ಪಕ್ಷ ವಿರೋಧಿ ಚಟುವಟಿಕೆ ವರಿಷ್ಠರ ಗಮನಕ್ಕೆ

Team Udayavani, Dec 18, 2021, 1:13 PM IST

14meeting

ಅಫಜಲಪುರ: ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಮಕ್ಬೂಲ್‌ ಪಟೇಲ್‌ ಶಾಸಕ ಎಂ.ವೈ. ಪಾಟೀಲ ವಿರುದ್ಧ ಮಾಡಿರುವ ಆರೋಪ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಲ್ಲಿ ಬೇಸರ ತಂದಿದೆ ಎಂದು ಮಾಜಿ ಜಿಪಂ ಸದಸ್ಯ ಪ್ರಕಾಶ ಜಮಾದಾರ ಹೇಳಿದರು.

ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಮಕೂºಲ್‌ ಪಟೇಲ್‌ ಅವರು ಕಾಂಗ್ರೆಸ್‌ ಪಕ್ಷದ ಕುರಿತಾಗಿ ಶಾಸಕರ ವಿರುದ್ಧ ಪದೇ ಪದೇ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ನಿರ್ಮಾಣವಾಗುತ್ತಿದೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ ಶಾಸಕರ ಸಂಘಟನೆಯ ಕೊರತೆಯಿಂದ ತಾಲೂಕಿನಿಂದ ಕಾಂಗ್ರೆಸ್‌ಗೆ ಕಡಿಮೆ ಮತಗಳು ಬಂದಿವೆ ಎಂದು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ತಾಲೂಕಿನಲ್ಲಿ ಎಂ.ವೈ.ಪಾಟೀಲರು ಪಟೇಲರನ್ನು ಒಳಗೊಂಡು ಎಲ್ಲ ಮುಖಂಡರನ್ನು ಒಗ್ಗೂಡಿಸಿಕೊಂಡು ಚುನಾವಣೆ ಎದುರಿಸಿದ್ದಾರೆ. ಆದರೂ ಪಟೇಲರು ಈ ರೀತಿಯ ಹೇಳಿಕೆ ನೀಡಿದ್ದು ಅವರ ವ್ಯಕ್ತಿತ್ವಕ್ಕೆ ತಕ್ಕುದ್ದಲ್ಲ ಎಂದರು.

ಜಿ.ಪಂ ಮಾಜಿ ಸದಸ್ಯ ಮತೀನ್‌ ಪಟೇಲ ಹಾಗೂ ಸಿದ್ದಾರ್ಥ ಬಸರಿಗಿಡ ಮಾತನಾಡಿ ಶಾಸಕ ಎಂ.ವೈ.ಪಾಟೀಲ ಅವರನ್ನು ತಾಲೂಕಿನ ಎಲ್ಲ ವರ್ಗದ ಜನತೆ ಗೌರವದಿಂದ ಕಾಣುತ್ತಾರೆ. ಶಾಸಕರು ತಮ್ಮ ಅಧಿಕಾರವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಆಡಳಿತ ಮಾಡಿದ್ದಾರೆ. ಆದರೆ ಮಕ್ಬೂಲ್‌ ಪಟೇಲ್‌ ಅವರು ತಾಲೂಕಿನಲ್ಲಿ ಬರೀ ಶಾಸಕರ ಹಿಂಬಾಲಕರದ್ದೇ ಹೆಚ್ಚು ಮಾತು ನಡೆಯುತ್ತದೆ ಎಂದು ಹೇಳಿದ್ದು ಸರಿಯಲ್ಲ. ಇದನ್ನು ಸಾಬೀತು ಪಡಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದರು.

ತಾಪಂ ಉಪಾಧ್ಯಕ್ಷ ಶಿವಾನಂದ ಗಾಡಿಸಾಹೂಕಾರ, ಪ್ರಧಾನ ಕಾರ್ಯಧರ್ಶಿ ಶರಣು ಕುಂಬಾರ ಮಾತನಾಡಿ, ಮಕ್ಬೂಲ್‌ ಪಟೇಲರ ಹೇಳಿಕೆಯಿಂದ ಲಿಂಗಾಯತ ಸಮುದಾಯ ಹಾಗೂ ಅಭಿಮಾನಿಗಳಿಗೆ ನೋವುಂಟಾಗಿದೆ. ಈ ಕುರಿತು ಪಕ್ಷದ ವರಿಷ್ಠರಾದ ಡಾ| ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಮುಖಂಡರಾದ ರಾಜು ಪಾಟೀಲ, ಮಹಾನಿಂಗ ಅಂಗಡಿ, ಇರ್ಫಾನ್‌ ಜಮಾದಾರ, ಹಾಜಿ, ನಾನಾಗೌಡ ಪಾಟೀಲ, ಅಂಬರೀಶ ಬುರಲಿ, ರವಿ ನಂದಶೆಟ್ಟಿ, ಗೌತಮ ಸಕ್ಕರಗಿ ಇದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.