ಕಲಘಟಗಿ ಬಿಜೆಪಿ ಶಾಸಕ ಸಿ.ಎಂ.ನಿಂಬಣ್ಣವರ ಬದುಕು-ಸಾಧನೆ

ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

Team Udayavani, Feb 7, 2023, 11:40 AM IST

kalaghatagi

ಜನನ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ 1947ರಲ್ಲಿ ಜನಿಸಿದ್ದಾರೆ.

ಶಿಕ್ಷಣ: ಧಾರವಾಡದ ಜೆಎಸ್‌ಎಸ್‌ ಬನಶಂಕರಿ ಆರ್ಟ್ಸ್ ಕಾಲೇಜಿನಿಂದ ಇಂಗ್ಲಿಷ್‌ ವಿಷಯದಲ್ಲಿ BA ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ MA ಹಾಗೂ LLB(Spl) ಪದವಿಗಳು, ಮೈಸೂರು ವಿಶ್ವವಿದ್ಯಾಲಯದಿಂದ B.Ed. ಪದವಿ ಪಡೆದಿದ್ದಾರೆ.

ಶೈಕ್ಷಣಿಕ ಸೇವೆ: ಕಲಘಟಗಿ ತಾಲೂಕಿನ ಮಿಶ್ರೀಕೋಟಿಯಲ್ಲಿರುವ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ ಸನ್‌ 1970ರಲ್ಲಿ ಇಂಗ್ಲಿಷ್‌ ಶಿಕ್ಷಕರಾಗಿ ಸೇವೆ ಆರಂಭಿಸಿ ಮುಂದೆ ಮುಖ್ಯೋಪಾಧ್ಯಾಯರಾಗಿ ಪದೋನ್ನತಿ ಹೊಂದಿ ಅದೇ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸಾರ್ವಜನಿಕ ದೇಣಿಗೆ ಸಂಗ್ರಹಿಸಿ ಆಡಳಿತ ವರ್ಗದ ಸಹಕಾರದಿಂದ ಸಂಸ್ಥೆಗೆ ಅವಶ್ಯವಿದ್ದ 13 ಕೊಠಡಿಗಳ ಬೃಹತ್‌ ಕಟ್ಟಡ ನಿರ್ಮಿಸಿದ್ದಕ್ಕಾಗಿ ಜನಮೆಚ್ಚುಗೆ ಪಡೆದಿದ್ದಾರೆ. ಶಿಕ್ಷಣ ಇಲಾಖೆಯಿಂದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. 25 ವರ್ಷಗಳ ಸತತ ಸೇವೆ ನಂತರ ಇನ್ನೂ 10 ವರ್ಷಗಳ ಸೇವಾವಧಿ
ಇರುವಾಗಲೇ (1994 ಸೆಪ್ಟೆಂಬರ್‌ 30ರಂದು) ಸ್ವಯಂ ಸೇವಾ ನಿವೃತ್ತಿ ಹೊಂದಿ ಸಾರ್ವಜನಿಕ ಸೇವೆಗೆ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಕಾನೂನು ಸೇವೆ: ಸ್ವಯಂ ಸೇವಾ ನಿವೃತ್ತಿ ನಂತರ ವಕೀಲ ವೃತ್ತಿ ಆರಂಭಿಸಿದ ಅವರು ಕಲಘಟಗಿ ತಾಲೂಕಿನ ಗ್ರಾಮಾಂತರ ಜನರ ನಡುವಿನ ಅನೇಕ ಮೊಕದ್ದಮೆಗಳನ್ನು ರಾಜಿ ಸಂಧಾನದಿಂದ ಬಗೆಹರಿಸುವ ಮೂಲಕ ಸಾಮಾಜಿಕ ಸ್ವಾಸ್ಥ é ಕಾಪಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಅಲ್ಲದೇ ವಕೀಲರ ಸಂಘದ ಅಧ್ಯಕ್ಷರಾಗಿ ಸತತ ಎರಡನೇ ಅವಧಿಗೆ ಕಾರ್ಯ ನಿರ್ವಹಿಸಿದ್ದಾರೆ.

