ಅಂಬೇಡ್ಕರ್‌ ಪುತ್ಥಳಿ ತೆರವು ಯತ್ನ; ಮಾತಿನ ಚಕಮಕಿ


Team Udayavani, Apr 17, 2022, 9:31 AM IST

2

ಹುಬ್ಬಳ್ಳಿ: ಇಲ್ಲಿನ ಗದಗ ರಸ್ತೆ ಆರ್‌ಜಿಎಸ್‌ ರೈಲ್ವೆ ಕಾಲೋನಿಯ ವಿನೋಬಾನಗರದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿಯನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಶನಿವಾರ ಮತ್ತೆ ತೆರವುಗೊಳಿಸಲು ಮುಂದಾದಾಗ ಪೊಲೀಸರು ಮತ್ತು ಸ್ಥಳೀಯರು, ದಲಿತ ಪರ ಸಂಘಟನೆಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ಅಂಬೇಡ್ಕರ್‌ ಪುತ್ಥಳಿ ತೆರವು ಮಾಡಿದರೆ ಅವರಿಗೆ ಅವಮಾನ ಮಾಡಿದಂತೆ. ಯಾವುದೇ ಕಾರಣಕ್ಕೂ ಪುತ್ಥಳಿ ತೆರವುಗೊಳಿಸಲು ಬಿಡುವುದಿಲ್ಲ ಎಂದು ಪೊಲೀಸರ ಕ್ರಮ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು, ಸದಸ್ಯರು ಹಾಗೂ ಕಾಂಗ್ರೆಸ್‌ ಮುಖಂಡರು ಪ್ರತಿಭಟಿಸಿದರು.

ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ನಂತರ ಪೊಲೀಸರು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿ, ಸೋಮವಾರ ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಿವಾದ ಬಗೆಹರಿಸಿಕೊಳ್ಳಲು ನಿರ್ಧರಿಸಿದರು.

ತದನಂತರ ಪರಿಸ್ಥಿತಿ ತಿಳಿಗೊಂಡಿತು. ಕಾಲೋನಿಯಲ್ಲಿ ರೈಲ್ವೆ ಇಲಾಖೆಗೆ ಸೇರಿದ ಮೈದಾನದಲ್ಲಿ ಕಟ್ಟೆ ಕಟ್ಟಿದ್ದ ಸ್ಥಳೀಯರು, ಅಲ್ಲಿ ಅಂಬೇಡ್ಕರ್‌ ಪುತ್ಥಳಿ ಪ್ರತಿಷ್ಠಾಪಿಸಿದ್ದರು. ಆರ್‌ ಪಿಎಫ್‌ನವರು ಗುರುವಾರ ಬೆಳಗ್ಗೆ ಅದನ್ನು ತೆರವುಗೊಳಿಸಿ, ತಮ್ಮ ವಶದಲ್ಲಿಟ್ಟುಕೊಂಡಿದ್ದರು. ಇದನ್ನು ವಿರೋಧಿಸಿ ಸ್ಥಳೀಯರು ಹಾಗೂ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದರು.

ಆಗ ಮುಖಂಡರಿಗೆ ಪುತ್ಥಳಿ ಹಿಂದಿರುಗಿಸಲಾಗಿತ್ತು. ಸ್ಥಳೀಯರು ಪುನಃ ಅದೇ ಜಾಗದಲ್ಲಿ ಪುತ್ಥಳಿ ಮರು ಪ್ರತಿಷ್ಠಾಪಿಸಿದ್ದರು. ಶನಿವಾರ ಬೆಳಗ್ಗೆ ಮತ್ತೆ ಆರ್‌ಪಿಎಫ್‌ ಸಿಬ್ಬಂದಿ ಅದನ್ನು ತೆರವುಗೊಳಿಸಲು ಜೆಸಿಬಿ ತಂದಿದ್ದು ವಿವಾದಕ್ಕೆ ಕಾರಣವಾಯಿತು.

ಸಮತಾ ಸೇನೆಯ ಗುರುನಾಥ ಉಳ್ಳಿಕಾಶಿ ಮಾತನಾಡಿ, ಈ ಭಾಗದಲ್ಲಿ ಸ್ವತ್ಛತೆ ಕಾಪಾಡಿಕೊಳ್ಳಲು ಹಾಗೂ ಡಾ| ಅಂಬೇಡ್ಕರ್‌ ಅವರ ಮೇಲೆ ಅಭಿಮಾನದಿಂದ ಯಾರೋ ಪುತ್ಥಳಿ ಸ್ಥಾಪಿಸಿದ್ದಾರೆ. ಅದನ್ನು ತೆರವು ಮಾಡುವುದು ಬೇಡ. ಈ ಜಾಗ ಉದ್ಯಾನವನ್ನಾಗಿ ಅಭಿವೃದ್ಧಿಪಡಿಸುವಂತೆ ಸೋಮವಾರ ನೈಋತ್ಯ ರೈಲ್ವೆ ಹಿರಿಯ ಅಧಿಕಾರಿಗಳಿಗೆ ಲಿಖೀತ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.

ವಿದ್ಯಾನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ, ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲ, ಮಹೇಶ ದಾಬಡೆ, ವಿಜಯ ಕರ ಮೊದಲಾದವರಿದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.