ಖ್ಯಾತ ನಾಣ್ಯ ಸಂಗ್ರಾಹಕ ಎಚ್‌. ಖಂಡೋಬ ರಾವ್‌ಗೆ ಅಭಿನಂದನೆ,ಅಮೂಲ್ಯ ಸಿರಿ ಗ್ರಂಥ ಬಿಡುಗಡೆ


Team Udayavani, Oct 20, 2021, 6:39 PM IST

1-m

 ಶಿವಮೊಗ್ಗ: ಆಸೆ, ದ್ವೇಷ ಬಿಟ್ಟರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂದು ಖ್ಯಾತ ನಾಣ್ಯ ಸಂಗ್ರಾಹಕ ಎಚ್‌. ಖಂಡೋಬ ರಾವ್‌ ಹೇಳಿದರು. ಕುವೆಂಪು ರಂಗಮಂದಿರದಲ್ಲಿ ಖಂಡೋಬರಾವ್‌ ಅಭಿನಂದನಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಮತ್ತು ಅಮೂಲ್ಯ ಸಿರಿ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಮನುಷ್ಯ ಸಾಯುವ ಮೊದಲು ಏನಾದರೂ ಸಾಧನೆ ಮಾಡಲೇಬೇಕು. ಸಾಧನೆ ಹೇಗೆ ಮಾಡಲು ಸಾಧ್ಯ ಎಂದರೆ ಮೊದಲು ಆಸೆ ಮತ್ತು ದ್ವೇಷವನ್ನು ಬಿಡಬೇಕು. ಬಹುಶಃ ಆಸೆ ಮತ್ತು ದ್ವೇಷ ಬಿಟ್ಟಿದ್ದರೆ ರಾಮಾಯಣ ಮತ್ತು ಮಹಾಭಾರತದ ಕತೆಗಳು ನಡೆಯುತ್ತಲೇ ಇರಲಿಲ್ಲ. ಆಸೆ ಬದಲು ಜ್ಞಾನ, ದ್ವೇಷದ ಬದಲು ಸಾಧನೆ ಮಾಡಬೇಕು ಎಂದರು. ನನ್ನ ಬಗ್ಗೆ ಅಭಿಮಾನಿಗಳು, ಗೆಳೆಯರು, ತುಂಬು ಹೃದಯದಿಂದ ಮಾತನಾಡಿದ್ದಾರೆ. ನನಗೊಂದು ಉನ್ನತ ಸ್ಥಾನ ಕೊಟ್ಟಿದ್ದಾರೆ. ಅಭಿನಂದನಾ ಸ್ಥಾನ ಕೊಟ್ಟಿದ್ದಾರೆ. ಅಭಿನಂದನಾ ಸಲ್ಲಿಸಿದ್ದಾರೆ. ನಮ್ಮ ಪರಿವಾರದವರು ಮತ್ತು ನನ್ನ ಪತ್ನಿಯ ಕಡೆಯವರು ವಿಶೇಷವಾಗಿ ಅಭಿನಂದಿಸಿದ್ದು ನನಗೆ ಹೃದಯ ತುಂಬಿ ಬಂದಿದೆ. ನಿಮ್ಮೆಲ್ಲರ ಪ್ರೀತಿಗೆ ನಾನು ಸದಾ ಋಣಿಯಾಗಿದ್ದೇನೆ ಎಂದರು. ಆದರ್ಶದ ಬದುಕು ನಮ್ಮದಾಗಬೇಕು. ಮನುಷ್ಯ ಒಳ್ಳೆಯ ಗುಣಗಳನ್ನು ಮತ್ತು ನಿರಂತರ ಚಟುವಟಿಕೆಯನ್ನು ಬೆಳೆಸಿಕೊಂಡರೆ ಉತ್ತಮ ಜೀವನ ಮತ್ತು ಸಂಸ್ಕಾರವನ್ನು ಪಡೆಯಬಹುದಾಗಿದೆ. ನನ್ನೆಲ್ಲಾ ಸಾಧನೆಗೆ ಗೆಳೆಯರ ಜೊತೆಗೆ ನನ್ನ ಪತ್ನಿಯೂ ಮುಖ್ಯ ಎಂದ ಅವರು, ಬಯಲು ಸೀಮೆಯ ಹುಡುಗ ನಾನು ಮಲೆನಾಡ ಹುಡುಗಿ ನನ್ನ ಪತ್ನಿ. ನಾನು ಪತ್ನಿಯನ್ನು ತುಂಬಾ ಪ್ರೀತಿಸುತ್ತಿದ್ದೆ. ಅವಳು ಹೋದ ಮೇಲೆ ಅವಳಿಗಾಗಿಯೇ ಈ ಅಮೂಲ್ಯ ಶೋಧ ನಿರ್ಮಿಸಿದೆ ಎಂದು ಭಾವುಕರಾಗಿ ನುಡಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌. ರುದ್ರೇಗೌಡ ಮಾತನಾಡಿ, ಖಂಡೋಬ ರಾವ್‌ ಅಂತಹವರನ್ನು ಸನ್ಮಾನಿಸುವುದು ನಮ್ಮ ಕರ್ತವ್ಯ. ಅವರ ವ್ಯಕ್ತಿತ್ವವೇ ಬಹು ದೊಡ್ಡದು. ಅವರ ಸಾಧನೆ ಮತ್ತಷ್ಟು ದೊಡ್ಡದು. ಅವರ ಅಮೂಲ್ಯ ಶೋಧದ ನಿರ್ಮಾಣ ಬೆಲೆ ಕಟ್ಟಲು ಆಗುವುದಿಲ್ಲ. ಅವರು ಸಂಗ್ರಹಿಸಿದ ನಾಣ್ಯಗಳು, ಪುಸ್ತಕಗಳು, ಹಳೆಯ ಕಾಲದ ಪರಿಕರಗಳು, ಎಲೆಕ್ಟಿÅಕ್‌ ವಸ್ತುಗಳು, ಆಟಿಕೆಗಳು, ಅಡುಗೆ ಮನೆ ವಸ್ತುಗಳು ಹೀಗೆ ಎಲ್ಲವೂ ಕೂಡ ಅಮೂಲ್ಯವಾದವೇ. ಅವರೊಬ್ಬ ಸಂಸ್ಕೃತಿಯ ಸಂತ. ಅಂತಹವರನ್ನು ಸನ್ಮಾನಿಸುವುದು ಮತ್ತು ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡುವುದು ಅತ್ಯಂತ ಸಾರ್ಥಕದ ಕ್ಷಣ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕಿ ಕಿರಣ್‌ ಆರ್‌. ದೇಸಾಯಿ, ಸನ್ಮಾನಿಸುವುದು ನಮ್ಮ ಕರ್ತವ್ಯ. ಇದರಿಂದ ಸಾಧಕರ ಸಾಧನೆಗಳು ಪ್ರಕಟಗೊಳ್ಳುತ್ತವೆ. ಖಂಡೋಬ ರಾವ್‌ ಕೇವಲ ಇತಿಹಾಸ ತಜ್ಞರಲ್ಲ, ನಾಣ್ಯ ಸಂಗ್ರಾಹಕರಲ್ಲ, ಕವಿಗಳಲ್ಲ. ಅವರೊಬ್ಬ ಮಾನವೀಯತೆಯುಳ್ಳವರು ಎಂದರು.

