ಸಾರ್ವಜನಿಕರ ಅಹವಾಲು ಆಲಿಸಿದ ಶೆಟ್ಟರ

ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿ ದುರಸ್ತಿ ಮಾಡಲಾಗುವುದು

Team Udayavani, Jan 21, 2022, 5:45 PM IST

ಸಾರ್ವಜನಿಕರ ಅಹವಾಲು ಆಲಿಸಿದ ಶೆಟ್ಟರ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಗುರುವಾರ ಇಲ್ಲಿನ ಹಳೇಹುಬ್ಬಳ್ಳಿಯ ಅರವಿಂದ ಹಾಗೂ ಬ್ಯಾಂಕರ್ಸ್‌ ಕಾಲೋನಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

ವಾರ್ಡ್‌ ನಂ. 42ರ ಅರವಿಂದ ನಗರದ ರಸ್ತೆ ಹಾಗೂ ಒಳಚರಂಡಿ ಸಮಸ್ಯೆ ವೀಕ್ಷಿಸಿ ಮಾತನಾಡಿದ ಅವರು, ಇಲ್ಲಿನ ರಸ್ತೆ-ಒಳಚರಂಡಿ ಅಭಿವೃದ್ಧಿ ಪಡಿಸಲಾಗುವುದು. ಉದ್ಯಾನದ ಸಮಸ್ಯೆ ಬಗೆಹರಿಸಲಾಗುವುದು. ಸಾರ್ವಜನಿಕರು ಓಡಾಡಲು ಫುಟ್‌ಪಾತ್‌ ನಿರ್ಮಿಸಲಾಗುವುದು.

ಚನ್ನಪೇಟೆಯ ಚರಂಡಿ ಮಣ್ಣಿನಿಂದ ತುಂಬಿ ಹೋಗಿದೆ. ಈ ಚರಂಡಿಯಿಂದ ಇಲ್ಲಿನ ಜನರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಚರಂಡಿಯಲ್ಲಿನ ಹೂಳು ತೆಗೆಯಲು ಅಧಿಕಾರಿಗಳಿಗೆ ಸೂಚಿಸುವೆ. ಜಲಮಂಡಳಿ ಹಾಗೂ ಪಾಲಿಕೆ ಸದಸ್ಯರ ಜತೆ ಮಾತನಾಡಿ ವಾರ್ಡ್‌ನ ಒಳರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿ ದುರಸ್ತಿ ಮಾಡಲಾಗುವುದು ಎಂದರು.

ವಾರ್ಡ್‌ ನಂ. 40ರ ಬ್ಯಾಂಕರ್ಸ್‌ ಕಾಲೋನಿಗೆ ಭೇಟಿ ನೀಡಿದ ಅವರು, ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿದರು. ಕಳಪೆ ಕಾಮಗಾರಿ ಕಂಡು ಬಂದರೆ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಅಭಿವೃದ್ಧಿ ಕೆಲಸಗಳಿಗೆ ಯಾವುದೇ ರೀತಿ ಅಡೆತಡೆ ಆಗದಂತೆ ಜನರು ಸಹಕರಿಸಬೇಕು. ರಸ್ತೆ ಅಗಲೀಕರಣದಿಂದ ಜನರಿಗೆ ಕೆಲವು ದಿನಗಳ ಕಾಲ ತೊಂದರೆ ಆಗಲಿದೆ. ಆದ್ದರಿಂದ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ವಾರ್ಡ್‌ ಜನರ ಕುಂದುಕೊರತೆ ಆಲಿಸಿ, ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಜಿ ಮಹಾಪೌರ ಡಿ.ಕೆ.ಚವ್ಹಾಣ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಮುಖಂಡರಾದ ವಿನಾಯಕ ಕುಲಕರ್ಣಿ, ಮಹೇಂದ್ರ ಕೌತಾಳ, ಮುಕುಂದ ಗುಗ್ಗರಿ, ಶಿವನಗೌಡ ಮೊದಲಾವರಿದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.