋದಂಡರಾಮಸ್ವಾಮಿ, ಯಂತ್ರೋದ್ಧಾರಕ ಆಂಜನೇಯ, ಉದ್ದಾನವೀರಭದ್ರ ಸೇರಿದಂತೆ ಬುಕ್ಕಸಾಗರದ ಏಳುಹೆಡೆ ನಾಗಪ್ಪ, ಹೊಸೂರಮ್ಮ ದೇವಾಲಯವನ್ನು ಬಂದ್‌ ಮಾಡಲಾಗಿತ್ತು. ಆದರೆ, ಈ ದೇಗುಲಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿವೆ.

ಕೊರೊನಾ ತಡೆಗಾಗಿ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಹಂಪಿ ವಿರೂಪಾಕ್ಷನಿಗೆ ಫಲ-ಪುಷ್ಪದ ಕೊರತೆ ಎದುರಾಗಿದೆ. ವರ್ಷವಿಡಿ ನಾನಾ
ಅಲಂಕಾರದಿಂದ ಕಂಗೊಳಿಸುತ್ತಿದ್ದ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾದೇವಿ ಮತ್ತು ಭುವನೇಶ್ವರಿ ದೇವಿ ಪ್ರತಿಮೆಗೆ ಹೂವಿನ ಅಲಂಕಾರವಿಲ್ಲದೇ
ಪೂಜೆ ಸಲ್ಲಿಸಲಾಗುತ್ತಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹಂಪಿ ಬ್ರಹ್ಮರಥೋತ್ಸವ ಈ ಬಾರಿ ರದ್ದಾಗಿದೆ. ಆದರೂ ಪಂಪಾ ವಿರೂಪಾಕ್ಷೇಶ್ವರಸ್ವಾಮಿ, ಚಂದ್ರಮೌಳೇಶ್ವರ ಸ್ವಾಮಿ ಉತ್ಸವ ಮೂರ್ತಿಗಳನ್ನು ಕಿರು ರಥದಲ್ಲಿ ಪ್ರತಿಷ್ಠಾಪಿಸಿ ದೇವಾಲಯ ಪ್ರಾಂಗಣದಲ್ಲಿ ರಥೋತ್ಸವ ನೆರವೇರಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.
ಎಂ.ಎಚ್‌. ಪ್ರಕಾಶರಾವ್‌ ಕಾರ್ಯನಿರ್ವಾಹಕ ಅಧಿಕಾರಿ,
ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನ, ಹಂಪಿ

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಹೊರತಾಗಿ ದೇವಾಲಯಲ್ಲಿ
ಎಂದಿನಂತೆ ವಿರೂಪಾಕ್ಷನಿಗೆ ತ್ರಿಕಾಲ ಪೂಜೆ, ನೈವೇದ್ಯ, ವಿಶೇಷ ಪೂಜೆಗಳು ನಿರಂತರವಾಗಿ ನಡೆಯುತ್ತಿವೆ. ಅದ್ಧೂರಿ ರಥೋತ್ಸವದ ಬದಲು ದೇವಸ್ಥಾನ
ಪ್ರಾಂಗಣದಲ್ಲಿ ಸರಳವಾಗಿ ನಡೆಯಲಿದೆ.
ಶ್ರೀ ವಿದ್ಯಾರಣ್ಯ ಭಾರತಿ
ಸ್ವಾಮೀಜಿ, ವಿದ್ಯಾರಣ್ಯ ಮಠ, ಹಂಪಿ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.