4.5 ಕೋಟಿ ರೂ. ಬಾಕಿ; ಬಡವರ ಊಟಕ್ಕೆ ಕಲ್ಲು

ಇಂದಿರಾ ಕ್ಯಾಂಟೀನ್     ಕಥೆ -ವ್ಯಥೆ

Team Udayavani, May 9, 2022, 12:45 PM IST

7

ಹುಬ್ಬಳ್ಳಿ: ಕನಿಷ್ಟ ದರದಲ್ಲಿ ಕೂಲಿ ಕಾರ್ಮಿಕರ, ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣಾ ಅನುದಾನಕ್ಕೆ ಕತ್ತರಿ ಬಿದ್ದಿದೆ. ನಿರ್ವಹಣೆ ಹೊಣೆ ಹೊತ್ತಿರುವ ಗುತ್ತಿಗೆದಾರರಿಗೆ ಮಹಾನಗರ ಪಾಲಿಕೆ ಹಾಗೂ ಕಾರ್ಮಿಕರ ಇಲಾಖೆ ಸೇರಿ 4.5 ಕೋಟಿ ರೂ. ಅನುದಾನ ಬಾಕಿ ಉಳಿಸಿಕೊಂಡಿದ್ದು, ಬಡವರ ಊಟಕ್ಕೆ ಸರಕಾರ ಕಲ್ಲು ಹಾಕುತ್ತಿದೆಯಾ ಎನ್ನುವ ಗುಮಾನಿ ಶುರುವಾಗಿದೆ.

ಕಾಂಗ್ರೆಸ್‌ ಅವಧಿಯಲ್ಲಿನ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್‌ ಒಂದು. ಬಡವರು, ಕೂಲಿ ಕಾರ್ಮಿಕರು ಕಡಿಮೆ ಖರ್ಚಿನಲ್ಲಿ ಮೂರು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜಾರಿಗೆ ತಂದರು.

ಪಾಲಿಕೆಗೆ ಶೇ.70 ಹಾಗೂ ಕಾರ್ಮಿಕ ಇಲಾಖೆಗೆ ಶೇ.30 ಅನುದಾನದ ಹೊಣೆ ಹೊರಿಸಿ ಯೋಜನೆ ರೂಪಿಸಲಾಗಿತ್ತು. ಆರಂಭದಲ್ಲಿ ಇಷ್ಟೊಂದು ಅನುದಾನ ನೀಡಲು ಸಾಧ್ಯವಿಲ್ಲ ಎಂದು ಪಾಲಿಕೆ ವಿರೋಧ ವ್ಯಕ್ತಪಡಿಸಿತ್ತಾದರೂ ಸರಕಾರ ಮಟ್ಟದಲ್ಲಿ ಯಶಸ್ವಿಯಾಗಲಿಲ್ಲ.

ಸರಕಾರ ಬದಲಾಗುತ್ತಿದ್ದಂತೆ ಅನುದಾನ ಕೊರತೆಯಿಂದಾಗಿ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಹಾನಗರ ವ್ಯಾಪ್ತಿಯ 9 ಕ್ಯಾಂಟೀನ್‌ಗಳ ಗುತ್ತಿಗೆ ಪಡೆದಿರುವ ಮಯೂರ ಆದಿತ್ಯಾ ರೆಸಾರ್ಟ್‌ ಕಳೆದ ಒಂದೂವರೆ ವರ್ಷದಿಂದ ಅನುದಾನಕ್ಕಾಗಿ ಪಾಲಿಕೆ ಹಾಗೂ ಕಾರ್ಮಿಕ ಇಲಾಖೆ ಕದ ತಟ್ಟಿದರೂ ಕಡತ ಮುಂದೆ ಹೋಗುತ್ತಿಲ್ಲ.

ಸಕಾಲಕ್ಕೆ ಪಾವತಿಯಿಲ್ಲ: 2018-19ರಲ್ಲಿ ಯೋಜನೆ ಆರಂಭವಾದರೂ ಅಂದಿನಿಂದ ಒಂದಲ್ಲಾ ಒಂದು ಕಾರಣದಿಂದ ಸಕಾಲಕ್ಕೆ ಗುತ್ತಿಗೆದಾರರಿಗೆ ಬಿಲ್‌ ಪಾವತಿಯಾಗಿರುವ ಆಗಿರುವ ಉದಾಹರಣೆಗಳಿಲ್ಲ. ಮಹಾನಗರ ಪಾಲಿಕೆ ಕಳೆದ ಒಂದೂವರೆ ವರ್ಷದಿಂದ ಸುಮಾರು 1.98 ಕೋಟಿ ರೂ. ಬಿಲ್‌ ಬಾಕಿ ಉಳಿಸಿಕೊಂಡಿದೆ. ಇನ್ನೂ ಕ್ಯಾಂಟೀನ್‌ಗಳು ಆರಂಭವಾದಾಗಿನಿಂದಲೂ ಕಾರ್ಮಿಕ ಇಲಾಖೆ ಕೂಡ ಬರೋಬ್ಬರಿ 2.20 ಕೋಟಿ ರೂ. ಬಿಲ್‌ ಉಳಿಸಿಕೊಂಡಿದೆ. ಅನುದಾನ ಬಿಡುಗಡೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರಕಾರದಿಂದ ಅನುದಾನ ಬಿಡುಗಡೆಯಾಗಲಿದೆ ಎನ್ನುವ ಭರವಸೆ ಮೇಲೆಯೇ ನಿತ್ಯವೂ ಹಸಿದವರಿಗೆ ಅನ್ನ ಹಾಕುವ ಕೆಲಸ ಮಾಡುತ್ತಿದ್ದಾರೆ.

