371(ಜೆ) ಪರಿಣಾಮಕಾರಿ ಜಾರಿಗೆ ಹೋರಾಟ

Team Udayavani, Feb 11, 2022, 11:48 AM IST

6cj

ಕಲಬುರಗಿ: ಸತತ ಹೋರಾಟದ ಫಲವಾಗಿ ಪಡೆಯಲಾದ ಸಂವಿಧಾನದ 371 (ಜೆ) ವಿಧಿ ಜಾರಿಯಲ್ಲಿ ಅಧಿಕಾರಿಗಳು ಅಸಡ್ಡೆ ತೋರುತ್ತಿರುವುದರಿಂದ ಹಾಗೂ ಮೀಸಲಾತಿ ಉಲ್ಲಂಘನೆ, ಬಡ್ತಿ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಜನತೆ ಮತ್ತೊಂದು ಹಂತದ ಹೋರಾಟಕ್ಕೆ ಮುಂದಾಗುವುದು ಅನಿವಾರ್ಯವಾಗಿದೆ ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಪ್ರವೇಶಾತಿ ಹಾಗೂ ನೇಮಕಾತಿ ಜತೆಗೆ ಬಡ್ತಿಯಲ್ಲಿ ಮೀಸಲಾತಿ ಕಡ್ಡಾಯ ಕಲ್ಪಿಸಬೇಕು. ಆದರೆ ಕಲ್ಯಾಣ ಕರ್ನಾಟಕದ ವಿರೋಧಿ ಧೋರಣೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ 371 (ಜೆ) ಕನ್ನಡಿಯೊಳಗಿನ ಗಂಟಾಗಿ ಪರಿಣಮಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ಉಲ್ಲಂಘನೆ, ಬಡ್ತಿಯಲ್ಲಿ ಅನ್ಯಾಯ-ಸರಿಪಡಿಸದ ದೋಷಗಳ ಹಿನ್ನೆಲೆಯಲ್ಲಿ ಪ್ರಮುಖವಾಗಿ 371 (ಜೆ) ಪ್ರಮಾಣ ಪತ್ರ ವಿತರಣೆಯಲ್ಲಿ ಬೋಗಸ್‌ ನಡೆಯುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೋರಾಟವೊಂದೇ ಪರಿಹಾರವಾಗಿದೆ. ಈ ಎಲ್ಲವುಗಳನ್ನು ಸರಿಪಡಿಸದಿದ್ದರೆ ಕಲ್ಯಾಣ ಕರ್ನಾಟಕ ಭಾಗದಾದ್ಯಂತ ಹೋರಾಟ ಕೈಗೊಳ್ಳಲು ಈಗಿನಿಂದಲೇ ಭೂಮಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

371 (ಜೆ) ವಿಧಿ ಜಾರಿಯಾಗಿ ಎಂಟು ವರ್ಷವಾದರೂ ಇನ್ನೂ ದೋಷ ದೂರವಾಗಿಲ್ಲ. ಪ್ರಮುಖವಾಗಿ ಮೀಸಲಾತಿ ಕಾರ್ಯಾನುಷ್ಠಾನಕ್ಕೆ ತರದೇ ಅನ್ಯಾಯ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಲ್ಲಿ ಮಾತ್ರ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದರು. ಕೇವಲ 371 (ಜೆ) ವಿಧಿ ಕಡೆ ಬೊಟ್ಟು ಮಾಡಿ ಒಂದೊಂದೇ ಯೋಜನೆಗಳನ್ನು ಈ ಭಾಗದಿಂದ ಕಿತ್ತುಕೊಳ್ಳಲಾಗುತ್ತಿದೆ. ಇದಕ್ಕೆ ಈ ಭಾಗದ ಜನಪ್ರತಿನಿಧಿಗಳಲ್ಲಿರುವ ಒಗ್ಗಟ್ಟಿನ ಕೊರತೆಯೇ ಕಾರಣವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರೈಲ್ವೆ ವಿಭಾಗೀಯ ಕಚೇರಿ ಕಾರ್ಯಾನುಷ್ಠಾನ ಗೊಳ್ಳುತ್ತಿಲ್ಲ. ರಾಯಚೂರಿಗೆ ಸಿಗಬೇಕಾದ ಐಐಟಿ ಧಾರವಾಡಕ್ಕೆ ಸ್ಥಳಾಂತರವಾಗಿದೆ. ಅದೇ ರೀತಿ ಏಮ್ಸ್‌ ಧಾರವಾಡದ ಪಾಲಾಗುತ್ತಿದೆ. ಮೆಘಾ ಟೆಕ್ಸಟೈಲ್‌ ಪಾರ್ಕ್‌ಗೆ ಮೂರು ಜಿಲ್ಲೆಗಳ ಹೆಸರನ್ನು ಪ್ರಸ್ತಾವನೆಗೆ ಕಳುಹಿಸಲಾಗಿದೆ. ಇದು ಕೂಡಾ ಕೈ ತಪ್ಪುವ ಆತಂಕ ಕಾಡಲಾರಂಭಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಫೆ. 10ರಂದು ಕಲಬುರಗಿಗೆ ಸಾರಿಗೆ ಸಚಿವ ಶ್ರೀ ರಾಮುಲು ನೇತೃತ್ವ ದ 371 (ಜೆ) ವಿಧಿ ಕಾರ್ಯಾನು ಷ್ಠಾನ ಸಮಿತಿ ಆಗಮಿಸುತ್ತಿದೆ. ಈ ಸಂದರ್ಭದಲ್ಲಿ 22 ಅಂಶಗಳ ಮನವಿ ಪತ್ರ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು. ಮುಖಂಡರಾದ ಮನೀಷ ಜಾಜು, ಲಿಂಗರಾಜ ಸಿರಗಾಪುರ, ಡಾ| ಎ.ಎಸ್‌. ಭದ್ರಶೆಟ್ಟಿ, ಶಿವಲಿಂಗಪ್ಪ ಬಂಡಕ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.