ಮೊದಲ ಡೋಸ್‌ ಲಸಿಕೆ ಶೇ.94 ಪ್ರಗತಿ

ಈಗಾಗಲೇ 17120 ಜನರಿಗೆ ಎರಡನೇ ಡೋಸ್‌ ಲಸಿಕೆ ಕೂಡ ನೀಡಲಾಗಿದೆ

Team Udayavani, Dec 9, 2021, 5:39 PM IST

ಮೊದಲ ಡೋಸ್‌ ಲಸಿಕೆ ಶೇ.94 ಪ್ರಗತಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್‌ ನಿರೋಧಕ ಲಸಿಕಾಕರಣ ಕಾರ್ಯ ಪ್ರಗತಿಯಲ್ಲಿದ್ದು, ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಶೇ.100 ಮೊದಲ ಡೋಸ್‌ ಲಸಿಕೆ ಕಾರ್ಯ ಪೂರ್ಣಗೊಂಡಿದೆ. ಜಿಲ್ಲೆಯಾದ್ಯಂತ ಈವರೆಗೆ 13,58,894 ಜನರಿಗೆ ಲಸಿಕೆ ನೀಡಿದ್ದು, ಶೇ. 94 ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್‌ ವಿರುದ್ಧದ ಹೋರಾಟಕ್ಕೆ ಲಸಿಕಾಕರಣ ಪ್ರಮುಖ ಅಸ್ತ್ರವಾಗಿದ್ದು, ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಲಸಿಕೆ ಪೂರಕವಾಗಿದೆ. ಹುಬ್ಬಳ್ಳಿಯ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ, ಕಲಘಟಗಿ ತಾಲೂಕು ಮುಕ್ಕಲ್‌, ಅಣ್ಣಿಗೇರಿ ತಾಲೂಕು ಶಲವಡಿ ಹಾಗೂ ಧಾರವಾಡ ತಾಲೂಕಿನ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರಗಳು ತಮ್ಮ ವ್ಯಾಪ್ತಿಯಲ್ಲಿ ಶೇ.100 ಮೊದಲ ಡೋಸ್‌ ಲಸಿಕೆ ನೀಡಿವೆ. ಜಿಲ್ಲೆಯಾದ್ಯಂತ ಒಟ್ಟು 14,44,000 ಅರ್ಹರಿಗೆ ಕೋವಿಡ್‌ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಕಳೆದ ಜನವರಿ 16ರಿಂದ ಡಿಸೆಂಬರ್‌ 7ರವರೆಗೆ 13,58,894 ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿ ಶೇ.94ರಷ್ಟು ಗುರಿ ಸಾಧಿಸಲಾಗಿದೆ. 9,05,943 ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಿ ಶೇ.74ರಷ್ಟು ಪ್ರಗತಿ ಸಾಧಿಸಲಾಗಿದೆ. ಹುಬ್ಬಳ್ಳಿ ನಗರದ ಕೇಶ್ವಾಪುರ, ರಾಮನಗರ, ಬದಾಮಿ ನಗರ, ಶಬರಿ ನಗರ, ಜೆ.ಸಿ. ನಗರ ಹಾಗೂ ದೇಶಪಾಂಡೆ ನಗರದ ಕೆಲವು ಭಾಗಗಳ ವ್ಯಾಪ್ತಿ ಹೊಂದಿರುವ ಚಿಟಗುಪ್ಪಿ ಆಸ್ಪತ್ರೆಯ ತಂಡಕ್ಕೆ 18 ವರ್ಷ ಮೇಲ್ಪಟ್ಟ ಅರ್ಹ 37,760 ಜನರಿಗೆ ಕೋವಿಡ್‌ ನಿರೋಧಕ ಲಸಿಕೆಯ ಗುರಿ ನೀಡಲಾಗಿತ್ತು. ಈವರೆಗೆ 39,427 ಜನರಿಗೆ ಮೊದಲ ಲಸಿಕೆ ನೀಡಿದ್ದು ಶೇ. 100ಕ್ಕಿಂತ ಅಧಿಕ ಸಾಧನೆ ಮಾಡಲಾಗಿದೆ. ಶೇ.85 ಎರಡನೇ ಡೋಸ್‌ ಲಸಿಕೆ ಕೂಡ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಲಸಿಕಾಕರಣದ ಮೊದಲ ದಿನದಿಂದಲೇ ತಂಡಗಳು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿವೆ. ಪ್ರತಿದಿನ ಹಂಚಿಕೆಯಾದ ಡೋಸ್‌ಗಳನ್ನು ಅದೇ ದಿನ ಅರ್ಹರಿಗೆ ನೀಡುವ ಕಾರ್ಯ ನಿರಂತರವಾಗಿ ನಡೆದ ಪರಿಣಾಮ ಈ ಸಾಧನೆ ಸಾಧ್ಯವಾಗಿದೆ. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳು ಕೂಡ ಈ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ| ಶ್ರೀಧರ ದಂಡಪ್ಪನವರ ತಿಳಿಸಿದ್ದಾರೆ.