ಮೂರು ಕ್ಯಾಂಟೀನ್‌ಗೆ ತಿಲಾಂಜಲಿ!

ಮಹಾನಗರ ವ್ಯಾಪ್ತಿಯಲ್ಲಿ ಸರಕಾರದಿಂದ 12 ಕ್ಯಾಂಟೀನ್‌ಗಳು ಮಂಜೂರಾಗಿದ್ದವು. ಅವುಗಳಲ್ಲಿ 9 ಕ್ಯಾಂಟೀನ್‌ಗಳನ್ನು ಹರಸಾಹಸ ಪಟ್ಟು ಆರಂಭಿಸಲಾಗಿತ್ತು. ಉಳಿದ ಮೂರು ಕ್ಯಾಂಟೀನ್‌ಗಳಿಗೆ ಜಾಗ ಗುರುತಿಸುವುದರಲ್ಲೇ ನಾಲ್ಕು ವರ್ಷ ತಳ್ಳಿದ್ದು, ಮೂರು ಕ್ಯಾಂಟೀನ್‌ಗಳಿಗೆ ಬಹುತೇಕ ಎಳ್ಳು ನೀರು ಬಿಟ್ಟಂತಾಗಿದೆ. ಅಧಿಕಾರಿಗಳು ಮಾಡಿರುವ ತಪ್ಪಿನಿಂದಾಗಿ ಆ ಭಾಗದ ಬಡವರು, ಕೂಲಿ ಕಾರ್ಮಿಕರಿಗೆ ಈ ಸೇವೆ ದೊರೆಯದಂತಾಗಿದೆ. ಆರಂಭದಲ್ಲಿ 12 ಕ್ಯಾಂಟೀನ್‌ ನೀಡುವುದಾಗಿ ಗುತ್ತಿಗೆದಾರರಿಗೆ ಸರಕಾರ ಭರವಸೆ ನೀಡಿತ್ತು. ಹೀಗಾಗಿ 12 ಕ್ಯಾಂಟೀನ್‌ಗೂ ಬ್ಯಾಂಕ್‌ ಗ್ಯಾರಂಟಿ ಪಡೆಯಲಾಗಿದೆ. ಆದರೆ ನಾಲ್ಕು ವರ್ಷ ಕಳೆದರೂ ಉಳಿದ ಮೂರು ಕ್ಯಾಂಟೀನ್‌ ಆರಂಭಿಸುವ ಬಗ್ಗೆ ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ಇನ್ನೆಷ್ಟು ದಿನ ಗುತ್ತಿಗೆದಾರರ ಹೆಗಲಿಗೆ ಸಾಲದ ಹೊರೆ?

