ಇನ್ನಷ್ಟು ಕೋವಿಡ್‌ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಒತ್ತು

Team Udayavani, May 24, 2020, 6:52 AM IST

ಇನ್ನಷ್ಟು ಕೋವಿಡ್‌ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಒತ್ತು

ಧಾರವಾಡ: ಹೊರ ರಾಜ್ಯಗಳಿಂದ ಬರುತ್ತಿರುವವರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಕೋವಿಡ್‌ ಲಕ್ಷಣಗಳಿರುವ ಜನರನ್ನು ತಪಾಸಣೆಗೊಳಪಡಿಸಲು ಮೂಗು-ಗಂಟಲು ದ್ರವ ಸಂಗ್ರಹಣಾ ಕೇಂದ್ರಗಳನ್ನು ಹೆಚ್ಚು ಸ್ಥಾಪಿಸಲು ಒತ್ತು ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದಲೂ ಈಗ ಮುಕ್ತ ಪ್ರವೇಶ ಅವಕಾಶ ಇರುವುದರಿಂದ ಕೆಮ್ಮು, ನೆಗಡಿ, ಜ್ವರ, ತೀವ್ರ ಉಸಿರಾಟದ ತೊಂದರೆಗಳ ಲಕ್ಷಣಗಳಿರುವ ಜನರನ್ನು ಕೋವಿಡ್‌ ಪರೀಕ್ಷೆಗೊಳಪಡಿಸಲು, ಹುಬ್ಬಳ್ಳಿ  ಧಾರವಾಡ ಅವಳಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮೂಗು ಮತ್ತು ಗಂಟಲು ದ್ರವ ಸಂಗ್ರಹಣಾ ಕೇಂದ್ರಗಳನ್ನು ಹೆಚ್ಚು ಸ್ಥಾಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮೊಬೈಲ್‌ ಸ್ವಾಬ್‌ ಸಂಗ್ರಹಣಾ ಕೇಂದ್ರ ಸೇರಿ 11 ಘಟಕಗಳಿದ್ದು, ಇವುಗಳ ಸಂಖ್ಯೆ ಕನಿಷ್ಠ 20 ಕ್ಕೆ ಏರಿಕೆಯಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ  ಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ನಗರ ಆರೋಗ್ಯ ಕೇಂದ್ರಗಳು ಮತ್ತು ಗ್ರಾಮೀಣ ಭಾಗದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಗುರುತಿಸಿ, ಅಗತ್ಯ ಉಪಕರಣಗಳನ್ನು ಒದಗಿಸಬೇಕು ಎಂದು ಸೂಚಿಸಿದರು.

ಕಿಮ್ಸ್‌ ಹಾಗೂ ಡಿಮ್ಹಾನ್ಸ್‌ನಲ್ಲಿರುವ ಕೋವಿಡ್‌ -19 ಪ್ರಯೋಗಾಲಯಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಅವುಗಳ ಸಾಮರ್ಥ್ಯ ಹೆಚ್ಚಿಸಲು ಅಗತ್ಯವಾಗಿರುವ ಬಯೋ ಸೇಪ್ಟಿ ಕ್ಯಾಬಿನೆಟ್‌ ಸೇರಿದಂತೆ ಆಧುನಿಕ ಉಪಕರಣಗಳು ಮತ್ತು ತರಬೇತಿ ಹೊಂದಿದ ಮಾನವ ಸಂಪನ್ಮೂಲ ಒದಗಿಸಲಾಗುವುದು
ಎಂದರು.

ಸೇವಾಸಿಂಧು ವೆಬ್‌ ಪೋರ್ಟಲ್‌ ಮೂಲಕ ಹೊರ ರಾಜ್ಯಗಳಿಂದ ಜಿಲ್ಲೆಗೆ ಬರಲು ನೋಂದಣಿ ಮಾಡಿಕೊಂಡವರು,ಈಗಾಗಲೇ ಬಂದಿರುವವರ ಸಮಗ್ರ ಪರಿಶೀಲನೆ ಮಾಡಬೇಕೆಂದು ಸೂಚಿಸಿದರು. ಜಿಪಂ ಸಿಇಒ ಡಾ|ಬಿ.ಸಿ.ಸತೀಶ್‌ ಮಾತನಾಡಿ, ಮುಂಬರುವ ದಿನಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾದರೂ ಸಹ ಎಲ್ಲರಿಗೂ ಸಮರ್ಪಕ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಈಗಲೇ ನಿಗದಿತ ಕೋವಿಡ್‌ ಆಸ್ಪತ್ರೆಗಳನ್ನು ಗುರುತಿಸಿ, ಕೋವಿಡ್‌ ಪ್ರಕರಣಗಳ ಚಿಕಿತ್ಸೆಗಾಗಿ ಹಾಸಿಗೆಗಳನ್ನು ಮೀಸಲಿಡುವ ಏರ್ಪಾಟು ಮಾಡಿಕೊಳ್ಳಬೇಕು ಎಂದರು.

ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ ಮದೀನಕರ್‌, ಕಿಮ್ಸ್‌ ತಜ್ಞವೈದ್ಯ ಡಾ|ಲಕ್ಷ್ಮೀಕಾಂತ ಲೋಕರೆ ಇದ್ದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.