ಕೃಷಿ ಕಾಯ್ದೆ ಜಾರಿಯಿಂದ ರೈತರು ಬೀದಿಪಾಲು

ಕೊನೆಗೂ ಭಾವಚಿತ್ರಗಳನ್ನು ಪಡೆದುಕೊಂಡ ಪೊಲೀಸರು ಗಾಂಧಿ ವೃತ್ತದವರೆಗೆ ಮೆರವಣಿಗೆಗೆ ಅವಕಾಶ ನೀಡಿದರು.

Team Udayavani, Oct 19, 2021, 4:31 PM IST

ಕೃಷಿ ಕಾಯ್ದೆ ಜಾರಿಯಿಂದ ರೈತರು ಬೀದಿಪಾಲು

ದಾವಣಗೆರೆ: ಉತ್ತರ ಪ್ರದೇಶದ ಲಖೀಂಪುರ ಕೇರಿಯಲ್ಲಿ ನಡೆದ ರೈತರ ಹತ್ಯೆ ಖಂಡಿಸಿ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ಸೋಮವಾರ ಸಂಯುಕ್ತ ಕಿಸಾನ್‌ ಮೋರ್ಚಾ, ಸಿಪಿಐ, ಎಐಕೆಎಸ್‌, ಪ್ರಾಂತ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ ಒಳಗೊಂಡಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳು ಅತ್ಯಂತ ಮಾರಕವಾಗಿವೆ. ಮುಂದಿನ ದಿನಗಳಲ್ಲಿ ಕೃಷಿಕರು ಬೀದಿಪಾಲಾಗಲಿದ್ದಾರೆ. ದೇಶದ ಕೃಷಿ ಕ್ಷೇತ್ರವೇ ಸರ್ವನಾಶವಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ನೇತೃತ್ವದಲ್ಲಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು 11 ತಿಂಗಳಿನಿಂದ ನಿರಂತರವಾಗಿ ಹೋರಾಟ ನಡೆಸುತ್ತಿವೆ. 600ಕ್ಕೂ ಹೆಚ್ಚು ಅನ್ನದಾತರು ಹುತಾತ್ಮರಾಗಿದ್ದಾರೆ. ಆದರೂ ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸುವತ್ತ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ಉತ್ತರ ಪ್ರದೇಶದ ಲಖೀಂಪುರ ಕೇರಿಯಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರದ ಗೃಹ ಇಲಾಖೆ ರಾಜ್ಯ ಸಚಿವರ ಪುತ್ರ ಕಾರು ಹರಿಸಿ, ನಾಲ್ವರು ರೈತರನ್ನು ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ. ರೈತರ ಹತ್ಯೆ ಮಾಡಿರುವ ಸಚಿವನ ಪುತ್ರನೊಂದಿಗೆ ಗೃಹ ಸಚಿವ ಅಮಿತ್‌ ಶಾ ಗಂಟೆಗಟ್ಟಲೆ ಚರ್ಚೆ ಮಾಡಿದ್ದಾರೆ.

ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು. ಪುತ್ರನನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಮೋದಿ ಅಧಿಕಾರಕ್ಕೆ ಬರುವ ಮುನ್ನ ಅಚ್ಚೇ ದಿನ್‌ ತರಲಾಗುವುದು ಎಂದು ಹೇಳಿದ್ದರು. ಏಳು ವರ್ಷವಾದರೂ ಅಚ್ಚೇ ದಿನ್‌ ಬಂದಿಲ್ಲ. ಬದಲಿಗೆ ಪೆಟ್ರೋಲ್‌, ಡೀಸೆಲ್‌, ಆಡುಗೆ ಸಿಲಿಂಡರ್‌, ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಅಚ್ಚೇ ದಿನ್‌ ಬದಲಿಗೆ ಜನರಿಗೆ ಕಚ್ಚೇ ದಿನ್‌ ಬಂದಿವೆ. ಜನ, ಕಾರ್ಮಿಕ, ದೇಶ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನ ಕಿತ್ತೂಗೆಯಬೇಕು ಎಂದರು.

ಜಯದೇವ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾವಚಿತ್ರ ಪ್ರದರ್ಶನ ಮತ್ತು ದಹಿಸಲು ಪೊಲೀಸರು ಅವಕಾಶ ನೀಡಲಿಲ್ಲ. ಈ ವಿಚಾರವಾಗಿ ಪ್ರತಿಭಟನಾಕಾರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ವಾಗ್ವಾದ, ತಳ್ಳಾಟ, ನೂಕಾಟ ನಡೆಯಿತು. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಯತ್ನವೂ ನಡೆಯಿತು. ಪ್ರಧಾನಿ ಮೋದಿ, ಅಮಿತ್‌ ಶಾ ಭಾವಚಿತ್ರಗಳೊಂದಿಗೆ ಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಸಲೂ ಸಹ ಪೊಲೀಸರು ಅವಕಾಶ ನೀಡಲಿಲ್ಲ. ಕೊನೆಗೂ ಭಾವಚಿತ್ರಗಳನ್ನು ಪಡೆದುಕೊಂಡ ಪೊಲೀಸರು ಗಾಂಧಿ ವೃತ್ತದವರೆಗೆ ಮೆರವಣಿಗೆಗೆ ಅವಕಾಶ ನೀಡಿದರು. ಗಾಂಧಿ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲು ಅವಕಾಶ ನೀಡಲಾಯಿತು.

ಹೋರಾಟ ಹತ್ತಿಕ್ಕಲು ಹುನ್ನಾರ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟವನ್ನು ಸರ್ಕಾರಗಳು ಪೊಲೀಸರ ಮೂಲಕ ಹತ್ತಿಕ್ಕುತ್ತಿವೆ. ಬಿಜೆಪಿಯವರು ನಡೆಸುವ ಬೈಕ್‌ ರ್ಯಾಲಿ, ರಾಜಕೀಯ ಸಮಾವೇಶಗಳಿಗೆ ಇಲ್ಲದ ಕೊರೊನಾ ಮಾರ್ಗಸೂಚಿಗಳನ್ನು ರೈತರ ಹೋರಾಟಕ್ಕೆ ವಿಧಿಸಲಾಗುತ್ತಿದೆ. ಬಿಜೆಪಿಯವರು ಏನೇ ಮಾಡಿದರೂ ಕೊರೊನಾ ಬರುವುದಿಲ್ಲ. ರೈತರು, ಕಾರ್ಮಿಕರು ಹೋರಾಟ ಮಾಡಿದರೆ ಕೊರೊನಾ ಬರುತ್ತದೆಯೇ ಎಂದು ಪ್ರಶ್ನಿಸುವಂತಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಹಕ್ಕಿದೆ. ಹೋರಾಟವನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದಂತೆ. ಫ್ಯಾಸಿಸ್ಟ್‌ ನೀತಿ ಖಂಡನೀಯ ಎಂದು ಪ್ರತಿಭಟನಾಕಾರರು ದೂರಿದರು.

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.