ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ ವಿನೂತನ ತರಬೇತಿ

ನ. 14 ರಿಂದ ಎಲ್ಲರಿಗೂ ಎಟುಕುವಂತೆ 10xplus ತರಬೇತಿ ಪ್ರಾರಂಭಿಸುತ್ತಿದೆ.

Team Udayavani, Oct 27, 2021, 6:46 PM IST

Building

ದಾವಣಗೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ಒಂದಿಲ್ಲ ಒಂದು ರೀತಿಯ ಪ್ರಯೋಗಕ್ಕೆ ತೊಡಗಿಸಿಕೊಳ್ಳುವ ದಾವಣಗೆರೆಯ ಪ್ರತಿಷ್ಠಿತ ಸಿದ್ಧಗಂಗಾ ವಿದ್ಯಾಸಂಸ್ಥೆ ಈಗ ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಬೆಳವಣಿಗೆಗೆ ಪೂರಕವಾದ ವಿನೂತನ 10xplus ತರಬೇತಿ ನೀಡಲು ಮುಂದಾಗಿದೆ.

ಕೊರೊನಾ, ಲಾಕ್‌ಡೌನ್‌ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆ ಅದರಲ್ಲೂ ಭೌತಿಕ ತರಗತಿಯಿಂದ ಹಲವಾರು ತಿಂಗಳು ದೂರ ಇದ್ದ ಕಾರಣಕ್ಕೆ ಮಕ್ಕಳಲ್ಲಿನ ಏಕಾಗ್ರತೆ ಕಡಿಮೆ ಆಗುತ್ತಿದೆ ಎಂಬುದನ್ನು ಮನಗಂಡ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ 10xplus ಯೋಜನೆ ಪ್ರಾರಂಭಿಸಿತು.

ಕೇವಲ ಆರು ದಿನಗಳ ತರಬೇತಿ ನಂತರ ಮಕ್ಕಳಲ್ಲಿನ ಏಕಾಗ್ರತೆ, ಬೌದ್ಧಿಕ ಬೆಳವಣಿಗೆಗೆ ಅಗಾಧ ಬದಲಾವಣೆ ಕಂಡು ಬಂತು. ಇತರೆ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಲಿ ಎಂಬ ಸದುದ್ದೇಶದಿಂದ ನ. 14 ರಿಂದ ಎಲ್ಲರಿಗೂ ಎಟುಕುವಂತೆ 10xplus
ತರಬೇತಿ ಪ್ರಾರಂಭಿಸುತ್ತಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ 10xಟlus ಯೋಜನೆ, ಎಂ.ಎಸ್‌. ಶಿವಣ್ಣ ತರಬೇತಿ ಕೇಂದ್ರದ ಬಗ್ಗೆ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಮಾಹಿತಿ ನೀಡಿದರು. ಸಿದ್ಧಗಂಗಾ ವಿದ್ಯಾಸಂಸ್ಥೆ ಕಳೆದ 52 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸುತ್ತಾ ಬಂದಿದೆ. ವಿದ್ಯಾರ್ಥಿ ಸಮುದಾಯವನ್ನು ವಿನೂತನ ಪ್ರಯೋಗಗಳಿಗೆ ಸಿದ್ಧಗೊಳಿಸುವ ಜೊತೆಗೆ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ
ಅನಾವರಣಕ್ಕೆ ಸೂಕ್ತ ವೇದಿಕೆ ನೀಡಿ ಪ್ರೋತ್ಸಾಹಿಸುತ್ತಿದೆ. ಅದರ ಭಾಗವಾಗಿ ಇದೀಗ 10xplus ಎಂಬ ಹೊಸ ಆವಿಷ್ಕಾರದೊಂದಿಗೆ ರಾಜ್ಯದ ಎಲ್ಲ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಯೋಜನೆ ಸಿದ್ಧಪಡಿಸಿದೆ. ಸಂಸ್ಥೆಯ ನಿರ್ದೇಶಕ ಡಾ| ಜಯಂತ್‌ರವರು ಹಲವಾರು ವರ್ಷಗಳ ಅಧ್ಯಯನದಿಂದ ವೈಜ್ಞಾನಿಕವಾಗಿ 10xplus ಯೋಜನೆ ರೂಪಿಸಿದ್ದಾರೆ ಎಂದು ತಿಳಿಸಿದರು.

ಮಕ್ಕಳ ಮೆದುಳನ್ನು ಚುರುಕುಗೊಳಿಸುವ ಮೂಲಕ ಗ್ರಹಣಶಕ್ತಿ, ಸ್ಮರಣಶಕ್ತಿಯನ್ನು ಹೆಚ್ಚಿಸುವ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ವಿಧಾನವೇ 10xplus ಯೋಜನೆ. ಪ್ರತಿ ಮಗುವಿಗೆ ಆರು ದಿನಗಳತರಬೇತಿ ನೀಡುವ ಮೂಲಕ ಬದಲಾವಣೆ ತರಬಹುದು. ಈ ತರಬೇತಿಯಿಂದ ಗಣಿತ, ವಿಜ್ಞಾನದಂತಹ ಕ್ಲಿಷ್ಟ ಸಂಗತಿಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಸಂಸ್ಥೆಯ ನಿರ್ದೇಶಕ ಡಾ| ಡಿ.ಎಸ್‌. ಜಯಂತ್‌ ಮಾತನಾಡಿ, ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಅ. 28 ರಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಯೋಜನೆ, ಎಂ.ಎಸ್‌. ಶಿವಣ್ಣ ತರಬೇತಿ ಕೇಂದ್ರ, 10xplus ಶಿಲಾಫಲಕವನ್ನು ಉದ್ಘಾಟಿಸುವರು. ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಎಂ.ಎಸ್‌. ಶಿವಣ್ಣ ತರಬೇತಿ ಕೇಂದ್ರದ ಫಲಕ, ಶಾಸಕ ಎಸ್‌.ಎ. ರವೀಂದ್ರನಾಥ್‌ 10xplus ಲೋಗೋ, ಎಂ.ಎಸ್‌. ಶಿವಣ್ಣ ತರಬೇತಿ ಕೇಂದ್ರದಲ್ಲಿ ಸ್ಥಾಪಿಸಲಾಗುವ ಶಿಕ್ಷಣ ಶಿಲ್ಪಿ ಎಂ.ಎಸ್‌. ಶಿವಣ್ಣನವರ ಮೂರ್ತಿಯನ್ನು ವಿಧಾನಪರಿಷತ್‌ ಮಾಜಿ ಮುಖ್ಯ ಸಚೇತಕ ಡಾ|ಎ.ಎಚ್‌. ಶಿವಯೋಗಿಸ್ವಾಮಿ, ಯೋಜನೆ ಕೈಪಿಡಿ, “ಅಜರಾಮರ’ ಕೃತಿಯನ್ನು ಜಿಲ್ಲಾಧಿಕಾರಿ ಮಹಂತೇಶ ಬೀಳಗಿ ಲೋಕಾರ್ಪಣೆ ಮಾಡುವರು ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.