ಸಿಎಂಗೆ ಬದ್ಧತೆ ಇದ್ದರೆ ತನಿಖೆಗೆ ಆದೇಶಿಸಲಿ

ಯತ್ನಾಳರನ್ನು ವಶಕ್ಕೆ ಪಡೆದು ಸಾಕ್ಷಿಯಾಗಿಸಲಿ

Team Udayavani, May 8, 2022, 10:41 AM IST

4

ಹುಬ್ಬಳ್ಳಿ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಪಡೆಯಬೇಕಾದರೆ 2,500 ಕೋಟಿ ರೂ.ಗಳನ್ನು ನೀಡಬೇಕೆಂದು ಅದೇ ಪಕ್ಷದ ಶಾಸಕ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರು ದೇಶವೇ ತಲ್ಲಣಗೊಳ್ಳುವ ಹೇಳಿಕೆ ನೀಡಿದ್ದು, ಈ ವಿಚಾರದಲ್ಲಿ ಮುಖ್ಯಮಂತ್ರಿಯವರಿಗೆ ರಾಜಕೀಯ ಬದ್ಧತೆ ಇದ್ದರೆ ರಾಜ್ಯದಲ್ಲಿ ನಡೆದಿರುವ ಅನೇಕ ಹಗರಣಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮಂತ್ರಿ ಸ್ಥಾನಕ್ಕೆ 50ರಿಂದ 100 ಕೋಟಿ ರೂ. ನೀಡಬೇಕೆಂದು ಯತ್ನಾಳರೇ ಪ್ರಸ್ತಾಪಿಸಿದ್ದಾರೆ. ಈ ಪ್ರಕರಣವನ್ನು ಕೇವಲ ಎಸಿಬಿ ಮಾತ್ರವಲ್ಲ, ಕೇಂದ್ರದ ತನಿಖಾ ಸಂಸ್ಥೆಗಳೂ ತನಿಖೆ ಮಾಡಬೇಕು. ಯತ್ನಾಳರನ್ನು ಕೂಡಲೇ ವಶಕ್ಕೆ ಪಡೆದು ಅವರನ್ನೇ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು. ಪಕ್ಷದ ಗೌರವ ಉಳಿಸಿಕೊಳ್ಳುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದು ಹೇಳಿದರು.

ಈ ಬಿಜೆಪಿ ಸರಕಾರ ಹುಟ್ಟಿದ್ದೇ ಶಾಸಕರ ಖರೀದಿ ಮೂಲಕ. ಬೇರೆ ಬೇರೆ ಶಾಸಕರಿಗೂ ಬಿಜೆಪಿ ಆಮಿಷ ಒಡ್ಡಿದ್ದನ್ನು ನಾವು ನೋಡಿದ್ದೇವೆ. ಇಂದು ಪ್ರತಿ ವಿಚಾರದಲ್ಲೂ ಭ್ರಷ್ಟಾಚಾರ ಬಗ್ಗೆ ಚರ್ಚೆ ಆಗುತ್ತಿರುವಾಗ ಸರಕಾರ ತನಿಖೆ ನಡೆಸದೆ ಸುಮ್ಮನೆ ಕೂತಿರುವುದು ಏಕೆ? ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಸಿಬಿಐ ತನಿಖಾ ಸಂಸ್ಥೆಗಳು ಸುಮ್ಮನೆ ಕೂತಿರುವುದು ಏಕೆ? ನನ್ನ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ಹೆಸರಲ್ಲಿ ಸಿಬಿಐ ತನಿಖೆಗೆ ಅವಕಾಶ ನೀಡಲು ಬರಲ್ಲ ಎಂದು ಅಡ್ವೊಕೇಟ್‌ ಜನರಲ್‌ ಅವರು ಸಲಹೆ ನೀಡಿದರೂ ಯಡಿಯೂರಪ್ಪನವರು ಸಿಬಿಐ ವಿಚಾರಣೆಗೆ ಅನುಮತಿ ಕೊಟ್ಟಿದ್ದರು. ಎಲ್ಲ ಅಕ್ರಮಗಳನ್ನು ಮುಖ್ಯಮಂತ್ರಿಗಳು ರಕ್ಷಣೆ ಮಾಡುತ್ತಿದ್ದಾರೋ ಅಥವಾ ಅವರ ಪಕ್ಷದವರು ರಕ್ಷಣೆ ಮಾಡುತ್ತಿದ್ದಾರೋ? ಆ ಮೂಲಕ ಸಂವಿಧಾನವನ್ನು ಸುಡಲು ನಿರ್ಧರಿಸಿದ್ದಾರೋ? ಎಲ್ಲಾ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರ ನೀಡಬೇಕು ಎಂದರು.

