ಕೋವಿಡ್ ಸೋಂಕಿನ ಚೈನ್‌ಲಿಂಕ್‌ ಕಡಿತ ನಿಶ್ಚಿತ: ಭೈರತಿ

Team Udayavani, May 27, 2020, 12:00 PM IST

27-May-06

ದಾವಣಗೆರೆ: ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್‌ ಕೋವಿಡ್‌ -19 ಪರೀಕ್ಷಾ ಕೇಂದ್ರವನ್ನು ಉದ್ಘಾಟಿಸಿದರು.

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಚೈನ್‌ಲಿಂಕ್‌ ಕಡಿತಗೊಳ್ಳುವುದು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್‌ (ಭೈರತಿ) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಚೈನ್‌ ಲಿಂಕ್‌ ಕಡಿತ ಮಾಡುವಲ್ಲಿ ಯಶಸ್ವಿಯಾಗಿರುವ ಜಿಲ್ಲಾಡಳಿತಕ್ಕೆ ಸರ್ಕಾರದ ಪರ ಅಭಿನಂದನೆ ಸಲ್ಲಿಸಲಾಗುವುದು. ಕಂಟೇನ್ಮೆಂಟ್‌ ಝೋನ್‌ ಒಳಗೊಂಡಂತೆ ಎಲ್ಲಾ ಕಡೆ ಕೋವಿಡ್ ಗೆ ಸಂಬಂಧಿಸಿದಂತೆ ಹೆಚ್ಚು ಪರೀಕ್ಷೆ ಹೆಚ್ಚು ನಡೆಸಲು ಅಧಿಕಾರಿಗಳು, ಇನ್ಸಿಡೆಂಟ್‌ ಕಮಾಂಡರ್‌ಗಳಿಗೆ ಕಟ್ಟೆಚ್ಚರ ನೀಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಏರಿಕೆ ಪ್ರಮಾಣ ತಡೆಯಲಾಗಿದೆ. ಇದುವರೆಗೆ 51 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಅನೇಕರು ಗುಣಮುಖರಾಗುತ್ತಿದ್ದು, ಕೆಲವೇ ದಿನಗಳಲ್ಲಿ ಡಿಸ್ಚಾರ್ಜ್‌ ಆಗಲಿದ್ದಾರೆ ಎಂಬುದಾಗಿ ಅಧಿಕಾರಿಗಳು ಹೇಳಿದ್ದಾರೆ. ದಾವಣಗೆರೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿವೆ. 2-3 ದಿನಗಳದ್ದು ಸೇರಿ ಮಂಗಳವಾರ 11 ಪಾಸಿಟಿವ್‌ ಪ್ರಕರಣಗಳ ವರದಿ ಬಂದಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಜೆ.ಜೆ.ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕೋವಿಡ್‌-19 ಪರೀಕ್ಷಾ ಪ್ರಯೋಗಾಲಯ ಲೋಕಾರ್ಪಣೆ ಮಾಡಲಾಗಿದೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಪ್ರಾರಂಭಕ್ಕೆ ಟೆಂಡರ್‌ ಕರೆದಾಗ ಹಲವಾರು ಕಂಪನಿ, ಏಜೆನ್ಸಿ ಕಾಲಹರಣ ಮಾಡಿದವು. ಹಾಗಾಗಿ ಜೆ.ಜೆ. ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಯೋಗಾಲಯ ಸಿದ್ಧಪಡಿಸಿದವರಿಗೆ ಗುತ್ತಿಗೆ ನೀಡಲಾಗಿದ್ದು, 2-3 ದಿನಗಳಲ್ಲಿ ಎಲ್ಲಾ ಉಪಕರಣ ಸಜ್ಜುಗೊಳಿಸಲಾಗುವುದು. ಆದಷ್ಟು ಬೇಗ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದೆ ಎಂದರು.

ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಜೆ.ಜೆ.ಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಯೋಗಾಲಯಗಳಲ್ಲಿ ದಿನವಹಿ 100 ಗಂಟಲು ಮಾದರಿ ದ್ರವ ಪರೀಕ್ಷೆ ಮಾಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ ಪ್ರಯೋಗಾಲಯ ಪ್ರಾರಂಭವಾದಲ್ಲಿ ಪರೀಕ್ಷಾ ಪ್ರಮಾಣ ಹೆಚ್ಚಳವಾಗಲಿದೆ. ದಾವಣಗೆರೆಯಲ್ಲಿ ಒಂದೇ ಒಂದು ಪ್ರಯೋಗಾಲಯ ಇರಲಿಲ್ಲ. ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನದ ಫಲವಾಗಿ ಲ್ಯಾಬ್‌ ದೊರೆತಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯಕ್ಕೆ 25 ಕೋಟಿ ರೂ. ಖರ್ಚು ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಪ್ರೊ| ಎನ್‌. ಲಿಂಗಣ್ಣ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಪೌರಾಡಳಿತ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ, ಎಸ್ಪಿ ಹನುಮಂತರಾಯ ಇತರರು ಇದ್ದರು.

ಕೋವಿಡ್ ಹಿನ್ನೆಲೆಯಲ್ಲಿ ಇತಿಮಿತಿಯಲ್ಲಿ ಸಭೆ ನಡೆಸಲಾಗಿದೆ ಹೊರತು ಬೇರೆ ಯಾವ ದೃಷ್ಟಿಯಿಂದಲೂ ಅಲ್ಲ. ಮುಂದಿನ ದಿನಗಳಲ್ಲಿ ನಗರಪಾಲಿಕೆಯ ಎಲ್ಲಾ ಸದಸ್ಯರ ಸಭೆ ನಡೆಸಲಾಗುವುದು.
ಬಿ.ಎ. ಬಸವರಾಜ್‌,
ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.