Alnavar: ದೇಶಕ್ಕೆ ಒಳ್ಳೆಯ ಕೊಡುಗೆ ನೀಡಲು ಸನ್ನದ್ಧರಾಗಿ


Team Udayavani, Oct 23, 2023, 11:10 AM IST

Alnavar: ದೇಶಕ್ಕೆ ಒಳ್ಳೆಯ ಕೊಡುಗೆ ನೀಡಲು ಸನ್ನದ್ಧರಾಗಿ

ಅಳ್ನಾವರ: ಧಾರವಾಡದ ನೆಹರು ಯುವ ಕೇಂದ್ರ, ಜಿಲ್ಲಾಡಳಿತ, ಜಿಪಂ, ತಾಪಂ, ಪಪಂ, ನಾಗರಿಕ ಮಿತ್ರ ಸಂಸ್ಥೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ತಾಲೂಕು ಮಟ್ಟದ “ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮ ನಡೆಯಿತು.

ಮಾಜಿ ಸೈನಿಕ ಸಂಘದ ಅಧ್ಯಕ್ಷ ಅಜ್ಜಪ್ಪ ಕುರುಬರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕರು ಪದವಿ ಶಿಕ್ಷಣ ಪಡೆದ ನಂತರ ದೇಶ ಸೇವೆಗೆ ಸನ್ನದ್ಧರಾಗಬೇಕು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ಮೂಲಕ ದೇಶಕ್ಕಾಗಿ ಒಳ್ಳೆಯ ಕೊಡುಗೆ ನೀಡಲು ಮುಂದಾಗಬೇಕು.

ಪ್ರತಿಯೊಬ್ಬ ಯುವಕನಿಗೆ ಮಿಲಿಟರಿ ತರಬೇತಿ ದೊರೆತರೆ ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ ಬೇರು ಸಮೇತ ಕಿತ್ತು ಹೋಗಲು ಸಾಧ್ಯ ಎಂದರು. ನೆಹರು ಯುವ ಕೇಂದ್ರದ ಅಧಿಕಾರಿ ಗೌತಮರೆಡ್ಡಿ ಮಾತನಾಡಿ, ಅಮೃತ ಕಳಸ ಸಂಗ್ರಹ, ಜಾಗೃತಿ ಜಾಥಾ, ಮಾಜಿ ಸೈನಿಕರ ಸತ್ಕಾರ, ದೇಶಕ್ಕಾಗಿ ಪ್ರಮಾಣ ವಚನ ಸ್ವೀಕಾರ ಮುಂತಾದ ಅರ್ಥಪೂರ್ಣ ಕಾರ್ಯದ ಜೊತೆಗೆ ಈ ಮಹೋನ್ನತ ಅಭಿಯಾನವನ್ನು ಯಶಸ್ವಿಗೊಳಿಸೋಣ. ಇಲ್ಲಿ ಸಂಗ್ರಹಿಸಿದ ಕಳಸವನ್ನು ತಾಲೂಕಿನ ಪ್ರತಿನಿಧಿಯಾಗಿ ವಿದ್ಯಾರ್ಥಿನಿ ಸಂಜನಾ ಕುನ್ನೂರಕರ ದೆಹಲಿಗೆ ತೆರಳಿ ಹಸ್ತಾಂತರಿಸುವಳು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಪ್ರವೀಣ ಆನಂದಕಂದಾ ಮಾತನಾಡಿ, ನಮಗೆ ಸ್ವಾತಂತ್ರ್ಯ ದೊರೆಯಲು ಶ್ರಮಿಸಿದ ಸೈನಿಕರನ್ನು ನೆನೆಯುವುದು ನಮ್ಮ ಧರ್ಮ. ಸ್ವಾತಂತ್ರ್ಯ ದೊರೆತ 75ನೇ ವರ್ಷಾಚರಣೆ ಪ್ರಯುಕ್ತ ದೇಶದುದ್ದಕ್ಕೂ ಸಂಗ್ರಹಿಸಿದ ಮಣ್ಣು ಮತ್ತು ಅಕ್ಕಿಯನ್ನು ದೆಹಲಿಯಲ್ಲಿ ಅಮೃತ ಮಹೋತ್ಸವ ಸ್ಮಾರಕ ನಿರ್ಮಾಣಕ್ಕೆ ಬಳಸಲಾಗುವುದು ಎಂದರು.

ಸನ್ಮಾನ: ಮಾಜಿ ಸೈನಿಕ ಸಂಘದ ಅಧ್ಯಕ್ಷ ಅಜ್ಜಪ್ಪ ಕುರುಬರ, ಎ.ಎ. ಡಿಸೋಜಾ, ಎಚ್‌ .ಐ. ದೇಸಾಯಿ, ಶಿವಾನಂದ ಅಂಬ್ಲಿ, ಶಿವಾಜಿ ಕುಣಕಿಕೊಪ್ಪ, ಮಹಾದೇವ ಕುಂಬಾರ ಅವರನ್ನು ಸತ್ಕರಿಸಲಾಯಿತು. ವಿವಿಧ ಬೀದಿಯಲ್ಲಿ ಜಾಗೃತಿ ಜಾಥಾ ನಡೆಯಿತು. ಕಲಘಟಗಿ ತಾಲೂಕಿನ ಸೋಮನಕೊಪ್ಪ ಗ್ರಾಮದ ಜೈ ಹನುಮಾನ ಕೋಲಾಟ ತಂಡದವರು ಕೋಲಾಟ ಆಡುತ್ತಾ ಜಾಗೃತಿ ಗೀತೆ ಹಾಡಿದರು.

ನಾಗರಿಕ ಮಿತ್ರ ಸಂಸ್ಥೆಯ ಅಧ್ಯಕ್ಷ ಎಸ್‌. ಎಂ. ಮುಲ್ಲಾ, ಡಾ| ಉಮಾ ಪೂಜಾರ, ಡಾ| ಸುರೇಶ ದೊಡ್ಡಮನಿ, ಸಿದ್ದೇಶ್ವರ ಕಣಬರ್ಗಿ,
ಅಶ್ವಿ‌ನಿ ನಿಪ್ಪಾಣಿ, ನಾಗರಾಳ, ಪಿ.ಬಿ. ಚಾರಿ, ಸುಶೀಲಾ ಕರ್ಜಗಿ ಇದ್ದರು. ರೂಪಾ ಮುನವಳ್ಳಿ ಸ್ವಾಗತಿಸಿದರು. ತೇಜಲ ಠಕ್ಕಣ್ಣವರ ಹಾಗೂ ಶ್ವೇತಾ ದುಗ್ಗಾಣಿ ನಿರೂಪಿಸಿದರು. ಮುಷರಫ್‌ ಯಳ್ಳೂರ ವಂದಿಸಿದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.