ಲಾಕ್‌ಡೌನ್‌ಗೆ ಜಿಲ್ಲಾದ್ಯಂತ ಉತ್ತಮ ಸ್ಪಂದನೆ

ಜಿಲ್ಲಾಡಳಿತ-ಜಿಲ್ಲಾ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮದಿಂದ ಮನೆಯಲ್ಲೇ ಕಾಲ ಕಳೆಯುತ್ತಿರುವ ಜನ

Team Udayavani, Apr 7, 2020, 1:23 PM IST

07-April-10

ಚಿಕ್ಕಮಗಳೂರು: ಕೊರೊನಾ ವೈರಸ್‌ ತಡೆಯುವ ಉದ್ದೇಶದಿಂದ ಲಾಕ್‌ಡೌನ್‌ ವಿ ಸಲಾಗಿದ್ದು, ಲಾಕ್‌ ಡೌನ್‌ಗೆ ಸೋಮವಾರ ಜಿಲ್ಲಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮದಿಂದ ಜನರು ಮನೆಯಲ್ಲೇ ಕಾಲ ಕಳೆಯುತ್ತಿದ್ದು, ನಗರದಲ್ಲಿ ಜನಸಂಚಾರ ಸಂಪೂರ್ಣ ಕ್ಷೀಣವಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಜನ ಸಂಚಾರವನ್ನು ಹತೋಟಿಗೆ ತರಲು ನಗರದ ಪ್ರಮುಖ ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುವ ಮೂಲಕ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲಾಗುತ್ತಿದೆ. ನಗರದ ಎಂಜಿ ರಸ್ತೆ, ಮಾರ್ಕೆಟ್‌ ರಸ್ತೆ, ಐಜಿ ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಆಜಾದ್‌ ಪಾರ್ಕ್‌ ವೃತದದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಅಗತ್ಯ ವಸ್ತುಗಳ ಖರೀದಿಗೆ ಬರುವವರನ್ನು ಮಾತ್ರ ನಗರೊಳಗೆ ಬಿಡಲಾಗುತ್ತಿದೆ. ಸುಖಸುಮ್ಮನೆ ತಿರುಗಾಡುವ ಬೈಕ್‌ ಮತ್ತು ಕಾರುಗಳನ್ನು ಜಪ್ತಿ ಮಾಡಲಾಗುತ್ತಿದೆ.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಜನಜಂಗುಳಿ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರತಿ ದಿನ ಬೆಳಗ್ಗೆ 8 ಗಂಟೆಗೆ ಮಾರುಕಟ್ಟೆಯನ್ನು ತೆರೆಯಲಾಗುತ್ತಿದೆ.
ಖರೀದಿದಾರರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗುತ್ತಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಗೆ ಬೀಗಿ ಪೊಲಿಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅನುಕೂಲ ಕಲ್ಪಿಸುವ ಕೊಡುವ ಉದ್ದೇಶದಿಂದ ನಗರದ ಮಾರ್ಕೇಟ್‌ ರಸ್ತೆಯಲ್ಲಿರುವ ನಗರಸಭೆ ಮಳಿಗೆಗಳಲ್ಲಿ ಹಣ್ಣು, ತರಕಾರಿ ಮಳಿಗೆಗಳನ್ನು ತೆರೆಯಲಾಗಿದೆ.

ತರಕಾರಿ, ಹಣ್ಣು ಮಾರಾಟಕ್ಕೆ ಮೊಬೈಲ್‌ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊಬೈಲ್‌ ವಾಹನಗಳು ನಗರದ ಎಲ್ಲಾ ಬಡಾವಣೆಗಳಲ್ಲಿ ಸಂಚರಿಸುತ್ತಿವೆ. ತಳ್ಳುಗಾಡಿಗಳಲ್ಲಿ ತರಕಾರಿ ಮತ್ತು ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದ ಬೆಳೆಗಗಳನ್ನು ಹಾಪ್‌ಕಾಂಮ್ಸ್‌ ನೆರ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ.

ಜಿಲ್ಲಾಡಳಿತ ಕೈಗೊಂಡ ಬೀಗಿ ಕ್ರಮಗಳಿಂದ ನಗರದಲ್ಲಿ ಅನಾಗತ್ಯವಾಗಿ ಸಂಚರಿಸುವರಿಗೆ ಸಂಪೂರ್ಣ ಬ್ರೇಕ್‌ ಬಿದ್ದಿದ್ದು, ಹನುಮಂತಪ್ಪ ವೃತ್ತ, ಆಜಾದ್‌ ಪಾರ್ಕ್‌ ವೃತ್ತ ಸೇರಿದಂತೆ ನಗರದ ಮುಖ್ಯ ರಸ್ತೆಗಳಲ್ಲಿ ಜನಸಂಚಾರವಿಲ್ಲದೇ ಇಡೀ ನಗರವೇ ಬಿಕೋ ಎನ್ನುತ್ತಿದೆ. ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಅಗತ್ಯ ವಸ್ತುಗಳ ಸಮಸ್ಯೆಯಾಗದಂತೆ ತರಕಾರಿ ಮತ್ತು ಹಣ್ಣಿನ ಮೊಬೈಲ್‌ ಸಂಚಾರಿ ವಾಹನಗಳನ್ನು ಗ್ರಾಮೀಣ ಪ್ರದೇಶಗಳಿಗೂ ಬಿಡಲಾಗಿದೆ. ಲಾಕ್‌ಡೌನ್‌ ಪ್ರಾರಂಭಗೊಂಡ ನಂತರ ಗ್ರಾಮೀಣ ಪ್ರದೇಶದ ಜನರು ನಗರಗಳಾತ್ತ ಮುಖ ಮಾಡಲು ಹೆದರುತ್ತಿದ್ದು ಜಮೀನು ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಒಟ್ಟಾರೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಕೈಗೊಂಡ ಕಟ್ಟುನಿಟ್ಟಿನ ಕ್ರಮದಿಂದ ಜಿಲ್ಲಾದ್ಯಂತ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.