ಕೋವಿಡ್‌-19 ನಿಯಮದಂತೆ ವೃದ್ಧನ ಅಂತ್ಯಕ್ರಿಯೆ

ಶುಕ್ರವಾರ ರಾತ್ರಿಯೇ ಜಾಲಿನಗರದ ವೃದ್ಧನ (ರೋಗಿ ನಂಬರ್‌-556)ಶವಸಂಸ್ಕಾರ

Team Udayavani, May 3, 2020, 11:41 AM IST

3-may-03

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದಾವಣಗೆರೆ: ಶುಕ್ರವಾರ ರಾತ್ರಿ ಮೃತಪಟ್ಟ ಕೋವಿಡ್ ಸೋಂಕಿತ ಜಾಲಿನಗರದ ವೃದ್ಧ (ರೋಗಿ ಸಂಖ್ಯೆ-556)ರ ಅಂತ್ಯಕ್ರಿಯೆ ಕೋವಿಡ್‌-19ರ ನಿಯಮಾವಳಿಯಂತೆ ನೆರವೇರಿಸಲಾಗಿದೆ.
ಶನಿವಾರ, ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪೋಲೀಸ್‌, ಮಹಾನಗರಪಾಲಿಕೆ, ಆರೋಗ್ಯ ಇಲಾಖೆ ಹಾಗೂ ಅಗ್ನಿಶಾಮಕದಳ ತಂಡದೊಂದಿಗೆ ಶವ ಸಂಸ್ಕಾರವನ್ನು ಕೋವಿಡ್‌-19 ನಿಯಮಾವಳಿಯಂತೆ ಶುಕ್ರವಾರ ರಾತ್ರಿಯೇ ನಡೆಸಲಾಗಿದೆ ಎಂದು ತಿಳಿಸಿದರು.

ಮೂರು ದಿನದಿಂದ ಅಸ್ವಸ್ಥತೆಯಿಂದ ಬಳಲುತಿದ್ದ ವೃದ್ಧ, ಏ.28ರಂದು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. 29 ರಂದು ಕೋವಿಡ್ ಪಾಸಿಟಿವ್‌ ದೃಢಪಟ್ಟಿತ್ತು. ಅವರನ್ನು ತೀವ್ರ ಉಸಿರಾಟದ ತೊಂದರೆ ಪ್ರಕರಣ ಎಂಬುದಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಯಿಂದ ಚೇತರಿಸಿಕೊಳ್ಳಲಿಲ್ಲ. ಈ ಹಿಂದೆ ಅವರು ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.

ಮಣಿಪಾಲ್‌ನ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಕಳೆದ 5 ವರ್ಷದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಜಿಲ್ಲಾಧಿಕಾರಿ ಮೃತ ವೃದ್ಧನ ಬಗ್ಗೆ ಮಾಹಿತಿ ನೀಡಿದರು. ಶುಕ್ರವಾರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರ ಒಟ್ಟು 92 ಮಂದಿಯ ಗಂಟಲು ದ್ರವದ ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಶನಿವಾರ ಸಹ ಒಟ್ಟು 72 ಸ್ಯಾಂಪಲ್‌ ಕಳುಹಿಸಿ ಕೊಡಲಾಗಿದ್ದು, ಫಲಿತಾಂಶದ ವರದಿ ಬರಬೇಕಿದೆ. ಜೊತೆಗೆ ಎಪಿಸೆಂಟರ್‌ನ ಸುತ್ತ ಮುತ್ತಲಿನ ಕಾರ್ಮಿಕರಲ್ಲಿ ಕೋವಿಡ್‌ ಲಕ್ಷಣ ಇಲ್ಲದಿದ್ದರೂ ಸಹ ಅವರ ಗಂಟಲು ದ್ರವ ಸ್ಯಾಂಪಲ್‌ ಕಳುಹಿಸಿಕೊಡಲು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಿದ್ದೇವೆ. ಆ ಪ್ರದೇಶವೂ ಸ್ಲಂ ಆಗಿದೆ. ಬಹಳಷ್ಟು ಇಕ್ಕಟ್ಟಿನ ಜಾಗದಲ್ಲಿ ಮನೆಗಳಿವೆ. ಇಂತಹ ಜಾಗದಲ್ಲಿ ಜನರು ವಾಸ ಮಾಡುತ್ತಿರುವ ಹಿನ್ನೆಲೆಯಲ್ಲಿ ನಾವು ಯಾವುದೇ ಅಪಾಯ ತೆಗೆದುಕೊಳ್ಳುವುದು ಬೇಡ ಎಂಬುದಾಗಿ ಅಲ್ಲಿರುವ ಎಲ್ಲರ ಗಂಟಲು ಸ್ವಾಬ್‌ ಸಂಗ್ರಹಿಸಿ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಡ್ರಗ್ಸ್‌ ಸ್ಟೋರ್‌ಗಳಲ್ಲಿ ಜ್ವರ, ಕೆಮ್ಮು, ನೆಗಡಿಗೆ ಸಂಬಂಧಪಟ್ಟಂತೆ ಮಾತ್ರೆ ತೆಗೆದುಕೊಂಡವರ ವಿವರ ಒದಗಿಸಲು ಸೂಚಿಸಲಾಗಿದೆ. ಮೆಡಿಕಲ್‌ ಶಾಪ್‌ಗ್ಳಲ್ಲಿ ಔಷಧ ಖರೀದಿಸಿದವರ ಬಗ್ಗೆ ಪರಿಶೀಲಿಸಲು ನೋಡಲ್‌ ಅಧಿಕಾರಿ ನೇಮಿಸಲಾಗಿದೆ. ನೋಡಲ್‌ ಅಧಿಕಾರಿಗಳು ಪರಿಶೀಲನೆಗಾಗಿ 35 ತಂಡ ರಚಿಸಿದ್ದು, ಸರ್ವೇ ಕಾರ್ಯ ಜಾರಿಯಲ್ಲಿದೆ. ಒಂದೊಂದು ತಂಡಕ್ಕೆ 15 ಮೆಡಿಕಲ್‌ ಶಾಪ್‌ಗ್ಳ ಸರ್ವೇ ಕಾರ್ಯ ವಹಿಸಲಾಗಿದೆ. ವರದಿಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿಗೆ ಕಳುಹಿಸಿಕೊಡಲಾಗುವುದು. ಅದರಲ್ಲಿ ಸಂದೇಹ ಬರುವಂತಹದ್ದು ಕಂಡುಬಂದರೆ ಪರೀಕ್ಷೆಗೆ ಒಳಪಡಿಸುವ ಕುರಿತು ಪ್ರಕ್ರಿಯೆ ಶುರುವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಎಸ್ಪಿ ಹನುಮಂತರಾಯ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಾ ಬಸವಂತಪ್ಪ, ಜಿಲ್ಲಾ ಕೋವಿಡ್‌ ನೋಡಲ್‌ ಅಧಿಕಾರಿ ಪ್ರಮೋದ್‌ ನಾಯ್ಕ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.