ಚಿತ್ತಾಪುರ ಕ್ಷೇತ್ರದಲ್ಲೂ ಬಿಜೆಪಿ ಬಾವುಟ ಹಾರಿಸಿ

Team Udayavani, Sep 26, 2021, 4:02 PM IST

25ctpr1

ಚಿತ್ತಾಪುರ: ಭಾರತ ದೇಶ ಕಂಡ ಅತ್ಯಂತ ಸಜ್ಜನ, ಸರಳ, ಸಿದ್ಧಾಂತ ಅಳವಡಿಸಿಕೊಂಡಿದ್ದ ರಾಜಕಾರಣಿ ಪಂಡಿತ ದೀನ ದಯಾಳ ಉಪಾಧ್ಯಾಯ ರಾಷ್ಟ್ರಕ್ಕಾಗಿ ಜೀವನ ಅರ್ಪಿಸಿದ ಶ್ರೇಷ್ಠ ನಾಯಕರಾಗಿದ್ದರು ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.

ಪಟ್ಟಣದ ಬಾಪುರಾವ್‌ ಪಾಟೀಲ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಂಡಿತ ದೀನದಯಾಳ ಉಪಾಧ್ಯಾಯರ 105ನೇ ಜನ್ಮದಿನದ ಅಂಗವಾಗಿ ದೀಪದಿಂದ ಕಮಲದ ವರೆಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೀನ ದಯಾಳ ಅವರಲ್ಲಿನ ಪಕ್ಷ ನಿಷ್ಠೆ, ರಾಷ್ಟ್ರ ಭಕ್ತಿ ನಮಗೆಲ್ಲಾ ಸದಾ ಪ್ರೇರಣೆ. ಅವರ ಆದರ್ಶ, ತತ್ವ, ಸಿದ್ಧಾಂತ ಅಳವಡಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆಯಲ್ಲಿ ತೊಡಗಿ, ಮತ್ತೆ ದೇಶದಲ್ಲಿ, ರಾಜ್ಯದಲ್ಲಿ ಅಷ್ಟೇ ಅಲ್ಲ ಚಿತ್ತಾಪುರ ಕ್ಷೇತ್ರದಲ್ಲೂ ಬಿಜೆಪಿ ಬಾವುಟ ಹಾರಿಸಬೇಕು ಎಂದು ಕರೆ ನೀಡಿದರು. ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಭಾರತೀಯ ಜನತಾ ಪಕ್ಷ ಇಷ್ಟು ಎತ್ತರಕ್ಕೆ ಬೆಳೆಯಲು ದೀನದಯಾಳ ಆದರ್ಶಗಳೇ ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ದೀನದಯಾಳ ಜೀವನ ಚರಿತ್ರೆ ತಿಳಿದುಕೊಳ್ಳಬೇಕು ಎಂದರು. ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ನಾಮದೇವ ಕರಹರಿ ಪಂಡಿತ ದೀನದಯಾಳ ಉಪಾಧ್ಯಾಯರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು.

ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ, ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್‌, ಒಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ, ಮುಖಂಡರಾದ ಅರವಿಂದ ಚವ್ಹಾಣ, ಸೋಮಶೇಖರ ಪಾಟೀಲ ಬೆಳಗುಂಪಾ, ಗೋಪಾಲ ರಾಠೊಡ, ರಾಜು ಮುಕ್ಕಣ್ಣ, ವಿಠಲ ಜಾಧವ, ನಾಗರಾಜ ಭಂಕಲಗಿ, ಬಸವರಾಜ ಮಡ್ಡಿ, ಗುಂಡಣ್ಣ ಬಾಳಿ, ಪೋಮು ರಾಠೊಡ, ಭೀಮಣ್ಣ ಸೀಬಾ, ಶಿವಯ್ಯ ಗುತ್ತೇದಾರ, ಭೀಮರೆಡ್ಡಿ ಕುರಾಳ, ಅಣ್ಣಾರಾವ ಬಾಳಿ, ರಮೇಶ ಬೊಮ್ಮನಳ್ಳಿ, ಶಾಮ ಮೇದಾ, ನಿವೇದಿತಾ ಸಹಿಂಡೆ, ಶಾಂತಕುಮಾರ ಮಳಖೇಡ, ಸಿದ್ರಾಮಯ್ಯ ಗೊಂಬಿಮಠ, ಗುಂಡು ಪಾಟೀಲ, ಇಂದ್ರಮ್ಮರೆಡ್ಡಿ, ನಾಗುಬಾಯಿ ಜಿತುರೆ, ರಮೇಶ ಕಾರಬಾರಿ, ವೀರಣ್ಣ ಯಾರಿ, ರವಿ ನಾಯಕ, ಸುರೇಶ ಬೆನಕನಳ್ಳಿ, ಬಾಲಾಜಿ ಬುರಬುರೆ, ಹಣಮಂತ ಬೆಂಕಿ, ಶಿವರಾಮ ಪವಾರ, ಶರಣಗೌಡ ಭೀಮನಳ್ಳಿ, ಅಶ್ವತ್ಥ್ ರಾಠೊಡ, ಆನಂದ ಪಾಟೀಲ ನರಬೋಳ, ಭೀಮಶ್ಯಾ ಜೀರೊಳ್ಳಿ, ಶಿವರಾಮ ಚವ್ಹಾಣ ಇದ್ದರು. ಅಯ್ಯಪ್ಪ ರಾಮತೀರ್ಥ ಪ್ರಾರ್ಥಿಸಿದರು, ಬಸವರಾಜ ಪಂಚಾಳ ಸ್ವಾಗತಿಸಿದರು, ರಾಮದಾಸ ಚವ್ಹಾಣ ನಿರೂಪಿಸಿದರು.

