ಪಂ| ಜೋಶಿ ಸಂಗೀತ ಕ್ಷೇತ್ರದ ದೇವ ಪುರುಷ

ಸಂಗೀತೋಪಾಸನೆಯ ಜೀವನ ಮುಂಬರುವ ಪೀಳಿಗೆಗೆ ಆದರ್ಶವಾಗಲಿದೆ

Team Udayavani, Mar 24, 2022, 5:01 PM IST

ಪಂ| ಜೋಶಿ ಸಂಗೀತ ಕ್ಷೇತ್ರದ ದೇವ ಪುರುಷ

ಹುಬ್ಬಳ್ಳಿ: ಭಾರತರತ್ನ ಪಂ| ಭೀಮಸೇನ ಜೋಶಿ ಅವರು ಸಂಗೀತದ ಕ್ಷೇತ್ರದ ದೇವ ಪುರುಷ. ಅವರ ಸಂಗೀತ ಕೇಳುವುದಕ್ಕೆ ನಸೀಬು ಮತ್ತು ತಾಕತ್ತು ಬೇಕೆಂದು ನಟ ಹಾಗೂ ನಿರ್ದೇಶಕ ಯಶವಂತ ಸರದೇಶಪಾಂಡೆ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಆಶ್ರಯದಲ್ಲಿ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಭಾರತರತ್ನ ಪಂ| ಭೀಮಸೇನ ಜೋಶಿ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಭೀಮಸೇನ ಜೋಶಿ ಹಾಗೂ ಗಂಗೂಬಾಯಿ ಹಾನಗಲ್ಲ ಹುಬ್ಬಳ್ಳಿಯವರು. ಇಬ್ಬರೂ ಸವಾಯಿ ಗಂಧರ್ವ ಅವರ ಬಳಿ ಶಿಷ್ಯರಾಗಿ ಸಂಗೀತ ಅಭ್ಯಾಸ ಮಾಡಿದರು. ಇವರಿಬ್ಬರೂ ಹುಬ್ಬಳ್ಳಿಯವರೆಂಬುದು ನಮ್ಮೆಲ್ಲರಿಗೂ ಹೆಮ್ಮೆ ಎಂದರು. ಅವರ ಸಂಗೀತ ಆಲಿಸಿದರೆ ಆಧ್ಯಾತ್ಮಿಕ ಅನುಭೂತಿ ಲಭಿಸುತ್ತಿತ್ತು. ಭೀಮಸೇನ ಜೋಶಿಯವರ ಜೀವನೋತ್ಸಾಹ, ಆಸಕ್ತಿ, ಪ್ರೀತಿ ಮತ್ತು ನಡೆದು ಬಂದ ಹಾದಿ ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಧಾರವಾಡ ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಇದ್ದಾರೆ. ಸಂಗೀತ ಕ್ಷೇತ್ರದಲ್ಲಿ ಒಂದು ತೂಕ ಜಾಸ್ತಿ. ಅವರು ಬದುಕಿದ್ದು ಸಂಗೀತದ ಜತೆ. ಸರಸ್ವತಿ ಎಲ್ಲಾ ಸ್ವರಗಳನ್ನು ಅವರಿಗೆ ನೀಡಿದ್ದಾಳೆ. ಅವರ ಸಂಗೀತ ಕೇಳುತ್ತಿದ್ದರೆ ಕುಳಿತಲ್ಲಿಯೇ ಆಧ್ಯಾತ್ಮ ಲೋಕಕ್ಕೆ ಸೇರಿದಂತಾಗುತ್ತದೆ. ಸಂಗೀತದ ದೇವರೆಂದು ನಾವು ಅವರನ್ನು ಭಾವಿಸುತ್ತೇವೆ ಎಂದರು.

ವಿಭವ ಇಂಡಸ್ಟ್ರಿ ಸಿಇಒ ಹೆಚ್‌.ಎನ್‌.ನಂದಕುಮಾರ ಮಾತನಾಡಿ, ಭಾರತರತ್ನ ಭೀಮಸೇನ ಜೋಶಿಯವರು ನಡೆ ಮತ್ತು ನುಡಿ ಸಂಗೀತವಾಗಿದೆ. ಸರ್ಕಾರ ಜನ್ಮಶತಮಾನೋತ್ಸವ ಮಾಡುವ ಮೂಲಕ ಅವರ ಸಂಗೀತೋಪಾಸನೆಯ ಜೀವನ ಮುಂಬರುವ ಪೀಳಿಗೆಗೆ ಆದರ್ಶವಾಗಲಿದೆ. ಭೀಮಸೇನ ಜೋಶಿಯವರ ಸಂಗೀತ ಕೇಳುತ್ತಿದ್ದರೆ ಮೈಯಲ್ಲಿರುವ ನರನಾಡಿಗಳು ರೋಮಾಂಚನಗೊಳ್ಳುತ್ತಿದ್ದವು. ಬಹಳ ಹತ್ತಿರದಿಂದ ಅವರ ಸಂಗೀತ ಕೇಳಿದ್ದೇನೆ. ಸರಕಾರ ಅವರಿಗೆ ಭಾರತ ರತ್ನ ನೀಡಿದ್ದು, ಅದು ಭಾರತರತ್ನ ಪ್ರಶಸ್ತಿಗೆ ದೊರೆತ ಗೌರವವಾಗಿದೆ ಎಂದರು. ಪಂಡಿತ ವೆಂಕಟೇಶ ಆಲ್ಕೋಡ್‌, ಪಂಡಿತ ಜಯತೀರ್ಥ ಮೇವುಂಡಿ,
ವಿದುಷಿ ರೇಣುಕಾ ನಾಕೋಡ್‌ ಹಿಂದೂಸ್ತಾನಿ ಶಾಸ್ತ್ರೀಯ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಪಂಡಿತ ರಾಜಗೋಪಾಲ ಕಲ್ಲೂರಕರ್‌ ಅವರ ನಿರ್ದೇಶನದಲ್ಲಿ ಕಲ್ಲೂರ ಮಹಾಲಕ್ಷಿ ತಬಲಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಮೂಹ ತಬಲಾ ವಾದನ ನುಡಿಸಿದರು. ಪಂಡಿತ ರಘುನಾಥ್‌ ನಾಕೋಡ್‌ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತಬಲಾ ಸಾಥ್‌ ನೀಡಿದರು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾದ ಡಾ| ವೀರಣ್ಣ ಪತ್ತಾರ, ವಿದುಷಿ ಹೇಮಾ ವಾಗೊಡೆ, ಡಾ| ಪದ್ಮನಿ ಓಕ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ ಹಾಗೂ ಇನ್ನಿತರರಿದ್ದರು.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.