5 ಕೋಟಿ ರೂ. ವೆಚ್ಚದಲ್ಲಿ ವಾಡಿ ಅಭಿವೃದ್ದಿ

Team Udayavani, Dec 10, 2021, 10:55 AM IST

6waadi

ವಾಡಿ: ಪಟ್ಟಣದಲ್ಲಿ ಮಂಡಲ ಪಂಚಾಯತಿ ಆಡಳಿತ ಕೊನೆಗೊಂಡು ಪುರಸಭೆ ಆಡಳಿತ ಜಾರಿಯಾದ 20 ವರ್ಷಗಳ ನಂತರ ನಗರದ ಬಡಾವಣೆಗಳು ಮತ್ತು ಪ್ರಮುಖ ರಸ್ತೆಗಳು ಅಧಿಕೃತ ಬೀದಿ ದೀಪಗಳ ಬೆಳಕು ಕಾಣುವ ಭಾಗ್ಯ ಬಂದೊದಗಿದೆ.

ಪಟ್ಟಣಕ್ಕೆ ಅತ್ಯವಶ್ಯಕವಾಗಿ ಬೇಕಿರುವ ಬೀದಿದೀಪ ಹಾಗೂ ಪುಟ್‌ಪಾತ್‌ ವ್ಯವಸ್ಥೆಗಾಗಿ ವಿಶೇಷ ಅನುದಾನ ನೀಡುವಂತೆ ಕ್ಷೇತ್ರದ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ಪುರಸಭೆಯ ಕಾಂಗ್ರೆಸ್‌ ಆಡಳಿತ ಮಾಡಿಕೊಂಡ ಮನವಿಗೆ ಸ್ಪಂದನೆ ದೊರಕಿದ್ದು, ಪಿಡಬ್ಲುಡಿ ಇಲಾಖೆಯಿಂದ 4.85 ಕೋಟಿ ರೂ. ಮಂಜೂರಾಗಿದೆ. ಸದ್ಯ 2.35 ಕೋಟಿ ರೂ. ವೆಚ್ಚದಲ್ಲಿ ಸಂತ ಅಂಬ್ರೂಸ್‌ ಕಾನ್ವೆಂಟ್‌ ಶಾಲೆಯಿಂದ ಮುಖ್ಯ ರಸ್ತೆ ವರೆಗೆ, ರೈಲು ನಿಲ್ದಾಣದಿಂದ ಅಂಬೇಡ್ಕರ್‌ ವೃತ್ತ ಮತ್ತು ರೈಲ್ವೆ ಕಾಲೋನಿ ವರೆಗೆ, ಶಿವಾಜಿ ಚೌಕ್‌ದಿಂದ ಅಂಬೇಡ್ಕರ್‌ ವೃತ್ತ ಹಾಗೂ ವಾರ್ಡ್‌-20 ಬಿಯ್ನಾಬಾನಿ ಬಡಾವಣೆಯಲ್ಲಿ ಬೀದಿ ದೀಪಗಳ ಕಂಬ ಅಳವಡಿಕೆ ಕಾರ್ಯ ಸೇರಿದಂತೆ ಕುಂದನೂರು ಚೌಕ್‌ದಿಂದ ಚೌಡೇಶ್ವರ ಕಾಲೋನಿಯ ಸಾರ್ವಜನಿಕ ಶೌಚಾಲಯದ ವರೆಗೆ ಪುಟ್‌ಪಾತ್‌ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ಪಿಡಬ್ಲ್ಯುಡಿ ಇಲಾಖೆಯ ಇನ್ನುಳಿದ 2.50 ಕೋಟಿ ರೂ. ವೆಚ್ಚದಲ್ಲಿ ಬಳವಡಗಿ ಗ್ರಾಮದ ರಸ್ತೆಯಿಂದ ಶ್ರೀನಿವಾಸ ಗುಡಿ ವೃತ್ತದ ವರೆಗಿನ ನಗರದ ಪ್ರಮುಖ ರಸ್ತೆಯ ಅಗಲೀಕರಣ ಹಾಗೂ ಎರಡೂ ಬದಿಯಲ್ಲಿ ಪುಟ್‌ಪಾತ್‌ ನಿರ್ಮಾಣಕ್ಕೆ ಪುರಸಭೆ ಅಧಿ ಕಾರಿಗಳು ನೀಲನಕ್ಷೆ ಸಿದ್ಧಪಡಿಸಿದ್ದಾರೆ. ರಸ್ತೆ ಉದ್ದಕ್ಕೂ ಸಾಲಾಗಿ ವಿದ್ಯುತ್‌ ದೀಪ ಅಳವಡಿಸುವ ಮೂಲಕ ದ್ವಿಪಥ ರಸ್ತೆಯನ್ನಾಗಿ ಮಾರ್ಪಡಿಸಲಾಗುತ್ತಿದೆ.

ವಾಡಿ ನಗರದ ಸೌಂದರ್ಯ ಹೆಚ್ಚಿಸುವ ಈ ಮಹತ್ವದ ಕಾರ್ಯವನ್ನು ಶಾಸಕರ ಗಮನಕ್ಕೆ ತಂದು ಚಾಲನೆ ನೀಡಲಾಗುವುದು ಎಂದು ಪುರಸಭೆಯ ಗ್ರೇಡ್‌-1 ಮುಖ್ಯಾಧಿಕಾರಿ ಡಾ| ಚಿದಾನಂದಸ್ವಾಮಿ ಹಾಗೂ ಕಿರಿಯ ಅಭಿಯಂತರ ಅಶೋಕ ಪುಟ್‌ಪಾಕ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಕಾರ್ಮಿಕರು ಹೆಚ್ಚಿರುವ ವಾಡಿ ಪಟ್ಟಣದಲ್ಲಿ 23 ವಾರ್ಡ್‌ಗಳಿವೆ. ಕೆಲವು ರಸ್ತೆ ಮತ್ತು ಬಡಾವಣೆಗಳು ಉತ್ತಮ ಬೀದಿ ದೀಪದ ಬೆಳಕಿನ ಸೌಲಭ್ಯದಿಂದ ವಂಚಿತವಾಗಿದ್ದವು. ಜನರ ಬೇಡಿಕೆಗೆ ಸ್ಪಂದಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ. ಬೀದಿ ದೀಪ, ರಸ್ತೆ ಅಗಲೀಕರಣ ಮತ್ತು ಪುಟ್‌ಪಾತ್‌ ನಿರ್ಮಾಣಕ್ಕಾಗಿ ಶಾಸಕರು ಅನುದಾನ ನೀಡಿದ್ದರಿಂದ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿವೆ. ಡಿಸೆಂಬರ್‌ ಒಳಗಾಗಿ ಶಾಸಕ ಪ್ರಿಯಾಂಕ್‌ ಖರ್ಗೆ ಮುಖ್ಯ ರಸ್ತೆ ಅಗಲೀಕರಣ, ಪುಟ್‌ಪಾತ್‌ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಲಿದ್ದಾರೆ. ಝರೀನಾಬೇಗಂ. ಅಧ್ಯಕ್ಷ, ಪುರಸಭೆ

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.