ರಾಜಕೀಯ ಆಮಿಷಗಳಿಗೆ ಸಂಘಟನೆಗಳು ಬಲಿಯಾಗದಿರಲಿ


Team Udayavani, Apr 12, 2022, 12:28 PM IST

6

ಹುಬ್ಬಳ್ಳಿ: ರಾಜಕೀಯ ಆಸೆಗಾಗಿ ಸಂಘಟನೆಗಳು ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ಈ ಸಂಘಟನೆಗಳನ್ನು ಒಡೆಯುವಲ್ಲಿ ರಾಜಕಾರಣಿಗಳು ನಿರಂತರ ಪ್ರಯತ್ನ ನಡೆಸಿದ್ದಾರೆ. ರಾಜಕೀಯ ಆಸೆ-ಆಮಿಷ ಹಾಗೂ ಒತ್ತಡಗಳಿಗೆ ಸಂಘದ ಹಿತಾಸಕ್ತಿ ಬಲಿ ಕೊಡಬಾರದು ಎಂದು ಮಾಜಿ ಸಚಿವ ಪಿ.ಸಿ. ಸಿದ್ದನಗೌಡರ ಹೇಳಿದರು.

ಸೋಮವಾರ ಶ್ರೀ ಸಿದ್ಧಾರೂಢಸ್ವಾಮಿ ಮಠದ ನಿರಂಜನ ಸಭಾಭವನದಲ್ಲಿ ಕರ್ನಾಟಕ ರೈತರ ಸಂಘ ಉದ್ಘಾಟಿಸಿ ಮಾತನಾಡಿದರು.

ಮೂರ್‍ನಾಲ್ಕು ದಶಕಗಳ ಹಿಂದೆ ರೈತ ಸಂಘಟನೆಗಳ ಹೋರಾಟವೆಂದರೆ ಇಡೀ ಆಡಳಿತ ವ್ಯವಸ್ಥೆ ನಡುಗುತ್ತಿತ್ತು. ಆದರೆ ಕಾಲ ಕ್ರಮೇಣ ಸಂಘಟನೆಗಳು ಚೂರಾದವು. ನಾಯಕರು ರಾಜಕೀಯ ಆಸೆಗಾಗಿ ಸಂಘಟನೆಗಳ ಹಿತಾಸಕ್ತಿ ಬಲಿಕೊಟ್ಟರು. ಕೆಲವರ ನಡುವೆ ಸಂಘರ್ಷ ಮೂಡಿಸಿ ಒಡೆಯುವ ಕೆಲಸಗಳನ್ನು ಅಂದಿನ ನಾಯಕರು ಮಾಡಿದರು. ಇಂದಿಗೂ ಕೂಡ ಇದು ಮುಂದುವರಿದ ಪರಿಣಾಮ ರೈತ ಸಂಘಟನೆಯ ಗಟ್ಟಿತನ ಸಡಿಲಗೊಂಡಿದೆ ಎಂದರು.

ಸರಕಾರಗಳು ಉದ್ಯಮಿಗಳ ಲಕ್ಷಾಂತರ ಕೋಟಿ ರೂ. ಸಾಲ ಮನ್ನಾ ಮಾಡಲು ಯಾವ ನಿಯಮಗಳೂ ಅಡ್ಡ ಬರುವುದಿಲ್ಲ. ಆದರೆ ರೈತರಿಗೆ ಸಾಲ, ಸೌಲಭ್ಯಗಳನ್ನು ನೀಡುವ ವಿಚಾರದಲ್ಲಿ ನೂರಾರು ನಿಯಮ ಹೇರಲಾಗುತ್ತದೆ. ಹಿಜಾಬ್‌, ವ್ಯಾಪಾರಿ ಮೇಲೆ ದಾಳಿ ಬೆಳವಣಿಗೆ ನೋಡಿದರೆ ರಾಜ್ಯ ಎತ್ತ ಸಾಗುತ್ತಿದೆ ಎನ್ನುವ ಚಿಂತೆ ಕಾಡುತ್ತಿದೆ. ಇಂತಹ ವಿಚಾರದಲ್ಲಿ ಸಂಘಟನೆಗಳು ಗಟ್ಟಿಯಾದ ಧ್ವನಿ ಎತ್ತಿದರೆ ಆಳುವ ಸರಕಾರಗಳು ಸರಿದಾರಿಯಲ್ಲಿ ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ಹೂವಪ್ಪ ದಾಯಗೋಡಿ ಮಾತನಾಡಿ, ರೈತ ಸಂಘಟನೆಗಳು ನಿಜವಾಗಿ ರೈತರ ಸಮಸ್ಯೆಗಳಿಗ ಧ್ವನಿಯಾದರೆ ಸರಕಾರ ಕಣ್ಣು ತೆರೆಯುತ್ತದೆ. ಹಲವಾರು ಕಾರಣಗಳಿಂದ ರೈತ ಸಂಘಟನೆಗಳು ಶಕ್ತಿ ಕಳೆದುಕೊಂಡಿರಬಹುದು. ಆದರೆ ರೈತ ಶಕ್ತಿ ಹೆಚ್ಚಿಸಿಕೊಂಡಿದ್ದಾನೆ. ಇಂದಿಗೂ ರೈತ ಬೀದಿಗೆ ಇಳಿದರೆ ಎಂತಹ ಸರಕಾರದಲ್ಲೂ ನಡುಕ ಉಂಟಾಗುತ್ತದೆ ಎಂದರು.

ಸಂಘದ ರಾಜ್ಯಾಧ್ಯಕ್ಷ ಸಿದ್ದರಾಜ ಕುಂದಗೋಳ ಮಾತನಾಡಿ, ಸಂಘಟನೆಯನ್ನು ಯಾವುದೇ ಜಾತಿ, ಧರ್ಮ ಹಾಗೂ ಪಕ್ಷಕ್ಕೆ ಸೀಮಿತಗೊಳಿಸದೇ ರೈತ ಜಾತಿ ಹಾಗೂ ರೈತ ಧರ್ಮಕ್ಕಾಗಿ ಸಂಘಟಿಸಲಾಗುವುದು. ರೈತರ ಪ್ರತಿಯೊಂದು ಸಮಸ್ಯೆ ಬೇಡಿಕೆಗಳಿಗೆ ಗಟ್ಟಿ ಧ್ವನಿಯಾಗುತ್ತೇವೆ ಎಂದು ತಿಳಿಸಿದರು.

ನವಚೇತನ ಭಾರತ ಭೂಷಣ ಶ್ರೀ ಷಡಕ್ಷರಿ ದೇವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಠದ ಧರ್ಮದರ್ಶಿ ಶಾಮಾನಂದ ಪೂಜೇರ, ರಮೇಶ ಮಹಾದೇವಪ್ಪನವರ, ಶಿವಯ್ಯ ಸರಣಚಾರಿ, ಶಿವಾನಂದ ಹೊಸಳ್ಳಿ ಇನ್ನಿತರರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.