ಧರ್ಮಸ್ಥಳ ಯೋಜನೆ ಬಡವರಿಗೆ ವರದಾನ

Team Udayavani, Jun 25, 2019, 1:13 PM IST

dg-tdy-3..

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಆಟೋರಿಕ್ಷಾ ಕೀ ವಿತರಿಸಿದ ಸಂದರ್ಭ.

ದಾವಣಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಪಾಲಿಗೆ ವರದಾನವಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನಮಂಗಳ ಕಾರ್ಯಕ್ರಮದಡಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ವ್ಹೀಲ್ಚೇರ್‌, ಶಿಷ್ಯವೇತನ, ಆಟೋರಿಕ್ಷಾ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಜನರು ಸ್ವಾವಲಂಬಿ ಜೀವನ ನಡೆಸಲು ನೆರವಾಗುತ್ತಿರುವುದು ಶ್ಲಾಘನೀಯ ಎಂದರು.

ರಾಜ್ಯದ ಅನೇಕ ಕಡೆಯಲ್ಲಿ ಹಲವಾರು ಸಮಸ್ಯೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸೂಕ್ತ ಪರಿಹಾರ ಒದಗಿಸಲಾಗುತ್ತಿದೆ. ಡಾ| ವೀರೇಂದ್ರ ಹೆಗ್ಗಡೆಯವರು ಅದರ ಹಿಂದಿನ ಪ್ರೇರಣಾ ಶಕ್ತಿ.

ಹಿಂದೆ ಶಿರಡಿ ಸಾಯಿಬಾಬಾ ದೇವಸ್ಥಾನದ ಮೂಲಕ ಬಡವರಿಗೆ ನೀರು ಒದಗಿಸಲಾಗುತ್ತಿತ್ತು. ಈಗ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿಯೇ ಸಾಕಷ್ಟು ದೇವಸ್ಥಾನಗಳಿಗೆ ಆರ್ಥಿಕ ಸಹಾಯ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ನಿಂದ ಒಂದು ಕುಡಿಯುವ ನೀರು ಘಟಕಕ್ಕೆ 12 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಬರೀ 4 ಲಕ್ಷಕ್ಕೇ ಕುಡಿಯುವ ನೀರಿನ ಘಟಕ ಮಾಡುತ್ತಾರೆ. ಅಗ್ಗದ ದರಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಕೊಡಲಾಗಿದೆ. ದಾವಣಗೆರೆಯಲ್ಲಿ 25 ಘಟಕಗಳು ಇವೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ 2,600 ಕೋಟಿಯಷ್ಟು ಸಹಾಯ ಮಾಡಲಾಗಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ಸ್ವಾವಲಂಬಿ ಉದ್ಯೋಗ ಕಂಡುಕೊಂಡು ಉತ್ತಮ ಜೀವನ ನಡೆಸುವುದಕ್ಕೆ ಸಹಕಾರಿಯಾಗುತ್ತಿರುವುದು ಬಹಳ ಸಂತೋಷದ ವಿಚಾರ ಎಂದರು.

ಉದ್ಯಮಿ ಹಂಸರಾಜ್‌ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದಾವಣಗೆರೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಸಹಾಯ ಮಾಡಲಾಗಿದೆ. ಸ್ವಸಹಾಯ ಸಂಘಗಳು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಆಗಬೇಕು ಎಂದು ಆಶಿಸಿದರು.

ಗುರು ಮೋಟಾರ್ಸ್‌ ಮಾಲೀಕ ಎನ್‌.ಎಂ. ಗುರುಸಿದ್ದಯ್ಯ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 380 ಆಟೋರಿಕ್ಷಾ, 26 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 1,750 ಅಂಗವಿಕಲರಿಗೆ ಸಲಕರಣೆ ನೀಡಲಾಗಿದೆ ಎಂದು ತಿಳಿಸಿದರು.

ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಶ್ರೀ ದುರ್ಗಾಂಬಿಕಾ ದೇವಸ್ಥಾನ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ, ಯೂನಿಯನ್‌ ಬ್ಯಾಂಕ್‌ ಮ್ಯಾನೇಜರ್‌ ಶ್ರೀನಿವಾಸ ರೆಡ್ಡಿ, ಮಲ್ಲಿಕಾರ್ಜುನ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಎನ್‌.ಜಿ. ಚಂದ್ರಶೇಖರ್‌, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ಜಯಂತ್‌ ಪೂಜಾರಿ, ಯೋಜನಾಧಿಕಾರಿ ಸಿ.ಎಚ್.ಪದ್ಮಯ್ಯ, ಎಚ್.ಬಾಬು, ಸಿದ್ದೇಶ್‌, ವಿಜೇಂದ್ರ, ವಿಶಾಲ ಇತರರು ಇದ್ದರು.

34 ಜನರಿಗೆ ವ್ಹೀಲ್ಚೇರ್‌, 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 16 ಮಂದಿಗೆ ಆಟೋರಿಕ್ಷಾ, ವಾಟರ್‌ ಬೆಡ್‌ ವಿತರಿಸಲಾಯಿತು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.