ಹೆಜ್ಜೆಗೊಂದು ಮದ್ಯದಂಗಡಿ ಅಧಃಪತನದ ಸಂಕೇತ

ವ್ಯಸನಗಳಿಗೆ ಮುಕ್ತಿ ಹಾಡಲು ಜನಜಾಗೃತಿ ವೇದಿಕೆ ಜನ್ಮ ; 1.5 ಲಕ್ಷ ಕುಟುಂಬ ರಕ್ಷಣೆ ಸಾಮಾನ್ಯ ವಿಷಯವಲ್ಲ

Team Udayavani, Sep 25, 2022, 3:45 PM IST

13

ಹುಬ್ಬಳ್ಳಿ: ಹೆಜ್ಜೆಗೊಂದು ಮದ್ಯದಂಗಡಿ ಇದು ಅಧಃಪತನದ ಸಂಕೇತವೇ ಸರಿ ಎಂದು ಮೂರು ಸಾವಿರ ಮಠದ ಜಗದ್ಗುರು ಡಾ| ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

ಜಿಲ್ಲಾ ನಾಗರಿಕರ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜಣ್ಣ ಕೊರವಿ ಅವರ ಅಭಿನಂದನಾ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ನಗರ ಅಷ್ಟೇ ಅಲ್ಲ ಗ್ರಾಮೀಣ ಭಾಗಕ್ಕೆ ಮದ್ಯದ ಅಂಗಡಿಗಳು ಆರಂಭಗೊಂಡಿದ್ದು, ಕುಡುಕರಿಲ್ಲದ ಗ್ರಾಮಗಳಿಲ್ಲ ಎನ್ನುವಂತಾಗಿದೆ. ಮದ್ಯ ಇತರೆ ವ್ಯಸನಗಳಿಗೆ ಮುಕ್ತಿ ಹಾಡಬೇಕೆಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆ ಅವರು ಜನಜಾಗೃತಿ ವೇದಿಕೆ ಹುಟ್ಟು ಹಾಕಿದ್ದು, ಈಗಾಗಲೇ 1.5 ಲಕ್ಷ ಕುಟುಂಬಗಳನ್ನು ರಕ್ಷಣೆ ಮಾಡಿದ್ದಾರೆ ಎಂದರೆ ಅದು ಸಾಮಾನ್ಯ ವಿಷಯವಲ್ಲ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ ಮಾತನಾಡಿ, ಸಮಾಜದ ಒಳಿತಿಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಉತ್ತಮ ಕಾರ್ಯ ನಡೆಯುತ್ತಿದ್ದು, ಉತ್ಸಾಹಿಯಾಗಿರುವ ರಾಜಣ್ಣ ಕೊರವಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಹೆಮ್ಮೆ ಸಂಗತಿ. ಡಾ|ವೀರೇಂದ್ರ ಹೆಗ್ಗಡೆ ಅವರ ಇಂತಹ ಸೇವಾ ಕಾರ್ಯವನ್ನು ನೋಡಿಕೊಂಡೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಾ| ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು.

ರಾಜಣ್ಣ ಕೊರವಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಇದೊಂದು ವಿಶೇಷ ಕಾರ್ಯಕ್ರಮವಾಗಿದೆ. ಸೇವೆ ಮಾಡಬೇಕು ಎನ್ನುವ ಉದ್ದೇಶದಿಂದ ಕಳೆದ 10 ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದ್ದು, ಇದೀಗ ರಾಜ್ಯಾಧ್ಯಕ್ಷರ ಸ್ಥಾನ ನನಗೆ ಲಭಿಸಿದ್ದು, ಹೆಚ್ಚಿನ ಜವಾಬ್ದಾರಿ ನೀಡಿದೆ. ಕಳೆದ ಏಳು ವರ್ಷಗಳಿಂದ ಜಿಲ್ಲಾಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನ ಲಭಿಸಿದೆ. ಧಾರವಾಡ ಜಿಲ್ಲೆಯಲ್ಲಿ 1.82 ಲಕ್ಷ ಜನ ಸದಸ್ಯರಿದ್ದಾರೆ. ಇಲ್ಲಿ ಎಲ್ಲರೂ ಅಧ್ಯಕ್ಷರೆ. ಎಲ್ಲರೂ ಸೇರಿ ಕೆಲಸ ಮಾಡೋಣ ಎಂದರು.

ದುಗ್ಗೆಗೌಡರ ಪ್ರಾಸ್ತಾವಿಕ ಮಾತನಾಡಿ, ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಇನ್ನೊಂದು ರುಡ್‌ಸೆಟ್‌ ಸಂಸ್ಥೆ ಹುಟ್ಟು ಹಾಕಲಾಗಿದ್ದು, ಇಂದು ಬೆಳೆದು ಹೆಮ್ಮರವಾಗಿ ನಿಂತಿವೆ ಎಂದರು. ರಾಜ್ಯದಲ್ಲಿ ಸುಮಾರು 48 ಲಕ್ಷ ಕುಟುಂಬಗಳು ಇದರ ಸದುಪಯೋಗ ಪಡೆಯುತ್ತಿವೆ. ಮದ್ಯವರ್ಜನೆ ಶಿಬಿರ ನಡೆಸಿ ಲಕ್ಷಾಂತರ ಜನರನ್ನು ಮದ್ಯಮುಕ್ತರನ್ನಾಗಿ ಮಾಡಲಾಗಿದೆ. ದುಶ್ಚಟಗಳಿಗೆ ಬಲಿಯಾಗುತ್ತಿದ್ದ ಸಾವಿರಾರು ಜನರು ರಕ್ಷಿಸಲಾಗಿದೆ ಎಂದರು.

ಶಿರಹಟ್ಟಿ ಸಂಸ್ಥಾನಮಠದ ಶ್ರೀ ಫಕ್ಕಿರ ಸಿದ್ಧರಾಮ ಸ್ವಾಮೀಜಿ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಂಸದ ಪ್ರೊ|ಐ.ಜಿ.ಸನದಿ ಮಾತನಾಡಿದರು. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು.

ಮುಖಂಡರಾದ ತವನಪ್ಪ ಅಷ್ಟಗಿ, ಸದಾನಂದ ಡಂಗನವರ, ಎಸ್‌.ಐ.ಚಿಕ್ಕನಗೌಡರ, ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಚನ್ನು ಪಾಟೀಲ, ಗಂಗಾಧರ ಬಂಡಿಹಾಳ, ಮಹೇಶ ಟೆಂಗಿನಕಾಯಿ, ಅನಿಲಕುಮಾರ ಪಾಟೀಲ, ಪೀರಾಜಿ ಖಂಡೇಕಾರ, ಶಿವು ಹಿರೇಕೆರೂರ ಇನ್ನಿತರರಿದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.