ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Team Udayavani, May 17, 2022, 1:13 PM IST

9report

ಚಿಂಚೋಳಿ: ರಾಜ್ಯದಲ್ಲಿ ಮಾದಿಗ ಸಮಾಜದವರು ಹೆಚ್ಚಿಗೆ ಇದ್ದು, ಜನಸಂಖ್ಯೆಗೆ ಅನುಗುಣವಾಗಿ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾ ಗುವುದು ಎಂದು ಶಾಸಕ ಡಾ| ಅವಿನಾಶ ಜಾಧವ ಭರವಸೆ ನೀಡಿದರು.

ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿ ಡಾ| ಬಾಬುಜಗಜೀವನರಾಮ 115ನೇ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಾಜೂಜಿಯವರು ದೇಶದ ರಕ್ಷಣಾ ಮಂತ್ರಿ, ಕಾರ್ಮಿಕ, ಸಾಮಾಜಿಕ ಸಚಿವರಾಗಿ ದೇಶಕ್ಕೆ ಮಾದರಿ ರಾಜಕಾರಣಿಯಾಗಿ ದುಡಿದಿದ್ದಾರೆ. ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅವರು ಶಿರಾ, ಜಮಖಂಡಿ, ಹಾನಗಲ್‌ ಉಪ ಚುನಾವಣೆಯಲ್ಲಿ ನ್ಯಾ| ಸದಾಶಿವ ಆಯೋಗ ಜಾರಿಗೊಳಿಸಿ ಮಾದಿಗ ಸಮಾಜಕ್ಕೆ ಮೀಸಲಾತಿ ನೀಡಲಾಗುವುದು ಎಂದು ನೀಡಿದ ಭರವಸೆ ನೀಡಿದ್ದಾರೆ. ಈ ಕುರಿತು ಎಲ್ಲರೂ ಅವರನ್ನು ಭೇಟಿ ಮಾಡಿ ಪ್ರಸ್ತಾಪಿಸೋಣ ಎಂದರು.

ಪಟ್ಟಣದಲ್ಲಿ ಡಾ| ಬಾಬೂಜಿ ಭವನ ಮಂಜೂರು ಮಾಡಲಾಗುವುದು. ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯಕೊಡಿಸುವ ಪ್ರಯತ್ನ ಮಾಡಿದ್ದೇನೆ. ಮಾದಿಗ ಸಮಾಜ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಮುಂದುವರಿಯಬೇಕಿದೆ. ಸಮಾಜಕ್ಕೆ ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುತ್ತೇನೆ ಎಂದು ಹೇಳಿದರು.

ಮುಖಂಡ ಗೋಪಾಲರಾವ್‌ ಕಟ್ಟಿಮನಿ ಮಾತನಾಡಿದರು. ಕಾಂಗ್ರೆಸ್‌ ಮುಖಂಡ ಸುಭಾಷ ರಾಠೊಡ, ಸಂಜೀವನ್‌ ಯಾಕಾಪುರ, ನಿವೃತ್ತ ನ್ಯಾಯಾ ಧೀಶ ಜಿ.ಕೆ.ಗೋಖಲೆ, ನಾಗುಕಟ್ಟಿ, ಅವಿರೋಧ ಕಟ್ಟಿಮನಿ, ಪ್ರದೀಪ ಮೇತ್ರಿ, ಜಗನ್ನಾಥ ಕಟ್ಟಿ, ಮಂಜುನಾಥ ಕೊರವಿ, ನಾಗಪ್ಪ ಕಲಬಾವಿ, ಬಕ್ಕಪ್ಪ ಕಟ್ಟಿ, ಪುರಸಭೆ ಅಧ್ಯಕ್ಷೆ ಜಗದೇವಿ ಗಡಂತಿ, ಉಪಾಧ್ಯಕ್ಷ ಶಬ್ಬಿರ್‌ ಅಹೆಮದ್‌, ನರಸಪ್ಪ ಕಿವಣೊರ, ಶರಣು ಮೋತಕಪಳ್ಳಿ, ಪ್ರವೀಣ, ಪ್ರಸಾದ, ಅಶ್ವತ್ಥ, ಆಕಾಶ ಕೊಳ್ಳುರ, ಮಲ್ಲುಕೊಡಂಬಲ, ಮಹೇಂದ್ರ ಸೇರಿಕಾರ, ಮುತ್ತುರಾಜ, ಸುನೀಲ್‌ ದೊಡ್ಡಮನಿ, ನಾಗೇಶ ಕಿವಣೊರ ಇತರರು ಭಾಗವಹಿಸಿದ್ದರು. ಕುಪೇದ್ರ ಸ್ವಾಗತಿಸಿದರು, ರಾಧಾಕೃಷ್ಣ ಕಟ್ಟಿ ನಿರೂಪಿಸಿದರು, ನಾಗಾರ್ಜುನ ಕಟ್ಟಿ ವಂದಿಸಿದರು. ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್‌ ಚೌಕ್‌ ವರೆಗೆ ಡಾ| ಬಾಬು ಜಗಜೀವನರಾಮ ಭಾವಚಿತ್ರದ ಅದ್ಧೂರಿ ಮೆರವಣಿಗೆ ಮಾಡಲಾಯಿತು.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.