ಯತ್ನಾಳ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಸಹ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರು ಈ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರೇ ಮಾಡಿರಲಿ ತನಿಖೆ ಆಗಲಿ. ಪಿಎಸ್‌ಐ ನೇಮಕಾತಿ ಅಕ್ರಮ ಬಗ್ಗೆ ಶಾಸಕ ಪ್ರಿಯಾಂಕ ಖರ್ಗೆ ಸುದ್ದಿಗೋಷ್ಠಿ ನಡೆಸಿ ಬಯಲಿಗೆಳೆದರೆ ಅವರಿಗೆ ನೋಟಿಸ್‌ ಕೊಟ್ಟಿರುವ ಸರಕಾರ, ಬಿಜೆಪಿ ನಾಯಕರಿಗೆ ಯಾಕೆ ನೋಟಿಸ್‌ ನೀಡುತ್ತಿಲ್ಲ? ಯತ್ನಾಳ ಕೇಂದ್ರದ ಮಾಜಿ ಸಚಿವ, ಜವಾಬ್ದಾರಿಯುತ ನಾಯಕ. ಅವರು ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸ್ಥಿತಿಯಲ್ಲಿಲ್ಲ. ಅವರು ನಮ್ಮನ್ನು ಬೇಕಾದರೆ ಮಾನಸಿಕ ಆಸ್ಪತ್ರೆಗೆ ದಾಖಲಿಸುತ್ತಾರೆ. ಮಿಸ್ಟರ್‌ ಬಿಜೆಪಿ ಪ್ರಸಿಡೆಂಟ್‌, ಯಾಕೆ ಅಕ್ರಮ ಬಯಲಿಗೆಳೆಯುತ್ತಿಲ್ಲ? ಯಾವ ಮಂತ್ರಿ ಇದರಲ್ಲಿ ಭಾಗಿಯಾಗಿದ್ದರೂ ಅದರ ತನಿಖೆ ಆಗಬೇಕು. ಅವರ ವಿರುದ್ಧ ಕ್ರಮ ಆಗಲಿ ಎಂದ ಅವರು, ಮೊದಲು ನಿಮ್ಮ ಪಕ್ಷದ ಶಾಸಕರು ಹೇಳುತ್ತಿರುವ ವಿಚಾರವಾಗಿ ರಾಜ್ಯದ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿಗೆ ಮನವಿ ಮಾಡುವೆ ಎಂದರು.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸರಕಾರ ಕೇವಲ ಫಲಾನುಭವಿಗಳನ್ನು ಮಾತ್ರ ಬಂಧಿಸುತ್ತಿದೆ. ಆದರೆ ಇದರಲ್ಲಿ ಯಾರೆಲ್ಲಾ ಪ್ರಭಾವಿ ಮಂತ್ರಿಗಳು ಭಾಗಿಯಾಗಿದ್ದಾರೆ, ಬೆಂಬಲವಾಗಿ ನಿಂತಿದ್ದಾರೆ ಎಂಬುದು ಗೊತ್ತಾಗಬೇಕು. ಸಚಿವ ಅಶ್ವತ್‌ ನಾರಾಯಣ ಸ್ವತಃ ಕರೆ ಮಾಡದಿದ್ದರೆ ಅಕ್ರಮ ಆರೋಪ ಹೊತ್ತಿರುವ ಅಭ್ಯರ್ಥಿಯನ್ನು ಪೊಲೀಸರು ವಿಚಾರಣೆ ಮಾಡದೆ ಬಿಡುತ್ತಿದ್ದರೇ? ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಸತ್ಯ ತಿಳಿಸಿದ್ದಾರೆ. ಈ ವಿಚಾರವಾಗಿ ಸರಕಾರ ಕೂಡಲೇ ತನಿಖೆಗೆ ಆದೇಶಿಸಬೇಕು. ಮುಖ್ಯಮಂತ್ರಿಗಳಾಗಿದ್ದವರು ಆಧಾರ ಇಲ್ಲದೆ ಆರೋಪ ಮಾಡುತ್ತಾರಾ? ಅವರ ಆರೋಪ ಸುಳ್ಳಾಗಿದ್ದರೆ ಸುಳ್ಳು ಹೇಳಿದ ಕಾರಣಕ್ಕೆ ಅವರ ವಿರುದ್ಧವೇ ಪ್ರಕರಣ ದಾಖಲಿಸಲಿ. ಹಿಂದಿನ ಸರಕಾರಗಳ ಅವಧಿಯಲ್ಲಿ ನೇಮಕಾತಿ ಅಕ್ರಮ ನಡೆದಿದ್ದರೆ ಅದರ ಬಗ್ಗೆಯೂ ಸರಕಾರ ತನಿಖೆಗೆ ಆದೇಶಿಸಲಿ. ನಾವು ರಾಜೀನಾಮೆ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ ಮಾತ್ರಕ್ಕೆ ಅವರು ರಾಜೀನಾಮೆ ಕೊಡುತ್ತಾರಾ ಅವರು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹದೊಂದು ಗಂಭೀರ ಆರೋಪವನ್ನು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಕೇಳಿರಲಿಲ್ಲ. ಈ ವಿಚಾರವಾಗಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜಕೀಯ ಪಕ್ಷವಾಗಿ ರಾಜ್ಯದ ಪ್ರತಿ ತಾಲೂಕಿನಲ್ಲೂ ಜನರಿಗೆ ಈ ವಿಚಾರ ತಿಳಿಸುತ್ತೇವೆ. ಈ ಕುರಿತು ಹೋರಾಟ ರೂಪಿಸುತ್ತೇವೆ ಎಂದರು.

ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ, ವಿಧಾನ ಪರಿಷತ್‌ ಮಾಜಿ ಸದಸ್ಯ ನಾಗರಾಜ ಛಬ್ಬಿ, ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ ಮೊದಲಾದವರಿದ್ದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.