ರಿಂಗರೋಡ್‌ ಭೂಸ್ವಾಧೀನಕ್ಕೆ ಕ್ರಮ: ನಿತೀನ್‌ ಗಡ್ಕರಿ

Team Udayavani, Apr 26, 2022, 11:05 AM IST

3ring-road

ಕಲಬುರಗಿ: ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಮಹಾನಗರದ ನಗರದ ಔಟರ್‌ ರಿಂಗ್‌ರೋಡ್‌ (ಬೈಪಾಸ್‌) ನಿರ್ಮಿಸಲು ಒಪ್ಪಿಗೆ ನೀಡಿ, ಆದಷ್ಟು ಬೇಗಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್‌ ಗಡ್ಕರಿ ತಿಳಿಸಿದರು.

ದೆಹಲಿಗೆ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜತೆಗೆ ಮಾತನಾಡಿದ ಅವರು, ಈಗಾಗಲೇ ಬೈಪಾಸ್‌ ರಸ್ತೆ ನಿರ್ಮಿಸುವ ಪ್ರಸ್ತಾವನೆ ಬಂದಿದೆ. ಅದಕ್ಕೆ ಅನುಮೋದನೆ ನೀಡಿ, ಅಗತ್ಯವಿರುವ ಭೂಸ್ವಾಧೀನ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಮುಂಚೆ ಔಟರ್‌ ರಿಂಗ್‌ರೋಡ್‌ ನಿರ್ಮಿಸಲು ಉದ್ದೇಶಿಸಿದಾಗ ಅದರ ಮೊತ್ತ ಕಡಿಮೆಯಿತ್ತು. ನಂತರ ಅದು 1182 ಕೋಟಿ ರೂ.ಗಳಾಗಿತ್ತು. ಈಗ ಅದರ ಮೊತ್ತ ಹೆಚ್ಚಳವಾಗಿ 1782 ಕೋಟಿ ರೂ.ಗೆ ಏರಿಕೆಯಾಗಿದೆ. ಒಟ್ಟಾರೆ ಮುಂದಿನ ದಿನ ಕಾಲಹರಣ ಮಾಡದೇ ಅನುಮೋದನೆ ನೀಡಲಾಗುವುದು ಎಂದು ಸ್ಪಷ್ಟ ಭರವಸೆ ನೀಡಿದರು.

ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಲ್ಲಿಸುವ ಯೋಜನೆಗಳಿಗೆ ಅನುಮೋದನೆ ನೀಡಲಿದೆ ಎಂದು ಪುನರುಚ್ಚರಿಸಿದ ಸಚಿವ ಗಡ್ಕರಿ, ರಾಜ್ಯಕ್ಕೆ ಇನ್ನಷ್ಟು ಹೊಸ ರಾಷ್ಟ್ರೀಯ ಹೆದ್ದಾರಿಗಳನ್ನು ಮಂಜೂರು ಮಾಡುವ ಭರವಸೆ ನೀಡಿದರು.

ಕೇಂದ್ರ ಸಚಿವ ನಿತೀನ್‌ ಗಡ್ಕರಿ ಏರ್‌ಪೋರ್ಟ್‌ಗೆ ಬರುತ್ತಲೇ ಅವರನ್ನು ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ದೇವಲ ಗಾಣಗಾಪುರದ ಶ್ರೀ ದತ್ತಾತ್ರೇಯನ ಪುತ್ಥಳಿ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ ಬಸವೇಶ್ವರ ಭಾವಚಿತ್ರ ನೀಡಿ ಸ್ವಾಗತಿಸಿದರು.

ಪ್ರಥಮ ದರ್ಜೆ ಗುತ್ತಿಗೆದಾರ ಗುರುನಾಥ ಕೊಳ್ಳೂರು, ಡಿಸಿಪಿ ಅಡ್ಮೂರು ಶ್ರೀನಿವಾಸಲು ಮುಂತಾದವರಿದ್ದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ನರಿಬೋಳ-ಚಾಮನಾಳ ನಡುವಿನ ಸೇತುವೆ ನಿರ್ಮಾಣದ ಬಾಕಿ ಮೊತ್ತ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.