ಅಭಿನಂದನಾ ಗ್ರಂಥ ಕುರಿತು ಸಮಿತಿ ಸಂಚಾಲಕ ಎಂ. ಸಕಲೇಶ್‌ ಮಾತನಾಡಿದರು. ಇದೇ ಸಂದರ್ಭದಲ್ಲಿ ಖಂಡೋಬ ರಾವ್‌ ಅವರನ್ನು ಸ್ನೇಹಿತರು, ನೆಂಟರು, ವಿವಿಧ ಸಂಘ, ಸಂಸ್ಥೆಗಳಿಂದ ಗೌರವಿಸಲಾಯಿತು. ಕುವೆಂಪು ವಿವಿ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ, ಅಭಿನಂದನಾ ಸಮಿತಿ ಕಾರ್ಯಾಧ್ಯಕ್ಷ ಟಿ.ಆರ್‌. ಅಶ್ವತ್ಥನಾರಾಯಣ ಶೆಟ್ಟಿ, ಬಾಗಲಕೋಟೆಯ ಉದ್ಯಮಿ ಮಾರುತಿ ರಾವ್‌ ಶಿಂಧೆ ಮುಂತಾದವರು ಇದ್ದರು. ಎಸ್‌.ಬಿ. ಅಶೋಕ್‌ ಕುಮಾರ್‌ ಸ್ವಾಗತಿಸಿದರು. ರಮೇಶ್‌ ಬಾಬು ಜಾಧವ್‌ ನಿರೂಪಿಸಿದರು.

