ಪ್ರಸಾದ್‌ ಶಾಸಕರಲ್ಲ, ಮನೆ ಮಗ: ಮೂಜಗು

ಕ್ಷೇತ್ರಾದ್ಯಂತ ಅಭಿವೃದ್ಧಿಯ ಹರಿಕಾರ ಎಂದು ಹೆಸರು ಪಡೆದಿರುವ ಅವರು, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ

Team Udayavani, Jan 31, 2022, 5:56 PM IST

ಪ್ರಸಾದ್‌ ಶಾಸಕರಲ್ಲ, ಮನೆ ಮಗ: ಮೂಜಗು

ಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಬಯ್ಯ ಅವರು ಕ್ಷೇತ್ರದ ಶಾಸಕರಲ್ಲ, ಬದಲಾಗಿ ನಮ್ಮೆಲ್ಲರ ಮನೆಮಗನಾಗಿದ್ದಾನೆ ಎಂದು ಮೂರುಸಾವಿರ ಮಠದ ಜಗದ್ಗುರು ಡಾ|ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

ಮೂರುಸಾವಿರ ಮಠದ ಸಭಾಭವನದಲ್ಲಿ ರವಿವಾರ ಎಸ್‌ಡಿಎಂ ನಾರಾಯಣ ಹಾರ್ಟ್‌ ಸೆಂಟರ್‌, ಶ್ರೀ ಜಗದ್ಗುರು ಮೂರುಸಾವಿರ ಮಠ ಮಹಾಸಂಸ್ಥಾನ ಹಾಗೂ ಪ್ರಸಾದ ಅಬ್ಬಯ್ಯ ಫೌಂಡೇಶನ್‌ ವತಿಯಿಂದ ನಡೆದ ಉಚಿತ ಹೃದ್ರೋಗ ತಪಾಸಣಾ ಶಿಬಿರದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ಅಷ್ಟೇ ಅಲ್ಲದೇ ಈ ನಾಡಿನ ಶಾಸಕನಾಗಿ ಪ್ರಸಾದ ಅಬ್ಬಯ್ಯ ಅವರು ಅತ್ಯುತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದರು.

ಕ್ಷೇತ್ರಾದ್ಯಂತ ಅಭಿವೃದ್ಧಿಯ ಹರಿಕಾರ ಎಂದು ಹೆಸರು ಪಡೆದಿರುವ ಅವರು, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ, ಇದೀಗ ಆರೋಗ್ಯ ಕ್ಷೇತ್ರದತ್ತ ತಮ್ಮ ದೃಷ್ಟಿ ನೆಟ್ಟಿದ್ದಾರೆ. ಆರಂಭಿಕವಾಗಿ ಹೃದ್ರೋಗ ತಪಾಸಣೆ ಮಾಡುತ್ತಿರುವುದು ಅವರಿಗೆ ಕ್ಷೇತ್ರದ ಜನರ ಮೇಲೆ ಇಟ್ಟಿರುವ ಹೃದಯವಂತಿಕೆ ತೋರಿಸುತ್ತದೆ. ಶಾಸಕ ಪ್ರಸಾದ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಕಾಳಜಿ ತೋರುತ್ತಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಮತ್ತೂಮ್ಮೆ ಶಾಸಕರಾಗಲಿ ಎಂದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಕಡುಬಡವರು, ಮಧ್ಯಮ ವರ್ಗದ ಜನರು ಇರುವಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗುತ್ತಿದೆ. ಕ್ಷೇತ್ರದ ಜನರ ಆರೋಗ್ಯ ದೃಷ್ಟಿಯಿಂದ 15 ಕೋಟಿ ವೆಚ್ಚದಲ್ಲಿ ಆರೋಗ್ಯ ಸೇವೆ ನೀಡಲು ಮುಂದಾಗಿದ್ದು, 3 ಕೋಟಿ ರೂ.ದಲ್ಲಿ ಮೇದಾರ ಓಣಿಯಲ್ಲಿ ಹೆರಿಗೆ ಆಸ್ಪತ್ರೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಎಸ್‌ಡಿಎಂ ಆಸ್ಪತ್ರೆಯ ಡಾ| ಲಲಿತಾ ಮಾತನಾಡಿ, ಇಂದು ಹುಟ್ಟುವ ಮಕ್ಕಳಿಂದ ಹಿಡಿದು ಎಲ್ಲರಲ್ಲೂ ಹೃದಯ ಸಂಬಂಧಿ ಕಾಯಿಲೆ ಕಂಡುಬರುತ್ತಿದ್ದು, ಕಾಲಕಾಲಕ್ಕೆ ಹೃದಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಜೊತೆಗೆ ಕೊಬ್ಬಿನಾಂಶ, ತಂಬಾಕು, ಸಿಗರೇಟ್‌ ಸೇವನೆ ಮಾಡಬಾರದು. ಬೆನ್ನುನೋವು, ಎಡಗೈ ಹರಿಯುವುದು, ಬೆವರುವುದು ಹೃದಯ ಸಂಬಂಧಿ ಕಾಯಿಲೆ ಲಕ್ಷಣಗಳು ಎಂದರು.

ಪಾಲಿಕೆ ಮಾಜಿ ಸದಸ್ಯ ಮೋಹನ ಅಸುಂಡಿ ಮಾತನಾಡಿದರು. ಪಾಲಿಕೆ ಸದಸ್ಯರಾದ ನಿರಂಜನ ಹಿರೇಮಠ, ಸುನೀತಾ ಬುರಬುರೆ, ಪ್ರಮುಖರಾದ ಸ್ವಾಗತ ಪ್ರಕಾಶ ಬುರಬುರೆ, ಸಂಜು ಸಾಟೆ, ಸುರೇಶ ಸೋಳಂಕೆ, ಮುತವಲ್ಲಿ ಐ.ಕೆ. ಗಬ್ಬೂರ, ಐ.ಜಿ. ಸುರೇಶ, ರಾಜೇಶ್ವರಿ, ಪ್ರಭಾಕರ ಇನ್ನಿತರರಿದ್ದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.