Hubli:ಬಸ್‌ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಅಮಾನತು ಶಿಕ್ಷೆ


Team Udayavani, May 25, 2024, 11:29 AM IST

hubli

ಹುಬ್ಬಳ್ಳಿ: ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ತಂದೊಡ್ಡಿದೆ. ಬಸ್‌ ಮೇಲ್ಛಾವಣಿ ಸೋರದಿದ್ದರೂ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ಅದನ್ನು ಚಿತ್ರೀಕರಣ ಮಾಡಿದ ನಿರ್ವಾಹಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಚಾಲಕ ಹನುಮಂತ ಕಿಲ್ಲೇದಾರ ಹಾಗೂ ನಿರ್ವಾಹಕಿ ಎಚ್‌.ಅನಿತಾ ಅಮಾನತಾದವರು. ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್‌ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌ನ ವಾಸ್ತವತೆ ಕುರಿತು ವರದಿ ನೀಡಲು ವಿಭಾಗೀಯ ತಾಂತ್ರಿಕ ಶಿಲ್ಪಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್‌ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು.

ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಯಾವುದೇ ದೂರು ದಾಖಲು ಮಾಡಿಲ್ಲ. ಇನ್ನೂ ಈ ವಿಡಿಯೋ ಕುರಿತು ಚಾಲನಾ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆದಾಗ ತಾವು ಮನರಂಜನೆಗಾಗಿ ಚಿತ್ರೀಕರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ವರದಿ ಆಧಾರದ ಮೇಲೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಚಾಲಕ-ನಿರ್ವಾಹಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ವಿಡಿಯೋ ಚಿತ್ರೀಕರಣವನ್ನು ಮೇ 23ರಂದು ಮಾಡಿದ್ದಾರೆ. ನಮ್ಮ ಗಮನಕ್ಕೆ 24ರಂದು ಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ವಾಹನ ಪರಿಶೀಲನೆಗೆ ಸೂಚಿಸಿದ್ದೆ. ವಾಹನದಲ್ಲಿ ಅಂತಹ ನ್ಯೂನತೆ ಇರಲಿಲ್ಲ ಎಂದು ವರದಿ ನೀಡಿದ್ದಾರೆ. ಚಾಲಕನನ್ನು ಕರೆಯಿಸಿ ವಿಚಾರಿಸಿದಾಗ ಮನರಂಜನೆಗಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಇಬ್ಬರನ್ನು ಅಮಾನತು ಮಾಡಲಾಗಿದೆ. -ಶಶಿಧರ ಚನ್ನಪ್ಪಗೌಡರ, ವಿಭಾಗೀಯ ನಿಯಂತ್ರಣಾಧಿಕಾರಿ, ಧಾರವಾಡ ವಿಭಾಗ

-ಉದಯವಾಣಿ ಸಮಾಚಾರ

 

ಟಾಪ್ ನ್ಯೂಸ್

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.