ರೊಚ್ಚಿಗೆದ್ದ ಕಾನೂನು ವಿವಿ ವಿದ್ಯಾರ್ಥಿಗಳು

ಆಫ್‌ಲೈನ್‌ ಪರೀಕ್ಷೆ ಅನಿವಾರ್ಯ ಎಂದು ಹೊರಟು ಹೋದರು

Team Udayavani, Dec 14, 2021, 6:12 PM IST

ರೊಚ್ಚಿಗೆದ್ದ ಕಾನೂನು ವಿವಿ ವಿದ್ಯಾರ್ಥಿಗಳು

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಅಸ್ವಸ್ಥಗೊಂಡಿದ್ದು, ವಿದ್ಯಾರ್ಥಿಗಳ ಬೇಡಿಕೆಗೆ ವಿಶ್ವವಿದ್ಯಾಲಯ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿ ಪೊಲೀಸರೊಂದಿಗೆ ಜಟಾಪಟಿ ನಡೆಸಿದ ಘಟನೆ ರವಿವಾರ ನಡೆಯಿತು.

ಆಫ್‌ಲೈನ್‌ ಪರೀಕ್ಷೆ ರದ್ದತಿಗೆ ಒತ್ತಾಯ, ತರಗತಿಗಳ ಆರಂಭ ವಿಳಂಬ ವಿರೋಧಿಸಿ ವಿವಿಧ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ಎಂಟು ದಿನಗಳಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಉಪವಾಸ ಸತ್ಯಾಗ್ರಹದಿಂದ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ವಿಶ್ವವಿದ್ಯಾಲಯದಿಂದ ಯಾವುದೇ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಕುಲಪತಿಗಳನ್ನು ಕರೆಸುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದರು. ಸ್ಥಳದಲ್ಲಿದ್ದ ಪೊಲೀಸರು ಕುಲಪತಿಗಳನ್ನು ಸ್ಥಳಕ್ಕೆ ಕರೆಸಲಾಗುವುದು ಎಂದು ಭರವಸೆ ನೀಡಿದರು. ಕುಲಪತಿಗಳು ಕಚೇರಿಗೆ ಆಗಮಿಸಿದ್ದಾರೆಂದು ಸುಮಾರು 70 ಕ್ಕೂ ಹೆಚ್ಚಿದ್ದ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭದಲ್ಲಿ ಗೇಟು ದಾಟದಂತೆ ಪೊಲೀಸರು ತಡೆಯುವ ಯತ್ನ ಮಾಡಿದರು. ಆದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ಒಳಪ್ರವೇಶ ಮಾಡದಂತೆ ತಡೆ ಹಿಡಿದಿದ್ದ ಗೇಟನ್ನು ನೂಕಿ ಒಳಪ್ರವೇಶ ಮಾಡಿದರು.

ನೂಕಾಟದಲ್ಲಿ ವಿದ್ಯಾರ್ಥಿಯೊಬ್ಬ ಅಸ್ವಸ್ಥಗೊಂಡ ಘಟನೆ ನಡೆಯಿತು. ಕುಲಪತಿ ಕಚೇರಿ ಮುಂಭಾಗದಲ್ಲಿ ಘೋಷಣೆ ಕೂಗುತ್ತಾ ಬಾಗಿಲು ಬಡೆದರು. ಪೊಲೀಸರು ಮಧ್ಯಪ್ರವೇಶಿಸಿ ಎಷ್ಟೇ ಸಮಾಧಾನ ಪಡಿಸಿದರೂ ವಿದ್ಯಾರ್ಥಿಗಳು ಹಿಂಜರಿಯಲಿಲ್ಲ. ಪೊಲೀಸರು ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆಂದು ಪೊಲೀಸರ ವಿರುದ್ಧ ಘೋಷಣೆ ಕೂಗಿದರು.