ಮುಕ್ಕಲ್‌ ಪಿಎಚ್‌ಸಿ ಶೇ. 101 ಸಾಧನೆ:ಕಲಘಟಗಿ ತಾಲೂಕ ಮುಕ್ಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 17 ಹಳ್ಳಿಗಳಿವೆ. 19,667 ಅರ್ಹರಿಗೆ ಲಸಿಕೆ ನೀಡುವ ಗುರಿ ಇತ್ತು. 19,980 ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿ ಶೇ. 101.57 ಸಾಧನೆ ಮಾಡಲಾಗಿದೆ. 11,680 ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದ್ದು, ಶೇ.58 ಪ್ರಗತಿ ಸಾಧಿಸಲಾಗಿದೆ.

ಲಸಿಕಾಕರಣದ ಯುವ ಉತ್ಸಾಹಿ ತಂಡವು ಲಸಿಕೆಯ ಮಾಹಿತಿ ನೀಡಿ, ಕೆಲವರಲ್ಲಿದ್ದ ತಪ್ಪು ಗ್ರಹಿಕೆಗಳನ್ನು ಹೋಗಲಾಡಿಸಲು ಹೆಚ್ಚು ಒತ್ತು ನೀಡಲಾಯಿತು. ಸ್ಥಳೀಯ ಗ್ರಾಪಂ ಮತ್ತು ಆರೋಗ್ಯ ಇಲಾಖೆ ಧ್ವನಿ ಸಂದೇಶಗಳನ್ನು ಮುದ್ರಿಸಿ ಪ್ರಚಾರ ಕೈಗೊಂಡ ಪರಿಣಾಮ ಈ ಕಾರ್ಯ ಸಾಧ್ಯವಾಗಿದೆ. ಬಹುತೇಕ ಹಳ್ಳಿಗಳಲ್ಲಿ ದುಡಿಯುವ ವರ್ಗ ಸಂಜೆ ಸಿಗುತ್ತಿದ್ದರಿಂದ ರಾತ್ರಿ 8:00-9:00 ಗಂಟೆವರೆಗೆ ಲಸಿಕೆ ನೀಡಲಾಗಿದೆ ಎಂದು ಮುಕ್ಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ರವಿ ಸೋಮಣ್ಣವರ ಹೇಳಿದ್ದಾರೆ.

ಧಾರವಾಡ ತಾಲೂಕು ಗರಗ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 27,672 ಜನರಿಗೆ ಕೋವಿಡ್‌ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 27,691 ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿ ಶೇ. 100ಕ್ಕಿಂತ ಅಧಿಕ ಸಾಧನೆ ಮಾಡಲಾಗಿದೆ. ಈಗಾಗಲೇ 17120 ಜನರಿಗೆ ಎರಡನೇ ಡೋಸ್‌ ಲಸಿಕೆ ಕೂಡ ನೀಡಲಾಗಿದೆ ಎಂದು ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ರಾಜಶೇಖರ ಪತ್ತಾರ ಹೇಳಿದ್ದಾರೆ.

ಅಣ್ಣಿಗೇರಿ ತಾಲೂಕು ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 14 ಹಳ್ಳಿಗಳಿವೆ. 21,854 ಜನರಿಗೆ ಕೋವಿಡ್‌ ಲಸಿಕೆ ನೀಡುವ ಗುರಿ ಇದೆ. ಡಿ.7ರವರೆಗೆ 21,907 ಮೊದಲ ಡೋಸ್‌ ಲಸಿಕೆಗಳನ್ನು ನೀಡಿ ಶೇ.100ಕ್ಕೂ ಅಧಿಕ ಗುರಿ ಸಾಧಿಸಲಾಗಿದೆ. 11,213 ಜನರಿಗೆ ಎರಡನೇ ಡೋಸ್‌ ಲಸಿಕೆಗಳನ್ನು ನೀಡಿ ಶೇ.52 ಸಾಧನೆ ಮಾಡಲಾಗಿದೆ. 30 ಲಸಿಕಾ ತಂಡಗಳನ್ನು ರಚಿಸಿ ಪ್ರತಿ ಮನೆಗಳಿಗೂ ತೆರಳಿ ಸಮೀಕ್ಷೆ ಮಾಡಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ದೇಶಪಾಂಡೆ ಫೌಂಡೇಷನ್‌ ಬಹಳಷ್ಟು ಸಹಕಾರ ನೀಡಿವೆ ಎಂದು ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅಶೋಕ ಅಗರವಾಲ ಹೇಳಿದ್ದಾರೆ. ಕೋವಿಡ್‌ ನಿಯಂತ್ರಣದಲ್ಲಿ ಲಸಿಕಾಕರಣ ಮಹತ್ವದ್ದಾಗಿದ್ದು, ಜಿಲ್ಲೆಯ ಎಲ್ಲ ಜನತೆ ಲಸಿಕೆ ಹಾಕಿಸಿಕೊಳ್ಳಬೇಕು. ಪರಿಚಿತರಿಗೂ ತಿಳಿ ಹೇಳಿ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.