ಕೋವಿಡ್ ಗೆ ಮತ್ತೊಬ್ಬ ಬಲಿ: ಆರು ಜನರಿಗೆ ಪಾಸಿಟಿವ್
Team Udayavani, Jul 8, 2020, 11:16 AM IST
ದಾವಣಗೆರೆ: ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ವ್ಯಕ್ತಿಯೊಬ್ಬರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 13ಕ್ಕೇರಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮಾರುತಿನಗರದ 6ನೇ ಕ್ರಾಸ ನಿವಾಸಿ 55 ವರ್ಷದ ವ್ಯಕ್ತಿ (ರೋಗಿ ನಂಬರ್ 25830) ಸಾವನ್ನಪ್ಪಿದವರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜು. 6 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಹೊಸದಾಗಿ ಆರು ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಶೀತ ಜ್ವರ ಸಮಸ್ಯೆಯಿಂದ ಬಳಲುತ್ತಿದ್ದ ದಾವಣಗೆರೆಯ ಬಾಷಾನಗರದ 65 ವರ್ಷದ ವೃದ್ಧ(ರೋಗಿ ನಂಬರ್ 25825), ಚೌಕಿಪೇಟೆಯ 46 ವರ್ಷದ ವ್ಯಕ್ತಿ (ರೋಗಿ ನಂಬರ್ 25826) ಯಲ್ಲಿ ಸೋಂಕು ಕಾಣಿಸಿಕೊಂಡಿದೆ. ರ್ಯಾಂಡಂ ಪರೀಕ್ಷೆಯಲ್ಲಿ ದಾವಣಗೆರೆಯ ನಿಟುವಳ್ಳಿಯ ಎಚ್.ಕೆ.ಆರ್. ವೃತ್ತದ 3ನೇ ಕ್ರಾಸ್ ನಿವಾಸಿ 43 ವರ್ಷದ ವ್ಯಕ್ತಿ (ರೋಗಿ ನಂಬರ್ 25827) ಯಲ್ಲಿ ಕಾಣಿಸಿಕೊಂಡಿರುವ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ತಮಿಳುನಾಡಿನಿಂದ ವಾಪಾಸ್ಸಾಗಿರುವ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ 62 ವರ್ಷದ ವೃದ್ದೆ(ರೋಗಿ ನಂಬರ್ 25828) ಗೆ ಸೋಂಕು ದೃಢಪಟ್ಟಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ದಾವಣಗೆರೆ ನಿಟುವಳ್ಳಿಯ 48 ವರ್ಷದ ವ್ಯಕ್ತಿ (ರೋಗಿ ನಂಬರ್ 25829) ಹಾಗೂ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ 55 ವರ್ಷದ ವೃದ್ಧ (ರೋಗಿ ನಂಬರ್ 25830) ಸೋಂಕಿಗೆ ಒಳಗಾಗಿದ್ದಾರೆ. 365 ಪ್ರಕರಣಗಳಲ್ಲಿ ಇಲ್ಲಿಯವರೆಗೆ 311 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!