ನೈತಿಕ ಹೊಣೆ ಹೊತ್ತು ರೇಣುಕಾಚಾರ್ಯ ರಾಜೀನಾಮೆ ನೀಡಲಿ

ದಲಿತರ ಮೀಸಲಾತಿ ಕಬಳಿಕೆಗೆ ಯತ್ನ ಅಕ್ಷಮ್ಯ ಅಪರಾಧ

Team Udayavani, Mar 28, 2022, 2:49 PM IST

rajiname

ದಾವಣಗೆರೆ: ಪುತ್ರಿ ಬೇಡ ಜಂಗಮ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಒಂದು ವಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರದೇಶ ಕಾಂಗ್ರೆಸ್‌ ಸಮಿತಿ ಪರಿಶಿಷ್ಟ ಜಾತಿ ಇಲಾಖೆ ರಾಜ್ಯ ಅಧ್ಯಕ್ಷ ಎಫ್‌.ಎಚ್‌. ಜಕ್ಕಪ್ಪನವರ ಒತ್ತಾಯಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಪಿ. ರೇಣುಕಾಚಾರ್ಯ ಅವರ ಪುತ್ರಿ ಬೆಂಗಳೂರು ಉತ್ತರ ತಹಶೀಲ್ದಾರ್‌ ಕಚೇರಿಯಿಂದ 2012ರ ನ.17ರಂದು ಬೇಡಜಂಗಮ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ರೇಣುಕಾಚಾರ್ಯರಿಗೆ ಗೊತ್ತಿದ್ದರೂ ಈವರೆಗೆ ಸುಮ್ಮನಿದ್ದಾರೆ. ಜಾತಿ ಪ್ರಮಾಣಪತ್ರವನ್ನೂ ರದ್ದುಪಡಿಸಿಲ್ಲ. ದಲಿತರ ಮೀಸಲಾತಿ ಕಬಳಿಕೆಗೆ ಯತ್ನಿಸಿರುವುದು ಅಕ್ಷಮ್ಯ ಕ್ರಿಮಿನಲ್‌ ಅಪರಾಧ. ಹಾಗಾಗಿ ಒಂದು ವಾರದಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ತಮ್ಮ ಪುತ್ರಿಗೆ ಸಹೋದರ ಎಂ.ಪಿ. ದಾರುಕೇಶಯ್ಯ ಬೇಡಜಂಗಮ ಪ್ರಮಾಣಪತ್ರ ಕೊಡಿಸಿದ್ದಾರೆ. ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವುದೇ ಮಹಾನ್‌ ಅಪರಾಧ. ಅದನ್ನು ಅವರೇ ಒಪ್ಪಿಕೊಂಡಿದ್ದಾರೆ. ಹಾಗಾಗಿ ರೇಣುಕಾಚಾರ್ಯ ಮತ್ತು ಅವರ ಸಹೋದರನನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಎಂ.ಪಿ. ರೇಣುಕಾಚಾರ್ಯ ಅವರು ಈ ವೇಳೆಗೆ ನೈತಿಕ ಹೊಣೆ ಅರಿತು ರಾಜೀನಾಮೆ ನೀಡಬೇಕಿತ್ತು. ಇನ್ನು ಒಂದು ವಾರದಲ್ಲಿ ರಾಜೀನಾಮೆ ನೀಡಬೇಕು. ಇಲ್ಲದೆ ಹೋದಲ್ಲಿ ಅವರು ರಾಜೀನಾಮೆ ನೀಡುವವರೆಗೂ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಹಂತದ ಹೋರಾಟ ನಡೆಸಲಾಗುವುದು. ಬೇಡಜಂಗಮರ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಜಾತಿ ಪ್ರಮಾಣಪತ್ರ ರದ್ದುಪಡಿಸಬೇಕು ಎಂದು ಕೋರಿ ಮಾ.28ರ ಸೋಮವಾರ ಬೆಂಗಳೂರಿನಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿ ರವೀಂದ್ರನಾಥ್‌ ಅವರಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಬಿ.ಎಂ. ವಾಗೀಶಸ್ವಾಮಿ ಎಂಬುವವರು ಮಾಯಕೊಂಡ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ದಾವಣಗೆರೆ ಜಿಲ್ಲಾಡಳಿತ ಕೂಡಲೇ ಸಮಗ್ರ ತನಿಖೆ ನಡೆಸಬೇಕು. ಪ್ರಮಾಣಪತ್ರ ಪಡೆದುಕೊಂಡಿರುವುದು ರುಜು ವಾತು ಆದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ದಾವಣಗೆರೆ ಜಿಲ್ಲೆಯಲ್ಲಿ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೇಡ ಜಂಗಮ ಜಾತಿ ಹೆಸರಲ್ಲಿ ಶಾಲೆಗಳ ಪ್ರವೇಶ ಪಡೆದಿರುವುದನ್ನೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಎಂ.ಪಿ. ರೇಣುಕಾಚಾರ್ಯ ಅವರೇ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವುದನ್ನು ಒಪ್ಪಿಕೊಂಡರೂ ಈ ವಿಷಯ ಸದನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ಸಿಎಂ, ಕಾನೂನು ಸಚಿವರು ರೇಣುಕಾಚಾರ್ಯ ಅವರನ್ನು ಸಮರ್ಥಿಸಿ ಕೊಂಡಿರುವುದು ಖಂಡನೀಯ ಎಂದರು. ಜಿಲ್ಲಾಧ್ಯಕ್ಷ ಬಿ.ಎಚ್‌. ವೀರಭದ್ರಪ್ಪ ಮಾತನಾಡಿ, ಲಿಂಗಾಯತ ಜಂಗಮರು ನಮ್ಮ ಗುರುಗಳು. ಅವರೇ ನಮ್ಮ ಅನ್ನವನ್ನು ಕಸಿಯುವುದು ಸರಿ ಅಲ್ಲ. ಮೂಲತಃ ಮಾಂಸಹಾರಿಗಳು, ಅಲೆಮಾರಿಗಳು, ಭಿಕ್ಷಾಟನೆ ಮಾಡುವ ಬೇಡ ಜಂಗಮರ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವವರ ವಿರುದ್ಧ ಹಂತ ಹಂತದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ನಾಗರಾಜನಾಯ್ಕ, ಬಿ.ಎಂ. ಈಶ್ವರ್‌, ಆದಾಪುರ ನಾಗರಾಜ್‌, ಜಿ.ಎನ್‌. ರಂಗಸ್ವಾಮಿ, ಎಸ್‌. ಶೇಖರಪ್ಪ, ಟಿ.ಎಸ್‌. ರಾಮಪ್ಪ, ಜಿ. ರಾಕೇಶ್‌, ಜಿ.ಎಚ್‌. ತಮ್ಮಣ್ಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.