ಸ್ಥಳಕ್ಕಾಗಮಿಸಿದ ಡಿಸಿಪಿ ಸಾಹಿಲ್‌ ಬಾಗ್ಲಾ ಅವರು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ನಿಮ್ಮ ಪ್ರತಿಭಟನೆಗೆ ಪೊಲೀಸರು ಸಂಪೂರ್ಣ ಸಹಕಾರ ನೀಡಲಿದ್ದಾರೆ. ವಿನಾಕಾರಣ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಪ್ರತಿಭಟನಾ ಸ್ಥಳ ಬಿಟ್ಟು ಮತ್ತೂಂದೆಡೆ ಧರಣಿ ಮಾಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕುರಿತು ಕುಲಪತಿ ಅವರನ್ನು ಕರೆಯಿಸಿ ಮಾತನಾಡಿಸುವುದಾಗಿ ಭರವಸೆ ನೀಡಿದರು. ಇದರಿಂದ ವಿದ್ಯಾರ್ಥಿಗಳು ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಆಗಮಿಸಿದ ಕುಲಪತಿ ಪ್ರೊ|ಈಶ್ವರ ಭಟ್ಟ ಅವರು ಆನ್‌ ಲೈನ್‌ ಪರೀಕ್ಷೆ ನಡೆಸಲು ಅವಕಾಶವಿಲ್ಲ. ಆಫ್‌ಲೈನ್‌ ಪರೀಕ್ಷೆ ಅನಿವಾರ್ಯ ಎಂದು ಹೊರಟು ಹೋದರು.ಇದನ್ನು ಕೇಳುತ್ತಿದ್ದಂತೆ ವಿದ್ಯಾರ್ಥಿಗಳು ಕುಲಪತಿಗಳ ವಿರುದ್ಧ ಘೋಷಣೆ ಕೂಗಿದರು.

ವಿಶ್ವವಿದ್ಯಾಲಯ ಆವರಣದಲ್ಲಿ ಕಳೆದ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ, ವಿಶ್ವವಿದ್ಯಾಲಯದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿಲ್ಲ. ಹೀಗಾಗಿ ಬೆಳಗಾವಿ ಸುವರ್ಣ ಸೌಧಕ್ಕೆ ತೆರಳಿ ಸಂಬಂಧಿಸಿದವರ ಗಮನ ಸೆಳೆಯುವ ನಿರ್ಧಾರ ಕೈಗೊಂಡು ಕೆಲ ವಿದ್ಯಾರ್ಥಿಗಳು ಅಲ್ಲಿಗೆ ತೆರಳಿದರು. ಉಪವಾಸ ಸತ್ಯಾಗ್ರಹದಿಂದ ರವಿವಾರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ರುದ್ರೇಶ ಅಸ್ಪತ್ರೆಯಿಂದ ಬಿಡುಗಡೆಗೊಂಡು ಪುನಃ ಪ್ರತಿಭಟನೆಯಲ್ಲಿ
ಪಾಲ್ಗೊಂಡರು.

ಸೋಮವಾರ ಮಹಾಂತೇಶ ಚಿಕ್ಕಣ್ಣವರ ಎನ್ನುವ ವಿದ್ಯಾರ್ಥಿ ಅಸ್ವಸ್ಥಗೊಳ್ಳುತ್ತಿದ್ದಂತೆ ಪೊಲೀಸ್‌ ವಾಹನ ಮೂಲಕ ಕಿಮ್ಸ್‌ಗೆ ದಾಖಲಿಸಲಾಯಿತು. ವಿದ್ಯಾರ್ಥಿ ಅಸ್ವಸ್ಥಗೊಂಡ ಸಂದರ್ಭದಲ್ಲಿ ಅಂಬ್ಯುಲೆನ್ಸ್‌ ದೊರೆಯದ ಹಿನ್ನೆಲೆಯಲ್ಲಿ ಪ್ರತಿಭಟನೆ ಪೂರ್ಣಗೊಳ್ಳುವವರೆಗೂ ಸ್ಥಳದಲ್ಲೇ ಆಂಬ್ಯುಲೆನ್ಸ್‌ ಇರುವ ವ್ಯವಸ್ಥೆ ಮಾಡಲಾಯಿತು. ಪ್ರಮುಖರಾದ ಚಂದ್ರನಾಯ್ಕ, ರಮೇಶ ನಾಯ್ಕ, ಬಳಿಗನೂರು ಕೊಟ್ರೇಶ, ಡಿ.ಎಚ್‌.ಅರುಣಕುಮಾರ, ಬಿ.ಶಿವರಾಜ, ಎ.ಎಸ್‌.ಪೀರಜಾದೆ ಇನ್ನಿತರಿದ್ದರು.

ಟಾಪ್ ನ್ಯೂಸ್

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?

suicide

ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

Don’t Think Rohit Sharma Needs A Break,” Says Ravi Shastri

ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?

5

ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ

suicide

ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

Don’t Think Rohit Sharma Needs A Break,” Says Ravi Shastri

ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?

5

ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ

suicide

ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

Don’t Think Rohit Sharma Needs A Break,” Says Ravi Shastri

ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.