ರೋಟರಿ ಮೂಲಕ ಸೇವೆ: ಕಲಘಟಗಿ ರೋಟರಿ ಸಂಸ್ಥೆಯ ಸಂಸ್ಥಾಪಕ ಸದಸ್ಯರಾಗಿ 1980 ರಿಂದ ಸೇವೆ. 1986-87ರಲ್ಲಿ ಅದೇ ಸಂಸ್ಥೆ ಅಧ್ಯಕ್ಷರಾಗಿ ಸಲ್ಲಿಸಿದ ಅನುಪಮ ಸಾಮಾಜಿಕ ಸೇವೆಗಾಗಿ ಸಂಸ್ಥೆಗೆ 5 ವಿಶೇಷ ಪ್ರಶಸ್ತಿಗಳಲ್ಲದೇ ವೈಯಕ್ತಿಕವಾಗಿ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ ಪಡೆದಿದ್ದಾರೆ. 2005-06ರಲ್ಲಿ ಎರಡನೇ ಬಾರಿಗೆ ರೋಟರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಕೀಯ ಸೇವೆ: 1995 ರಲ್ಲಿ ಬಿಜೆಪಿಗೆ ಸೇರ್ಪಡೆ ಕಳೆದ 27 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿದ್ದು, ಕಲಘಟಗಿ ತಾಲೂಕು ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ ಸತತ ಎರಡನೇ ಅವಧಿಗೆ ಸೇವೆ. ಈ ಅವಧಿ ಯಲ್ಲಿ ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟಿಸಿದ್ದಾರೆ. ಜನಪರ ಹೋರಾಟಗಳನ್ನು ಕೈಕೊಂಡಿದ್ದರಿಂದ ಎಲ್ಲ ವರ್ಗದ ಜನರು ಪಕ್ಷದೊಂದಿಗೆ ಗುರುತಿಸಿಕೊಳ್ಳುವಂತಾಯಿತು. ಈ ಕಾರ್ಯದಲ್ಲಿ ಅನೇಕರು ಇವರೊಂದಿಗೆ ಶ್ರಮ ವಹಿಸಿದ್ದಾರೆ.

ಅದರ ಪರಿಣಾಮವಾಗಿ ಕಲಘಟಗಿ ಮತಕ್ಷೇತ್ರ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿತು. ಪ್ರಥಮ ಬಾರಿಗೆ ತಾಲೂಕಿನಲ್ಲಿ ಬಿಜೆಪಿ ನೇತೃತ್ವದ ತಾಪಂ, ಎಪಿಎಮ್‌ಸಿ ಹಾಗೂ ಪಿಎಲ್‌ಡಿ ಬ್ಯಾಂಕ್‌ ಅಧಿಕಾರ ನಡೆಸಿದ್ದು ವಿಶೇಷ. ಇದೇ ಅವಧಿಯಲ್ಲಿ ಸಿ.ಎಮ್‌. ನಿಂಬಣ್ಣವರ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕಿನ ಪ್ರತಿಷ್ಠಿತ ಮಿಶ್ರಿಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚೇರಮನ್ನರಾಗಿ ನಿರಂತರವಾಗಿ ಕಳೆದ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

*ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ಪಕ್ಷಕ್ಕೆ ಸಲ್ಲಿಸುತ್ತಿರುವ ದಕ್ಷ-ನಿಷ್ಠಾವಂತ ಸೇವೆ ಗುರುತಿಸಿ ಬಿಜೆಪಿ ಇವರನ್ನು ವಿಧಾನ ಪರಿಷತ್‌ ಪಶ್ಚಿಮ ಪದವೀಧರ ಮತಕ್ಷೇತ್ರ ಚುನಾವಣೆಗೆ ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು. ಈ ಚುನಾವಣೆಯಲ್ಲಿ ರಾಜ್ಯ ಸರಕಾರದಲ್ಲಿ ಪ್ರಭಾವಿ ಮಂತ್ರಿಯಾಗಿದ್ದ ಎಚ್‌. ಕೆ. ಪಾಟೀಲರ ವಿರುದ್ಧ 12 ಸಾವಿರ ಮತ ಪಡೆದು ವಿರೋಚಿತ ಸೋಲು ಅನುಭವಿಸಿದ್ದಾರೆ.

*ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವುದಲ್ಲೇ ಬಿಜೆಪಿ-ಜೆಡಿಎಸ್‌ ಸಮಿಶ್ರ ಸರಕಾರವಿದ್ದಾಗ ಬೆಳಗಾವಿ ಕಾಡಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

* ಬಿ.ಎಸ್‌.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರವಿದ್ದಾಗ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದಿಟಛಿ (ನಿ) ಇದರ ಅಧ್ಯಕ್ಷರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ.

* 1980ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕಾ ಘಟಕವನ್ನು ಕಲಘಟಗಿಯಲ್ಲಿ ಆರಂಭಿಸಿ ಅದರ ಗೌರವ ಕಾರ್ಯದರ್ಶಿಯಾಗಿ ಸೇವೆ, ನಂತರ ಧಾರವಾಡ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದ ಗೌರವ ಕಾರ್ಯದರ್ಶಿಯಾಗಿ ಸೇವೆ, ರಾಜ್ಯ ಮತ್ತು ಕೇಂದ್ರ ಸಮಿತಿ ಸದಸ್ಯರಾಗಿ ಸೇವೆ, ಶರಣ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

* ಕಳೆದ 22 ವರ್ಷಗಳಿಂದ ರೈತರ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರ ಕೋರಿ ನಿರಂತರ ಹೋರಾಟ ಕೈಗೊಂಡವರಾಗಿದ್ದಾರೆ. ಕೃಷಿಕ ಕುಟುಂಬದಿಂದ ಬಂದವರಾಗಿದ್ದು, ರೈತರ ಮೂಲಭೂತ ಸಮಸ್ಯೆಗಳನ್ನು ಖುದ್ದಾಗಿ ಅರಿತಿದ್ದಾರೆ. (2006) ರಲ್ಲಿ ಕಲಘಟಗಿ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ 22 ದಿನಗಳ ಕಾಲ ಹಗಲು ರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದರು.

*ರೈತಪರ ಹೋರಾಟ ಹಿನ್ನೆಲೆ ಅರಿತ ಬಿಜೆಪಿ ರಾಜ್ಯನಾಯಕರು ಇವರನ್ನು ರಾಜ್ಯ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ನಿಯುಕ್ತಿ ಮಾಡಿದರು. ತನ್ನ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಶಂಕರಗೌಡ ಪಾಟೀಲ, ಬೆಳಗಾವಿ ಇವರೊಂದಿಗೆ ರಾಜ್ಯದ 23 ಜಿಲ್ಲೆಗಳಿಗೆ ಭೇಟಿ ನೀಡಿ ರೈತ ಮೋರ್ಚಾ ಜಿಲ್ಲಾ ಘಟಕಗಳನ್ನು ಸಂಘಟಿಸಿದ್ದಾರೆ. ಜಿಲ್ಲಾವಾರು ರೈತರ ಸಮಸ್ಯೆಗಳ ಪಟ್ಟಿ ಮಾಡಿ ಸುಮಾರು 50ಕ್ಕೂ ಹೆಚ್ಚು ಸುದ್ದಿಗೋಷ್ಠಿಗಳನ್ನುದ್ದೇಶಿಸಿ ಮಾತನಾಡಿ, ರಾಜ್ಯದ
ರೈತರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ.

* ಪ್ರಥಮ ಬಾರಿಗೆ ದಕ್ಷಿಣ ಭಾರತದ 5 ರಾಜ್ಯಗಳ ಅಂತಾರಾಜ್ಯ ಕಿಸಾನ್‌ ಸಮ್ಮೇಳನವನ್ನು ರಾಜ್ಯ ನಾಯಕರ ಮಾರ್ಗದರ್ಶನ ಮತ್ತು ಸಹಾಯದೊಂದಿಗೆ ಅತ್ಯಂತ ಯಶಸ್ವಿಯಾಗಿ ಬೆಂಗಳೂರಿನಲ್ಲಿ ಜರುಗಿಸಿದ ಹೆಮ್ಮೆ ಅವರದ್ದಾಗಿದೆ.

* ನೂತನ ಸರಕಾರ ಅಸ್ತಿತ್ವಕ್ಕೆ ಬಂದಾಗ ಕಾಮನ್‌ ಮಿನಿಮಮ್‌ ಪ್ರೋಗ್ರಾಂ ತಯಾರಿಸುವಲ್ಲಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಾ, ತಮ್ಮ ಸೇವೆಯನ್ನು ಸ್ಮರಣೀಯವಾಗಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.