ಗ್ರಾಮದೇವತೆ ಉತ್ಸವಕ್ಕೆ ಅಗತ್ಯ ಸಿದ್ದತೆ

ಹೈಕೋರ್ಟ್‌ ಆದೇಶ ಪಾಲಿಸದಿದ್ದರೆ ಕಠಿಣ ಕ್ರಮ

Team Udayavani, Mar 19, 2022, 11:07 AM IST

preparation

ಹರಿಹರ: ನಗರದಲ್ಲಿ ಮಾ.22ರಿಂದ ನಡೆಯುವ ಗ್ರಾಮದೇವತೆ ಉತ್ಸವಕ್ಕೆ ಹೊರಗಿನ ಲಕ್ಷಾಂತರ ಜನರು ನಗರಕ್ಕೆ ಆಗಮಿಸಲಿದ್ದು, ಅಧಿಕಾರಿಗಳು ಕನಿಷ್ಟ ಸಿದ್ಧತೆ ಮಾಡಿಕೊಂಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ ಶುಕ್ರವಾರ ಉತ್ಸವ ಸಮಿತಿ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕವಾಗಿ ಕೋಣ ಹಾಗೂ ಮತ್ತಿತ್ತರ ಪ್ರಾಣಿಬಲಿ ನೀಡುವುದನ್ನು ನಿಷೇಧಿಸಲಾಗಿದ್ದು, ಹೈಕೋರ್ಟ್‌ ಆದೇಶ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ಸವ ಸಮಿತಿ ಸದಸ್ಯರಿಗೆ ಸೂಚಿಸಿದರು.

ನಗರದಲ್ಲಿ ಎಲ್ಲೆಂದರಲ್ಲಿ ಫ್ಲೆಕ್ಸ್‌ ಅಳವಡಿಸಿದ್ದು, ಅಂಗಡಿ ಮುಂಗಟ್ಟುಗಳ ವ್ಯಾಪಾರಕ್ಕೆ ಮಾತ್ರವಲ್ಲದೆ, ಜನ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪ ಬಂದಿದ್ದು, ಈ ಬಗ್ಗೆ ನಿಗಾ ವಹಿಸಬೇಕು ಮತ್ತು ಅನಧಿಕೃತ ಫ್ಲೆಕ್ಸ್‌ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಉತ್ಸವ ಸಮಿತಿಯಿಂದ ಹಬ್ಬದ ವಿಧಿವಿಧಾನಗಳ ಆಚರಣೆಗಳ ಬಗ್ಗೆ ಸಂಪೂರ್ಣ ಮಾಹಿತಿ ಮಾಹಿತಿ ಪಡೆಯಲಾಗಿದೆ. ಅದರನ್ವಯ ವಿವಿಧ ಇಲಾಖಾಧಿಕಾರಿಗಳು ಅಗತ್ಯ ಸಿದ್ಧತೆ ಮತ್ತು ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ ಎಂದರು.

ಸಿಪಿಐ ಸತೀಶ್‌ ಕುಮಾರ್‌ ಯು. ಮಾತನಾಡಿ, ಉತ್ಸವದ ನಿಮಿತ್ತ ಇಲಾಖೆಯಿಂದ 5 ಸಿಪಿಐ, 15 ಪಿಎಸೈ ಸೇರಿದಂತೆ ಹೆಚ್ಚುವರಿಯಾಗಿ 150 ಪೋಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ. ವಾಹನ ಸಂಚಾರಕ್ಕೆ ತೊಡಕಾಗದಂತೆ ಮಾ.22, 23 ಮತ್ತು 24ರಂದು ನಗರಕ್ಕೆ ಬರುವ ನಾಲ್ಕು ದಿಕ್ಕಿನಲ್ಲಿ ಸಂಚಾರ ಮಾರ್ಗ ಬದಲಿಸಲಾಗುತ್ತಿದೆ. ದೇವಸ್ಥಾನ ರಸ್ತೆಯ ಚೌಕಿ ಮನೆ ಹಾಗೂ ಮಾಜೇನಹಳ್ಳಿ ಗ್ರಾಮದೇವತೆ ದೇವಸ್ಥಾನದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗುತ್ತದೆ ಎಂದರು.

ಪೌರಾಯುಕ್ತೆ ಎಸ್‌. ಲಕ್ಷ್ಮಿ ಮಾತನಾಡಿ , ನಗರಕ್ಕೆ ನೀರು ಸರಬರಾಜು ಮಾಡುವ ಕೌಲತ್ತು ಗ್ರಾಮದ ಪಂಪ್‌ಹೌಸ್‌ ದುರಸ್ತಿ ನಿಮಿತ್ತ ನೀರಿನ ಸಮಸ್ಯೆಯಾಗಿತ್ತು, ಉತ್ಸವದ ವೇಳೆ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದು. ಹೆಸ್ಕಾಂ ಅಧಿಕಾರಿಗಳಿಗೆ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಮನವಿ ಮಾಡಿಕೊಂಡಿದ್ದೇವೆ ಎಂದರು.

ಇನ್ನೆರಡು ದಿನದಲ್ಲಿ ನಗರದ ಎಲ್ಲಾ ವಾರ್ಡ್‌ಗಳನ್ನು ಸಂಪೂರ್ಣ ಸ್ವತ್ಛಗೊಳಿಸಲಾಗುವುದು. ಮಲೇಬೆನ್ನೂರು ಹಾಗೂ ಹೊನ್ನಾಳಿಯಿಂದ ಹೆಚ್ಚುವರಿ ಪೌರಕಾರ್ಮಿಕರನ್ನು ಕರೆಸಿಕೊಳ್ಳಲಾಗುತ್ತಿದೆ. ಹೆಚ್ಚುವರಿಯಾಗಿ 4 ನೀರಿನ ಟ್ಯಾಂಕರ್‌ ತರಿಸಿದ್ದು, ಯಾವುದೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆಯಾದರೆ ತಕ್ಷಣ ಟ್ಯಾಂಕರ್‌ ಕಳಿಸಲಾಗುವುದು. ದೇವಸ್ಥಾನ ರಸ್ತೆಯ ಚೌಕಿ ಮನೆ ಬಳಿ ತಾತ್ಕಾಲಿಕ ಪೈಪ್‌ ಅಳವಡಿಸಿ ನೀರು ಪೂರೈಸಲಾಗುವುದು. ಅಲ್ಲಲ್ಲಿ ಮಹಿಳೆಯರಿಗೆ ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ನಗರದಲ್ಲಿ ಅಳವಡಿಸಿರುವ ಕೃತಕ ಫ್ಲೆಕ್ಸ್‌ಗಳ ಬಗ್ಗೆ ಮಾಹಿತಿ ನೀಡದೆ ಪೌರಾಯುಕ್ತರು ಸಭೆಯಿಂದ ನಿರ್ಗಮಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ|ಚಂದ್ರಮೋಹನ ಮಾತನಾಡಿ, ಉತ್ಸವದ ವೇಳೆ ಸಾರ್ವಜನಿಕರು ಆರೋಗ್ಯ ಕಡೆಗಣಿಸಬಾರದು. ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಲಾಗುತ್ತಿದ್ದು, ಅಗತ್ಯವಿದ್ದವರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.