ಪ್ರಧಾನಿ ಮೋದಿಯಿಂದ ದೇಶ ಅಭಿವೃದ್ಧಿ ಪಥದತ್ತ: ಶಶಿಕಲಾ ಟೆಂಗಳಿ

ಜೇವರ್ಗಿ: ಜನಸಂಘದ ಸಂಸ್ಥಾಪಕ, ವಿದ್ವಾಂಸ, ಸಂಘಟನಾಕಾರ ಅಪ್ರತಿಮ ಹೋರಾಟಗಾರ, ಪಂಡಿತ ದೀನ ದಯಾಳ ಉಪಾಧ್ಯಾಯ ಅವರ ತತ್ವಾದರ್ಶ ಹಾಗೂ ಸಿದ್ಧಾಂತಗಳಿಂದ ಬಿಜೆಪಿ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ ಮಹಾನ್‌ ಚೇತನ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.

ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಂಡಲದ ವತಿಯಿಂದ ಶನಿವಾರ ಆಯೋಜಿಸಿದ್ದ ಪಂಡಿತ ದೀನ ದಯಾಳ ಉಪಾಧ್ಯಾಯರ 105ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀನ ದಯಾಳ ಉಪಾಧ್ಯಾಯ ಅವರು ಕಂಡಿದ್ದ ಮುನ್ನೋಟದ ಹಾದಿಯಲ್ಲಿಯೇ ಹೆಜ್ಜೆಯಿಡುತ್ತಾ ಮುಂದೆ ಸಾಗುತ್ತಿದೆ. ಮೋದಿ ಅವರು ದೇಶದ ಪ್ರಧಾನಿಯಾದ ನಂತರ ಭಾರತ ದೇಶದ ದಿಕ್ಕೇ ಬದಲಾಗಿದೆ. ಮುಂದುವರಿದ ರಾಷ್ಟ್ರಗಳಲ್ಲಿ ಭಾರತ ಕೂಡ ಒಂದಾಗಿದೆ. ಪ್ರಧಾನಿ ಮೋದಿ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಗೂ ಮುಂಚೆ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನಲ್ಲಿ ಬೂತ್‌ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪಕ್ಷದ ಪದಾಧಿ ಕಾರಿಗಳು, ಕಾರ್ಯಕರ್ತರು ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಗೆ ಪಕ್ಷವನ್ನು ಸಂಘಟಿಸಲು ಒತ್ತು ನೀಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾಜಿ ಸೈನಿಕರಾದ ರಾಚಯ್ಯ ಹಿರೇಮಠ ಅರಳಗುಂಡಗಿ, ಆದಪ್ಪ ಸಾಹು ಸಿಕೇದ್‌ ಕೋಳಕೂರ, ಬಿಜೆಪಿ ಹಿರಿಯ ಮುಖಂಡ ಹಳ್ಳೆಪ್ಪಾಚಾರ್ಯ ಜೋಶಿ ಕಾಸರಭೋಸಗಾ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಹಿರಿಯ ಮುಖಂಡರಾದ ರಮೇಶಬಾಬು ವಕೀಲ, ಧರ್ಮಣ್ಣ ದೊಡ್ಡಮನಿ, ಜಿಪಂ ಮಾಜಿ ಸದಸ್ಯೆ ಶೋಭಾ ಬಾಣಿ, ಜೇವರ್ಗಿ ಬಿಜೆಪಿ ಮಂಡಲ ಅಧ್ಯಕ್ಷ ಭೀಮರಾವ್‌ ಗುಜಗೊಂಡ, ಬಸವರಾಜ ಪಾಟೀಲ ನರಿಬೋಳ, ಸಿದ್ಧಣ್ಣ ಹೂಗಾರ, ಧರ್ಮಣ್ಣ ಇಟಗಾ, ಬಸವರಾಜ ಪಾಟೀಲ ಕುಕನೂರ, ಪುಂಡಲೀಕ ಗಾಯಕವಾಡ, ಮಲ್ಲಿನಾಥಗೌಡ ಯಲಗೋಡ, ಬಸವರಾಜ ಮಾಲಿಪಾಟೀಲ ಅರಳಗುಂಡಗಿ, ರೇವಣಸಿದ್ಧಪ್ಪ ಸಂಕಾಲಿ, ಸಾಯಬಣ್ಣ ದೊಡ್ಡಮನಿ, ಕೇದಾರಲಿಂಗಯ್ಯ ಹಿರೇಮಠ, ಶರಣು ಪೂಜಾರಿ, ವಿಶಾಲ ಹಿರೇಮಠ ಸೇರಿದಂತೆ ಜೇವರ್ಗಿ, ಯಡ್ರಾಮಿ ತಾಲೂಕು ಬಿಜೆಪಿ ಮಂಡಲದ ಪದಾ ಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.