ಹದಗೆಟ್ಟ ರಸ್ತೆ; ನಿತ್ಯವೂ ಅವಸ್ಥೆ

ಅಕ್ಕ ಪಕ್ಕ ಮುಳ್ಳು ಜಾಲಿ ಕಂಟಿಗಳು ಬೆಳೆದು ರಸ್ತೆ ಕಾಣದಂತಾಗಿದೆ.

Team Udayavani, Aug 3, 2021, 5:42 PM IST

Road

ಜೇವರ್ಗಿ: ತಾಲೂಕಿನ ಕೂಡಿ ದರ್ಗಾದಿಂದ ಕೋಬಾಳ ಗ್ರಾಮದ ವರೆಗಿನ ಮೂರು ಕಿ.ಮೀ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಮಹಿಳೆಯರು, ಮಕ್ಕಳು, ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಕಳೆದ 2009ರಲ್ಲಿ ಅಂದಿನ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರ ಅವ ಧಿಯಲ್ಲಿ ಕೋಬಾಳ ಗ್ರಾಮಕ್ಕೆ ತೆರಳುವ ಮೂರು ಕಿ.ಮೀ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಈ ರಸ್ತೆ ದುರಸ್ತಿಗೆ ಮುಂದಾಗದಿರುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಮಳೆಗಾಲದಲ್ಲಿ ಕೆಸರು ಗದ್ದೆಯಾಗಿ ಮಾರ್ಪಡುತ್ತಿದೆ. ದಶಕ ಕಳೆದರೂ ಈ ರಸ್ತೆ ದುರಸ್ತಿ ಕಾಣದೇ ಬರೀ ಗುಂಡಿಗಳೇ ರಾರಾಜಿಸುತ್ತಿವೆ. ಪರಿಣಾಮ ಕೂಡಿ ದರ್ಗಾ-ಕೋಬಾಳ ನಡುವಿನ ರಸ್ತೆಯಲ್ಲಿ ನಿತ್ಯವೂ ಬೈಕ್‌ ಸವಾರರು ಸರ್ಕಸ್‌ ಮಾಡಿ ಊರು ಸೇರಬೇಕಾದ ಅನಿವಾರ್ಯತೆ ಎದುರಾಗಿದೆ. ಈ ರಸ್ತೆ ಮೂಲಕ ಸರ್ಕಾರಿ ಬಸ್‌ಗಳಾಗಲಿ, ಖಾಸಗಿ ವಾಹನಗಳಾಗಲಿ ಕೋಬಾಳ ಗ್ರಾಮಕ್ಕೆ ತೆರಳುತ್ತಿಲ್ಲ. ಇದರಿಂದ ಶಾಲಾ-ಕಾಲೇಜು ಮಕ್ಕಳು, ರೈತರು, ಮಹಿಳೆಯರು, ವೃದ್ಧರು ಮೂರು ಕಿ.ಮೀ ದರ್ಗಾವರೆಗೆ ನಡೆದುಕೊಂಡೇ ಬರುವ ಸ್ಥಿತಿ ಉದ್ಬವಿಸಿದೆ.

ಕಳೆದ 12 ವರ್ಷಗಳಿಂದ ಕೋಬಾಳ ಗ್ರಾಮಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿದ್ದರೂ ಕನಿಷ್ಟ ಪಕ್ಷ ತೇಪೆ ಹಚ್ಚುವ ಕೆಲಸ ಮಾತ್ರ ಯಾರೂ ಮಾಡುತ್ತಿಲ್ಲ. ರಸ್ತೆಯ ಮಧ್ಯೆ ದೊಡ್ಡ ದೊಡ್ಡ ತಗ್ಗು ಗುಂಡಿಗಳು ಬಿದ್ದಿದ್ದು, ಅಕ್ಕ ಪಕ್ಕ ಮುಳ್ಳು ಜಾಲಿ ಕಂಟಿಗಳು ಬೆಳೆದು ರಸ್ತೆ ಕಾಣದಂತಾಗಿದೆ. ಇಷ್ಟಾದರೂ ಜಿಪಂ ಇಲಾಖೆಯ ಅ ಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಹತ್ತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಕಳೆದ ತಿಂಗಳಲ್ಲಿ ಕೂಡಿ ದರ್ಗಾ ಹತ್ತಿರದ ಕೋನಾಹಿಪ್ಪರಗಾ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದ ಶಾಸಕ ಡಾ| ಅಜಯಸಿಂಗ್‌ ಅವರಿಗೆ ಕೋಬಾಳ ಗ್ರಾಮಸ್ಥರು ತಮ್ಮೂರಿಗೆ ಶಾಸಕರನ್ನು ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಂಡು, ಭೀಮಾ ಪ್ರವಾಹದಿಂದ ಸಂಪೂರ್ಣ ನಲುಗಿ ಹೋಗಿದ್ದ ಈ ಗ್ರಾಮಸ್ಥರು ರಸ್ತೆ ನಿರ್ಮಾಣ ಸೇರಿದಂತೆ ಹತ್ತು ಹಲವು ಬೇಡಿಕೆಗಳ ಪಟ್ಟಿ ಶಾಸಕರಿಗೆ ಸಲ್ಲಿಸಿದ್ದರು. ಗ್ರಾಮ ವಾಸ್ತವ್ಯ ಮುಗಿದ ನಂತರ ಅಧಿಕಾರಿಗಳಾಗಲಿ, ಜನಪ್ರತಿನಿ ಧಿಗಳಾಗಲಿ ಈ ಗ್ರಾಮದ ಕಡೆ ಇಣುಕಿ ಕೂಡ ನೋಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಕೋಬಾಳ ಗ್ರಾಮದ ರಸ್ತೆ ದುರಸ್ತಿಗೆ ಮುಂದಾಗದಿದ್ದಲ್ಲಿ ಬರುವ ಕೆಲವೇ ದಿನಗಳಲ್ಲಿ ತಹಶೀಲ್‌ ಕಚೇರಿ ಎದುರು ಹೋರಾಟ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ದೊಡ್ಡಪ್ಪಗೌಡ ಪಾಟೀಲ ನರಿಬೋಳ ಶಾಸಕರಾಗಿದ್ದ ಸಂದರ್ಭದಲ್ಲಿ ಈ ಗ್ರಾಮದ ರಸ್ತೆ ನಿರ್ಮಾಣ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಈ ರಸ್ತೆ ರಿಪೇರಿಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ರಸ್ತೆ ತುಂಬಾ ತಗ್ಗು ಗುಂಡಿಗಳು ಬಿದ್ದು ಸವಾರರು ಪರದಾಡುವಂತಾಗಿದೆ. ಈ ಭಾಗದ ಜನಪ್ರತಿನಿ ಧಿಗಳು ಕೂಡಲೇ ಹದಗೆಟ್ಟಿರುವ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೇ ಮುಂಬರುವ ಜಿಪಂ-ತಾಪಂ ಚುನಾವಣೆ ಬಹಿಷ್ಕರಿಸಬೇಕಾಗುತ್ತದೆ.
ಮಹಿಮೂದ್‌ ಪಟೇಲ ಕೋಬಾಳ ಗ್ರಾಮಸ್ಥ

*ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.