ಅನೇಕರು ವಿಭಿನ್ನ ರೀತಿಯಲ್ಲಿ ತಮ್ಮ ಆಸ್ತಿ ಎಂದು ಹೇಳುತ್ತಾರೆ. ಕೆಲವರಿಗೆ ಪುಸ್ತಕವೇ ಆಸ್ತಿ. ಕೆಲವರಿಗೆ ಹಿರಿಯರು ಬಿಟ್ಟು ಹೋದ ಹೊಲ ಗದ್ದೆಗಳೇ ಆಸ್ತಿ ಎನ್ನುತ್ತಾರೆ. ಆದರೆ, ನಿಜವಾದ ಆಸ್ತಿ ಯಾವುದೆಂದರೆ ಹಿಂದಿನವರು ಬದುಕಿದ ಘಟನೆಗಳು. ಅವರು ಬಾಳಿ ಬದುಕಿದ ಸಂದರ್ಭಗಳು, ಹಳೆಯ ವಸ್ತುಗಳು. ಇವೇ ಮುಂದಿನ ಪೀಳಿಗೆಗೆ ಆಸ್ತಿ ಎಂದು ಪರಿಗಣಿಸಿ ಅದನ್ನು ಸಂರಕ್ಷಿಸಿ ಪುರಾತನ ವಸ್ತುಗಳ ಸಂಗ್ರಹವೇ ಮುಂದಿನ ಪೀಳಿಗೆಗೆ ಆಸ್ತಿ ಎಂದು ತೋರಿಸಿಕೊಟ್ಟವರು ಖಂಡೋಬ ರಾವ್‌ ಅವರು. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬೆಕ್ಕಿನ ಕಲ್ಮಠ

ನಿನ್ನೆ ಎಂಬುದು ಸತ್ತು ಹೋಗಿದೆ. ಇಂದು ಸಾಲ ಮಾಡಿಯಾದರೂ ತುಪ್ಪ ತಿಂದು ಹೋಗಿಬಿಡೋಣ ಎನ್ನುವ ಈ ಕಾಲಘಟ್ಟದಲ್ಲಿ ನಾವು ಏನು ಎಂದು ಮರೆತು ಗೊತ್ತು ಗುರಿ ಇಲ್ಲದೇ ಪಯಣ ಮಾಡುತ್ತಿರುವ ಈ ಸಂದರ್ಭದಲ್ಲಿ ಸಮಾಜಕ್ಕೆ ಆಸ್ತಿ ಎಂದರೆ ಯಾವುದು ಎಂದು ಅರಿವು ಮೂಡಿಸುವ ಖಂಡೋಬ ರಾವ್‌ ಅವರ ಕಾರ್ಯ ಅನುಕರಣೀಯ. z

ಡಾ| ವಿಶ್ವ ಸಂತೋಷಭಾರತಿ ಸ್ವಾಮೀಜಿ, ಬಾರ್ಕೂ ರು ಮಹಾಸಂಸ್ಥಾನ 

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

“ಬಿಜೆಪಿ ಸರ್ಕಾರದಿಂದ ಜನ ವಿರೋಧಿ ನೀತಿ’

“ಬಿಜೆಪಿ ಸರ್ಕಾರದಿಂದ ಜನ ವಿರೋಧಿ ನೀತಿ’

25clean

ಶೌಚಾಲಯ ಸ್ವಚ್ಛಗೊಳಿಸಿದ ಬಿಇಒ ತಳವಾರ

1ddsd

ತೀರ್ಥಹಳ್ಳಿ: ಸರ್ಕಾರಿ ರಜೆಯಲ್ಲಿ ಹಂಚು ಸಾಗಾಟ; ಅಧಿಕಾರಿಗಳು ಗಮನಿಸಲಿ!

ಅಧಿಕಾರಶಾಹಿಯಿಂದ ವ್ಯಕ್ತಿ ಸ್ವಾತಂತ್ರ್ಯ ನಾಶ

ಅಧಿಕಾರಶಾಹಿಯಿಂದ ವ್ಯಕ್ತಿ ಸ್ವಾತಂತ್ರ್ಯ ನಾಶ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.