ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ


Team Udayavani, Oct 23, 2021, 8:29 PM IST

12m

ಬಳ್ಳಾರಿ: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇ. 7.5ಕ್ಕೆ ಹೆಚ್ಚಿಸಬೇಕು ಎಂದು ಡಿಸಿ ಕಚೇರಿ ಎದುರು ಎಸ್‌ಸಿ, ಎಸ್‌ಟಿ ಮಿಸಲಾತಿ ಹೋರಾಟ ಸಮಿತಿ ಹಮ್ಮಿಕೊಂಡ ಆಮರಣಾಂತ ಉಪವಾಸ ಸತ್ಯಾಗ್ರಹ ಮೂರನೇ ದಿನವೂ ಮುಂದುವರೆಯಿತು. ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌, ಸಿರುಗುಪ್ಪದ ಸಮುದಾಯದ ಮುಖಂಡ ಬಿ.ಎಂ. ಸತೀಶ್‌ ಸತ್ಯಾಗ್ರಹದಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಬೃಹತ್‌ ಮೆರವಣಿಗೆ ನಡೆಸಲಾಯಿತು. ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವರದಿ ಜಾರಿಗೆ ಇರುವ ಎಸ್‌.ಟಿ. ಮೀಸಲಾತಿ ಹೋರಾಟ ಸಮಿತಿಯಿಂದ ಆರಂಭಿಸಿರುವ ಆಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಯುವ ಮುಖಂಡ ಬಿ.ಆರ್‌.ಎಲ್‌. ಶ್ರೀನಿವಾಸ್‌ ಮತ್ತು ಗಡ್ಡಂ ತಿಮ್ಮಪ್ಪ ಅವರು ಉಪವಾಸ ಕೂತಿದ್ದಾರೆ. ಅವರ ಆರೋಗ್ಯದ ಸ್ಥಿತಿ ಏರುಪೇರು ಆಗಬಹುದೆಂದು ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಪವನ್‌ ಕುಮಾರ್‌ ಮಾಲಪಾಟಿ, ಡಿಎಚ್‌ಒ ಮೊದಲಾದವರು ಬಂದು ಸತ್ಯಾಗ್ರಹ ಕೈ ಬಿಡುವಂತೆ ಮನವಿ ಮಾಡಿದರೂ ಅದಕ್ಕೆ ಒಪ್ಪಲಿಲ್ಲ. ಜೊತೆಗೆ ಸತ್ಯಾಗ್ರಹಿಗಳು ತಮಗೆ ಡ್ರಿಪ್‌ ಹಾಕುವುದಕ್ಕೂ ಒಪ್ಪಲಿಲ್ಲ. ಎಸ್ಟಿ ಸಮುದಾಯದ ಮುಖಂಡರು ನಗರದಲ್ಲಿ ಬೃಹತ್‌ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರಿಗೆ ಕೂಡಲೇ ಈ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು. ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಕಳೆದ 3 ದಶಕಗಳಿಂದ ಮನವಿ ಮಾಡುತ್ತಾ ಬಂದಿದೆ, ಬೇಡಿಕೆ ಈಡೇರಿಲ್ಲ. ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ರಚನೆ ಮಾಡಿದ್ದ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಆಯೋಗ ನೀಡಿರುವ ವರದಿಯನ್ನು ಬಹಿರಂಗಪಡಿಸಿ ಅಂಗೀಕರಿಸಬೇಕು ಎಂದು ಒತ್ತಾಯಿಸಲಾಯಿತು. ಎಸ್‌ಟಿ ಮೀಸಲಾತಿ ಹೆಚ್ಚಿಸುವಂತೆ ಸಮುದಾಯ ಸ್ವಾಮೀಜಿ ಪಾದಯಾತ್ರೆ ನಡೆಸಿದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸ್ವಾಮೀಜಿಗಳನ್ನು ನಿರ್ಲಕ್ಷé ಮಾಡಿರುವ ರಾಜ್ಯ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಮಾತನಾಡುವ ಜನಪ್ರತಿನಿಧಿಗಳಾದರೂ ಬಿಸಿ ಮುಟ್ಟಿಸಬೇಕು ಎಂದು ಸತ್ಯಾ ಗ್ರಹಿಗಳಾದ ಬಿ.ಆರ್‌.ಎಲ್‌. ಶ್ರೀನಿವಾಸ್‌ ಮನವಿ ಮಾಡಿದರು. ಮೀನಳ್ಳಿ ತಾಯಣ್ಣ, ಯುವ ಮುಖಂಡರಾದ ಜಗನ್ನಾಥ್‌, ವಿ.ಕೆ. ಬಸಪ್ಪ, ಮೋಕಾ ಮಲ್ಲಯ್ಯ, ವಿ.ಎಸ್‌. ಶಿವಶಂಕರ್‌ ಸೇರಿದಂತೆ ಸಮುದಾಯದ ನೂರಾರು ಜನರು ಇದ್ದರು.

ಟಾಪ್ ನ್ಯೂಸ್

Arvind Kejriwal

ಒಮಿಕ್ರಾನ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: PMಗೆ ಕೇಜ್ರಿವಾಲ್ ಪತ್ರ

20film

ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಭಟ್ಟರ ಪ್ರಶಂಸೆ

sruthi hariharan

ಮೀಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ನೋಟಿಸ್ ಜಾರಿ

ಒಮಿಕ್ರಾನ್ ಭೀತಿ: ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

ಒಮಿಕ್ರಾನ್ ಭೀತಿ: ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

Shreyas Iyer

ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಮನೆ ಕುಸಿದು ಮೃತಪಟ್ಟ ವೃದ್ಧೆ ಕುಟುಂಬಕ್ಕೆ ಪರಿಹಾರ ನೀಡಿ

ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ

ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ

ballari news

4 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ

28y-sathish

ಈ ಬಾರಿ ವೈ. ಸತೀಶ್ ಗೆಲುವು ನಿಶ್ಚಿತ: ಸಚಿವ ಆನಂದ್ ಸಿಂಗ್

kanakadasa jayanthi

ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ

MUST WATCH

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

udayavani youtube

ನೀರಿನಿಂದ ಮಲ್ಲಿಗೆ ಗಿಡವನ್ನು ಬೆಳೆಯಬಹುದೇ ?

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

ಹೊಸ ಸೇರ್ಪಡೆ

ನಂಜನಗೂಡು : ಧಾರಾಕಾರ ಮಳೆಗೆ ಕುಸಿದ ವೃದ್ಧೆಯ ಸೂರು

ನಂಜನಗೂಡು : ಧಾರಾಕಾರ ಮಳೆಗೆ ಕುಸಿದ ವೃದ್ಧೆಯ ಸೂರು

ವರ್ತೂರ್‌ ಪ್ರಕಾಶ್‌ಗೂ ಬಿಜೆಪಿ ಗಾಳ

ವರ್ತೂರ್‌ ಪ್ರಕಾಶ್‌ಗೂ ಬಿಜೆಪಿ ಗಾಳ

ಚೇಳೂರು ಮಾರುಕಟೆಯಲ್ಲಿ ತರಕಾರಿ ಬೆಲೆ ಗಗನಮುಖಿ

ಚೇಳೂರು ಮಾರುಕಟೆಯಲ್ಲಿ ತರಕಾರಿ ಬೆಲೆ ಗಗನಮುಖಿ

Arvind Kejriwal

ಒಮಿಕ್ರಾನ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: PMಗೆ ಕೇಜ್ರಿವಾಲ್ ಪತ್ರ

20film

ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಭಟ್ಟರ ಪ್ರಶಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.