ವಿದ್ಯಾರ್ಥಿಗಳಿಗೆ ಜ್ಞಾನ-ಶಿಸ್ತು ಬಹಳ ಮುಖ್ಯ; ಟಿ.ದಮಯಂತಿ

ಶಿಕ್ಷಣ ಮಾರಾಟವಾದರೆ ಇಲ್ಲವೇ ಭ್ರಷ್ಟಾಚಾರಕ್ಕೆ ಒಳಪಟ್ಟರೆ ಇಡೀ ಸಮಾಜವೇ ನಾಶವಾಗುತ್ತದೆ.

Team Udayavani, Mar 28, 2022, 6:19 PM IST

ವಿದ್ಯಾರ್ಥಿಗಳಿಗೆ ಜ್ಞಾನ-ಶಿಸ್ತು ಬಹಳ ಮುಖ್ಯ; ಟಿ.ದಮಯಂತಿ

ಹಿರಿಯೂರು: ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಶಿಸ್ತು ಬಹಳ ಮುಖ್ಯ. ಈಗಾಗಲೇ ಪರೀಕ್ಷೆಗಳು ಆರಂಭವಾಗುತ್ತಿದ್ದು, ಮಕ್ಕಳು ಧೈರ್ಯದಿಂದ ಎದುರಿಸಿ, ಉತ್ತಮ ಸಾಧನೆ ಮಾಡುವ ಮೂಲಕ ಸಮಾಜ, ಪೋಷಕರು ಹಾಗೂ ಗುರುಗಳಿಗೆ ಕೀರ್ತಿ ತರಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಟಿ.ದಮಯಂತಿ ಸೋಮಯ್ಯ ಎಂದು ಹೇಳಿದರು.

ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಕಂಪ್ಯೂಟರ್‌ ಜಗತ್ತಿನಲ್ಲಿ ಉತ್ತಮ ಶಿಕ್ಷಣ ಅವಶ್ಯ. ಮಕ್ಕಳು ಯಾವುದೇ ಒತ್ತಡಕ್ಕೆ ಒಳಗಾಗದೇ ತಮ್ಮ ಆಸಕ್ತಿ ಹಾಗೂ ಇಚ್ಛೆಗನುಸಾರ ವಿಷಯ ಆಯ್ಕೆಮಾಡಿ ಉತ್ತಮ ವಿದ್ಯಾಭ್ಯಾಸ ಪಡೆಯಿರಿ. ಪರೀಕ್ಷೆ ನಂತರ ಕಡಿಮೆ ಅಂಕಗಳು ಬಂದಿವೆ ಮತ್ತು ಫೇಲ್‌ ಎಂಬ ಕಾರಣಕ್ಕೆ ಯಾವುದೇ ಅನಾಹುತಗಳಿಗೆ ಎಡೆಮಾಡಿಕೊಡದೇ ಬರುವ ಸವಾಲುಗಳನ್ನು ಸ್ವೀಕರಿಸಿ ಭವಿಷ್ಯದ ಉಜ್ವಲ ಜೀವನ ರೂಪಿಸಿಕೊಳ್ಳಬೇಕು ಎಂದರು.

ಡಿವೈಎಸ್ಪಿ ರೋಷನ್‌ ಜಮೀರ್‌ ಮಾತನಾಡಿ ಮನುಷ್ಯನ ಜೀವನದಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯ. ಮಕ್ಕಳು ತಂದೆತಾಯಿ- ಗುರುಹಿರಿಯರಿಗೆ ವಿಧೇಯರಾಗಿರಬೇಕು. ಈ ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಟ್ಟ ವ್ಯಕ್ತಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌. ಶಿಕ್ಷಣ ಮಾರಾಟವಾದರೆ ಇಲ್ಲವೇ ಭ್ರಷ್ಟಾಚಾರಕ್ಕೆ ಒಳಪಟ್ಟರೆ ಇಡೀ ಸಮಾಜವೇ ನಾಶವಾಗುತ್ತದೆ. ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಅವಕಾಶ ಸದುಪಯೋಗಿಸಿದರೆ ಉತ್ತಮ ಸಾಧನೆ ಮಾಡಬಹುದು ಎಂದರು.

ನಗರಸಭೆ ಸದಸ್ಯ ಗುಂಡೇಶ್‌ಕುಮಾರ್‌ ಮಾತನಾಡಿ ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಸತತ ಅಭ್ಯಾಸ ಮಾಡಿದರೆ ಉತ್ತಮ ಅಂಕಗಳಿಸಬಹುದು. ತಂದೆ-ತಾಯಿಗಳು ನಿಮ್ಮ ಮೇಲೆ ಬೆಟ್ಟದಷ್ಟು ಆಸೆ ಆಕಾಂಕ್ಷೆಗಳನ್ನು ಹೊತ್ತು ಶಿಕ್ಷಣ ಕೊಡಿಸುತ್ತಿದ್ದು, ಅವರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಅದನ್ನು ಮರೆಯಬಾರದು ಎಂದರು.

ಪ್ರಾಂಶುಪಾಲ ಬಿ.ಪಿ.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕೊಂಡ್ಲಹಳ್ಳಿ ಉಪನ್ಯಾಸಕ ರಂಗಸ್ವಾಮಿ ಮಾತನಾಡಿದರು. ಮುಖಂಡರಾದ ತುರುವನೂರು ಜಗನ್ನಾಥ್‌, ಹುಚ್ಚವ್ವನಹಳ್ಳಿ ವೆಂಕಟೇಶ್‌, ಉಪನ್ಯಾಸಕರಾದ ಕೆ.ರಂಗಪ್ಪ, ಶಾಂತಕುಮಾರ್‌, ಎಚ್‌.ಆರ್‌. ಲೋಕೇಶ್‌, ಈ.ನಾಗೇಂದ್ರಪ್ಪ, ಈ.ಪ್ರಕಾಶ್‌, ಮಂಜು, ಚೇತನ್‌ ಕುಮಾರ್‌, ಮುಖ್ಯಶಿಕ್ಷಕಿ ವಿದ್ಯಾ ಯಾದವ್‌, ಯಾಸ್ಮಿನ್‌, ನಾಸೀನ್‌, ಪವಿತ್ರ, ಅಂಬುಜಾ ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.