ಅಂಬೇಡ್ಕರ್‌ ಓಡಾಡಿದ ನೆಲದಲ್ಲಿ ಅದ್ದೂರಿ ಜಯಂತಿ

Team Udayavani, Apr 26, 2022, 11:35 AM IST

5ambedkar

ವಾಡಿ: ಡಾ| ಬಿ.ಆರ್‌.ಅಂಬೇಡ್ಕರ್‌ ನಡೆದಾಡಿದ ಪಟ್ಟಣದಲ್ಲಿ 131ನೇ ಜಯಂತಿ ಆಚರಣೆಗೆ ಅದ್ಧೂರಿ ಸಿದ್ಧತೆ ನಡೆದಿದ್ದು, ಏ.27ರಂದು ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್‌ ವೃತ್ತದಲ್ಲಿ ಬಹಿರಂಗ ಸಭೆ ಹಾಗೂ ಏ. 28ರಂದು ದಿನವಿಡಿ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗಿದೆ ಎಂದು ಬೌದ್ಧ ಸಮಾಜದ ಕಾರ್ಯಾಧ್ಯಕ್ಷ ಇಂದ್ರಜೀತ್‌ ಸಿಂಗೆ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಬಾಸಾಹೇಬ ಅಂಬೇಡ್ಕರ್‌ ಸ್ವಾತಂತ್ರ್ಯ ಪೂರ್ವದಲ್ಲಿ ರೈಲಿನ ಮೂಲಕ ಹೈದ್ರಾಬಾದ್‌ಗೆ ಹೋಗುತ್ತಿದ್ದ ಸಂದರ್ಭದಲ್ಲಿ ವಾಡಿ ನಿಲ್ದಾಣದಲ್ಲೇ ಎಂಜಿನ್‌ ಬದಲಿಸುತ್ತಿತ್ತು. ನಿಲ್ದಾಣದಲ್ಲಿ ಸಮಯ ವ್ಯರ್ಥ ಮಾಡುವ ಬದಲು ಅಂದಿನ ಸ್ಥಳೀಯ ದಲಿತ ನಾಯಕರ ಮನವಿ ಮೇರೆಗೆ ವಾಡಿ ನಗರದೊಳಗೆ ಬಂದು ದಲಿತರ ಸ್ಥಿತಿಗತಿ ವಿಚಾರಿಸಿ ಹೋಗಿದ್ದರು ಅಂಬೇಡ್ಕರ್‌. ಪರಿಣಾಮ ವಾಡಿ ನಗರದ ದಲಿತರ ಪಾಲಿಗೆ ಏ.27 ಸ್ಫೂರ್ತಿಯ ದಿನವಾಗಿದೆ. ಆದ್ದರಿಂದ ಅಂಬೇಡ್ಕರ್‌ ಜೀವಿತಾವಧಿಯಿಂದಲೇ ವಾಡಿಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ವಿವರಿಸಿದರು.

ಬಹಿರಂಗ ಸಭೆಯಲ್ಲಿ ಬೌದ್ಧ ಭಿಕ್ಷು ಧಮ್ಮಾನಂದ ಥೇರೋ ಅಣದೂರ, ಭಂತೆ ಸಾಕು, ಬೋಧಿ ಧಮ್ಮ ಜಪಾನ್‌, ಭಂತೆ ಜ್ಞಾನಸಾಗರ, ಭಂತೆ ಸಂಘಾನಂದ ಸಾನ್ನಿಧ್ಯ ವಹಿಸುವರು. ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಉದ್ಘಾಟಿಸುವರು. ವಿಚಾರವಾದಿ ಡಾ| ಸಿ.ಎಸ್‌.ದ್ವಾರಕನಾಥ ಉಪನ್ಯಾಸ ನೀಡುವರು. ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ಅಧ್ಯಕ್ಷತೆ ವಹಿಸುವರು. ಅಂದು ಸಂಜೆ 6 ಗಂಟೆಗೆ ವಿವಿಧ ಬಡಾವಣೆಗಳಿಂದ ಸ್ತಬ್ಧಚಿತ್ರಗಳ ಆಗಮನ, ಅಶೋಕ ಚಕ್ರ ಮೆರವಣಿಗೆ, ಸಂಜೆ ಭೀಮ ಗೀತೆಗಳ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಏ.28 ರಂದು ಬೆಳಗ್ಗೆ 10:30ಕ್ಕೆ ಆರಂಭಗೊಳ್ಳುವ ಅಂಬೇಡ್ಕರ್‌ ಭಾವಚಿತ್ರದ ಮೆರವಣಿಗೆಗೆ ಪಿಎಸ್‌ಐ ಮಹಾಂತೇಶ ಜಿ. ಪಾಟೀಲ ಚಾಲನೆ ನೀಡುವರು ಎಂದರು.

ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ, ಪ್ರಧಾನ ಕಾರ್ಯದರ್ಶಿ ದೇವಿಂದ್ರ ನಿಂಬರ್ಗಾ, ಖಜಾಂಚಿ ಚಂದ್ರಸೇನ ಮೇನಗಾರ, ಸಹ ಕಾರ್ಯದರ್ಶಿ ಶರಣಬಸು ಸಿರೂರಕರ, ವಿಜಯಕುಮಾರ ಸಿಂಗೆ ಹಾಜರಿದ್ದರು.

ಭಾರತ ರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಸ್ವಾತಂತ್ರ್ಯ ಪೂರ್ವದಲ್ಲಿ ವಾಡಿ ನಗರಕ್ಕೆ ಭೇಟಿ ನೀಡಿದ್ದು ಆಕಸ್ಮಿಕವಾಗಿದ್ದರೂ, ಸ್ಮರಣೀಯ ದಿನವಾಗಿದೆ. ದಲಿತ ಸಮುದಾಯ ಮೇಲೆತ್ತಲು ಮೀಸಲಾತಿ ಹಕ್ಕು ಒದಗಿಸಿದ್ದಾರೆ. ಈ ಕುರಿತು ದಲಿತರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಲು ಅವರು ನಗರಕ್ಕೆ ಬಂದ ದಿನದಂದೇ 131ನೇ ಜಯಂತಿ ಆಚರಿಸಲಾಗುತ್ತಿದೆ. -ಟೋಪಣ್ಣ ಕೋಮಟೆ ಅಧ್ಯಕ್ಷ, ಬೌದ್ಧ ಸಮಾಜ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.