ಸೇವೆ ಹಾಗೂ ವ್ಯಾವಹಾರಿಕ ದೃಷ್ಟಿಯಿಂದ ನಿರ್ವಹಣಾ ಗುತ್ತಿಗೆ ಪಡೆದವರು ಅನುದಾನವಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ಪ್ರತಿ ತಿಂಗಳು 9 ಕ್ಯಾಂಟೀನ್‌ಗೆ ಆಹಾರ, ಸಿಬ್ಬಂದಿ, ವಾಹನ ಸೇರಿದಂತೆ ಎಲ್ಲಾ ಖರ್ಚುಗಳು ಸುಮಾರು 14-16 ಲಕ್ಷ ರೂ. ತಗುಲುತ್ತಿದೆ. ಆದರೆ ಪಾಲಿಕೆ ಹಾಗೂ ಕಾರ್ಮಿಕ ಇಲಾಖೆ ಬಾಕಿ ಉಳಿಸಿಕೊಂಡಿದ್ದರಿಂದ ಬ್ಯಾಂಕ್‌ ಸಾಲ ಮಾಡಿ ನಿರ್ವಹಣೆ ಮಾಡುವಂತಾಗಿದೆ. ಅಗತ್ಯವಿಲ್ಲದ ಕಡೆಗಳಲ್ಲಿ ಪಾಲಿಕೆ ಕ್ಯಾಂಟೀನ್‌ ಸ್ಥಳ ಗುರುತಿಸಿದ ಕಾರಣ ನೀಡಿದ ಗುರಿ ತಲುಪುತ್ತಿಲ್ಲ. ಹೀಗಾಗಿ ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಊಟ, ತಿಂಡಿ ಲೆಕ್ಕ ತೋರಿಸಬಾರದು ಎನ್ನುವ ಕಾರಣಕ್ಕೆ ಟೋಕನ್‌ ಕಡಿಮೆ ಮಾಡಿಸಿದ್ದಾರೆ. ಎಲ್ಲಾ ಕ್ಯಾಂಟೀನ್‌ಗಳಲ್ಲಿ ಸಿಸಿ ಕ್ಯಾಮರಾ ಸೇರಿದಂತೆ ಎಚ್ಚರಿಕಾ ಕಾರ್ಯ ಕೈಗೊಳ್ಳಲಾಗಿದೆ. ಸರಕಾರದ ನಿಯಮದಂತೆ ಪಾಲಿಕೆ ಹಾಗೂ ಕಾರ್ಮಿಕ ಇಲಾಖೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎನ್ನುವುದು ಗುತ್ತಿಗೆದಾರರ ಅಸಮಾಧಾನವಾಗಿದ್ದು, ಈ ನಿರ್ಲಕ್ಷ್ಯ ಮುಂದುವರಿದರೆ ಕ್ಯಾಂಟೀನ್‌ಗಳು ಮುಚ್ಚಿದರೂ ಅಚ್ಚರಿ ಪಡಬೇಕಾಗಿಲ್ಲ.

ಕೋವಿಡ್‌ ಬಾಕಿಯೂ ಇಲ್ಲ

ಕೋವಿಡ್‌ ಸಂದರ್ಭದಲ್ಲಿ ದುಡಿಮೆಯಿಲ್ಲದವರಿಗೆ, ನಿರ್ಗತಿಕರಿಗೆ ಇಂದಿರಾ ಕ್ಯಾಂಟೀನ್‌ ಮೂಲಕ ಸರ್ಕಾರ ಉಚಿತವಾಗಿ ಆಹಾರ ವಿತರಣೆ ಮಾಡಿತು. ಸುಮಾರು ಎರಡು ತಿಂಗಳ ಕಾಲ ತಿಂಡಿಗೆ 5 ರೂ. ಊಟಕ್ಕೆ 10 ರೂ. ಶುಲ್ಕವನ್ನು ಪಡೆಯದೆ ಉಚಿತವಾಗಿ ತಿಂಡಿ ಹಾಗೂ ಊಟ ವಿತರಿಸಲಾಯಿತು. ಸರಕಾರಿ ಆದೇಶದ ಪ್ರಕಾರ ಉಚಿತವಾಗಿ ವಿತರಿಸಿದ ಬಾಕಿ ಬರೋಬ್ಬರಿ 35 ಲಕ್ಷ ರೂ. ಆಗಿದೆ. ಮಹಾನಗರ ಪಾಲಿಕೆ ಅಥವಾ ಕಾರ್ಮಿಕ ಇಲಾಖೆ ಈ ಬಿಲ್‌ ತಮಗೆ ಸಂಬಂಧಿಸಿದ್ದಲ್ಲ ಎನ್ನುವಂತೆ ವರ್ತಿಸುತ್ತಿದೆ. ಸರಕಾರದಿಂದ ಅನುದಾನ ಬಿಡುಗಡೆಯಾದರೆ ಪಾವತಿ ಮಾಡುವುದಾಗಿ ಭರವಸೆ ನೀಡುತ್ತಿದ್ದಾರೆ ಎನ್ನುವುದು ಗುತ್ತಿಗೆದಾರರ ಅಳಲು.

ಪಾಲಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ಕೋಟ್ಯಂತರ ರೂ. ಅನುದಾನ ಬಾಕಿ ಉಳಿಸಿಕೊಂಡರೆ ನಿರ್ವಹಣೆ ಮಾಡುವುದಾರೂ ಹೇಗೆ. 12 ಕ್ಯಾಂಟೀನ್‌ಗಳಲ್ಲಿ 9 ಮಾತ್ರವೇ ನೀಡಿ ಪಾಲಿಕೆಯವರು ಅನ್ಯಾಯ ಮಾಡಿದ್ದಾರೆ. ಅನುದಾನ ನೀಡದ ಕಾರಣ ಬ್ಯಾಂಕ್‌ನಿಂದ ಸಾಲ ಮಾಡಿ ನಿರ್ವಹಣೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಲಿಕೆಯ ನೂತನ ಆಯುಕ್ತರು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.  -ಮೋಹನ ಮೋರೆ, ಗುತ್ತಿಗೆದಾರರು   

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.