ಲೌಕ್‌ಡೌನ್‌-ಸೀಲ್‌ಡೌನ್‌ಗೆ ತತ್ತರಿಸಿದ ಜನ

Team Udayavani, Apr 25, 2020, 10:38 AM IST

25-April-01

ಆಳಂದ: ವಾರ್ಡ್‌ 8ರಸ್ತೆಯನ್ನು ಸೀಲ್‌ಡೌನ್‌ಗೆ ಒಳಪಡಿಸಿ ತಗಡಿನಿಂದ ಮುಚ್ಚಲಾಗಿದೆ.

ಆಳಂದ: ಪಟ್ಟಣದ ಶರಣನಗರ ಬಡಾವಣೆಯ ಹತ್ತಿರದ ಮನೆಯೊಂದರ 57 ವರ್ಷದ ವ್ಯಕ್ತಿಯೋರ್ವನಿಗೆ ಕೋವಿಡ್ ಸೋಂಕು ತಗುಲಿದ ಕುರಿತು ಜಿಲ್ಲಾಡಳಿತ ದೃಢಪಡಿಸಿದೆ. ಈ ಹಿನ್ನೆಲೆಯಲ್ಲಿ ಮೂರು ವಾರ್ಡ್‌ಗಳಿಗೆ ಬರುವ ಎಲ್ಲ ಭಾಗದ ಎಂಟು ರಸ್ತೆಗಳನ್ನು ತಾಲೂಕು ಆಡಳಿತ ಕೈಗೊಂಡ ಸೀಲ್‌ಡೌನ್‌ ಗೆ ಜನ ತತ್ತರಿಸಿ ಹೋಗಿದ್ದಾರೆ. ಸೋಂಕಿತನಿಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಸುಮಾರು ದಿನಗಳಿಂದಲೂ ಮನೆಯಲ್ಲೇ ಅನಾರೋಗ್ಯದಿಂದ ಬಳಲುತ್ತಿದ ವ್ಯಕ್ತಿ ಹೊರಗೇನು ಓಡಾಡಿಲ್ಲ. ಆದರೂ ಹೇಗೆ ಸೋಂಕು ತಗಲಿದೆ ಎಂದು ಪತ್ತೆ ಹಚ್ಚುವಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಹೆಣಗಾಡುವಂತೆ ಮಾಡಿದೆ.

ಈ ಮೊದಲು ಸೊಲ್ಲಾಪುರ ಮತ್ತು ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಅಲ್ಲದೆ, ಸ್ಥಳೀಯ ಖಾಸಗಿ ವೈದ್ಯರು ಮನೆಗೆ ಬಂದು ತಪಾಸಣೆ ಕೈಗೊಂಡಿದ್ದು, ಸಾಲದಕ್ಕೆ ಸಾರ್ವಜನಿಕ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗಿದ್ದು, ಹೀಗಾಗಿ ಯಾವ ಸ್ಥಳದಲ್ಲಿ ಯಾರಿಂದ ಸೋಂಕು ಬಾಧಿಸಿದೆ ಎಂಬುದು ನಿಗೂಢವಾಗಿರುವುದು ಪತ್ತೆ ಹಚ್ಚುವಲ್ಲಿ ಅ ಧಿಕಾರಿಗಳಿಗೆ ಆತಂಕ ಮೂಡಿಸಿದೆ.

ಆತಂಕದಲ್ಲಿ ಜನರು: ಈ ಮೊದಲೇ ಕಳೆದ ಒಂದೂವರೆ ತಿಂಗಳಿಂದ ವಿಧಿ ಸಿದ ಲಾಕ್‌ ಡೌನ್‌ನಿಂದಾಗಿ ಜನ ಸಾಮಾನ್ಯರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಲಾಕ್‌ಡೌನ್‌ ತೆರವುಗೊಳ್ಳಬಹುದು ಎಂದು ನಿರೀಕ್ಷೆಯ ನಡುವೆ ವಾರ್ಡ್‌ 7ರಲ್ಲಿ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಇಡೀ ಬಡಾವಣೆಗಳೆಲ್ಲ ಸೀಲ್‌ಡೌನ್‌ ಆಗಿರುವುದು ಪಟ್ಟಣ ಸೇರಿ ಗ್ರಾಮೀಣ ಭಾಗದ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.

ಇಲ್ಲಿನ 4423 ಜನರನ್ನು ಹೋಂ ಕ್ವಾರಂಟೈನ್‌ ಇಡಲಾಗಿದೆ. ಪ್ರತಿದಿನ ಆರೋಗ್ಯ ಇಲಾಖೆಯ ಕಿರಿಯ ಆರೋಗ್ಯ ಸಹಾಯಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ನಿತ್ಯ ಭೇಟಿ ನೀಡಿ ಇಲ್ಲಿನವರ ಆರೋಗ್ಯದ ಏರುಪೇರು ಗಮನಿಸಿ ನಿಗಾ ಇಡುತ್ತಿದ್ದಾರೆ. ಆರೋಗ್ಯದಲ್ಲಿ ಬದಲಾವಣೆ ಕಂಡುಬಂದಲ್ಲಿ ಇಎಸ್‌ಐ ಆಸ್ಪತ್ರೆಗೆ ಕಳುಹಿಸಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಂಕಿತನಿಗೆ ಪ್ರಥಮ ಸಂಪರ್ಕಕ್ಕೆ ಬಂದ 56 ಜನರ ಪೈಕಿ ಖಾಸಗಿ ಹಾಗೂ ಸರ್ಕಾರಿ ವೈದ್ಯರು, ನರ್ಸ್‌ ಒಳಗೊಂಡು 50 ಜನರನ್ನು ಈಗಾಗಲೇ ಕಲಬುರಗಿ ಇಎಸ್‌ಐ ಆಸ್ಪತ್ರೆಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ದಾಖಲಿಸಲಾಗಿದೆ.

ಪ್ರಥಮ ಸಂಪರ್ಕಕ್ಕೆ ಬಂದ ಇನ್ನೂ ಆರು ಜನರನ್ನು ಪತ್ತೆ ಹಚ್ಚುವಲ್ಲಿ ಆರೋಗ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ. ಸೋಂಕಿತನ ಮನೆಯ ಎಂಟು ಜನರು ಸೇರಿ ಬಂಧು ಬಾಂಧವರು ಹೀಗೆ ದ್ವಿತೀಯ ಸಂಪರ್ಕಕ್ಕೆ ಬಂದ ಒಟ್ಟು 192 ಎಂದು ಪ್ರಾಥಮಿಕವಾಗಿ ಜನರಿದ್ದಾರೆ ಎಂದು ಅಂದಾಜಿಸಲಾಗಿದೆ. ಇನ್ನೂ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಡಾ| ಜಿ. ಅಭಯಕುಮಾರ ,
ತಾಲೂಕು ಆರೋಗ್ಯಾಧಿಕಾರಿ

ಪಟ್ಟಣದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಅಗತ್ಯವಾಗಿದೆ. ಇದಕ್ಕೆ ನಾಗರಿಕರು ಸಹಕರಿಸಬೇಕು. ಜನರು ಪರಸ್ಪರ ಸಂಪರ್ಕಕ್ಕೆ ಬಾರದಂತೆ ನೋಡಿಕೊಂಡರೆ ಸೋಂಕು ನಿರ್ಮೂಲನೆ ಆಗಲಿದೆ.
ದಯಾನಂದ ಪಾಟೀಲ,
ತಹಶೀಲ್ದಾರ್‌.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.