ಸನ್ನತಿ ಕೇಂದ್ರದ ಗಮನ ಸೆಳೆವೆ: ಡಾ| ಜಾಧವ

Team Udayavani, Dec 20, 2021, 10:39 AM IST

6jadava

ವಾಡಿ: ಬೌದ್ಧ ಧರ್ಮದ ಇತಿಹಾಸ ತಿಳಿಯುವ ಸಂಶೋಧನೆಗೆ ಪೂರಕವಾಗಿರುವ ಸನ್ನತಿ ತಾಣದ ಅಭಿವೃದ್ಧಿಗೆ ಪುರಾತತ್ವ ಇಲಾಖೆ ಅಧಿಕಾರಿಗಳ ವರದಿ ಪಡೆದು ದೆಹಲಿಗೆ ನಿಯೋಗ ತೆರಳಿ ಕೇಂದ್ರದ ಗಮನ ಸೆಳೆಯಲಾಗುವುದು ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.

ಸನ್ನತಿ ಪ್ರದೇಶದ ಕನಗನಹಳ್ಳಿ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವಿಶಾಲವಾದ ಬಯಲು ಪ್ರದೇಶದಲ್ಲಿ ಹರಡಿಕೊಂಡಿದ್ದ ಬುದ್ಧನ ಶಿಲಾ ಮೂರ್ತಿಗಳು, ಬುದ್ಧ ವಿಹಾರ, ಶಿಲಾ ಶಾಸನ, ಬುದ್ಧನ ಜಾಥಕ ಕಥೆಯುಳ್ಳ ಕಲಾಕೃತಿಗಳನ್ನು ಕಂಡು ಮರುಗಿದರು. ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ದೇಶದ ಬಹುದೊಡ್ಡ ಬೌದ್ಧ ಪ್ರವಾಸಿ ತಾಣವಾಗಿರುವ ಸನ್ನತಿ ಪ್ರದೇಶ ಇಷ್ಟೊತ್ತಿಗೆ ಪ್ರಪಂಚದ ಗಮನ ಸೆಳೆಯಬೇಕಿತ್ತು. ಇಲ್ಲಿನ ವಾಸ್ತವ ಸ್ಥಿತಿಗತಿ ನೋಡಿದರೆ ನೋವಾಗುತ್ತದೆ. ಮೌರ್ಯ ಸಾಮ್ರಾಜ್ಯದ ದೊರೆ, ಬೌದ್ಧ ಅನುಯಾಯಿ ಸಾಮ್ರಾಟ್‌ ಅಶೋಕ ಚಕ್ರವರ್ತಿ ಕಾಲಘಟ್ಟವನ್ನು ನೆನಪಿಸುವ ಕ್ರಿ.ಪೂ 3ನೇ ಶತಮಾನಕ್ಕೆ ಸೇರಿದ ಬೌದ್ಧ ಸ್ತೂಪ ನೆಲೆ ಕಲಬುರಗಿಯ ಸನ್ನತಿಯಲ್ಲಿದೆ ಎಂಬುದು ನನಗೆ ಗೊತ್ತಿರಲಿಲ್ಲ. ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಒಮ್ಮೆಯೂ ಈ ಕುರಿತು ಪ್ರಾಸ್ತಾಪಿಸಿಲ್ಲ. ಖುದ್ದಾಗಿ ಸ್ಥಳ ವೀಕ್ಷಿಸಿದ ನಂತರವೇ ಪ್ರದೇಶದ ಮಹತ್ವ ತಿಳಿಯಿತು ಎಂದರು.

ಬೌದ್ಧರ ಸಾಂಸ್ಕೃತಿಕ ಪರಂಪರೆ ಎತ್ತಿಹಿಡಿಯುವ ಸನ್ನತಿ ಪ್ರಗತಿ ಅತ್ಯವಶ್ಯಕವಾಗಿದೆ. ಎರಡು ಸಾವಿರ ವರ್ಷಗಳಷ್ಟು ಹಳೆಯ ಪಳೆಯುಳಿಕೆಗಳು ಇಲ್ಲಿ ದೊರೆತಿರುವುದು ಹೆಮ್ಮೆಯ ವಿಷಯ. ಇಲ್ಲಿರುವ ಬುದ್ಧನ ಶಿಲಾ ಅವಶೇಷಗಳನ್ನು ಬಿಸಿಲು, ಗಾಳಿಗೆ ಹಾಳಾಗಲು ಬಿಡುವುದಿಲ್ಲ. ಆದಷ್ಟು ಬೇಗ ಪುರಾತತ್ವ ಅಧಿಕಾರಿಗಳೊಂದಿಗೆ ಚರ್ಚಿಸಿ, ಸನ್ನತಿ ಅಭಿವೃದ್ಧಿ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇನೆ. ಸನ್ನತಿ ಪ್ರದೇಶದಲ್ಲಿ ಸ್ಥಗಿತವಾಗಿರುವ ಉಖ್ಖನನ ಮುಂದುವರಿಸಿದರೆ ಇನ್ನಷ್ಟು ಮಹತ್ವದ ಕುರುಹುಗಳು ಪತ್ತೆಯಾಗಬಹುದು. ಒಟ್ಟಿನಲ್ಲಿ ಈ ತಾಣದ ಮೇಲೆ ಪ್ರಾಮಾಣಿಕವಾಗಿ ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿ, ಕೂಡಲೇ ತಾಣದ ಸಮಗ್ರ ವರದಿ ಸಲ್ಲಿಸುವಂತೆ ಪ್ರವಾಸೋದ್ಯಮ ಅಧಿಕಾರಿಗಳಿಗೆ ಸೂಚಿಸಿದರು.

ಪುರಾತತ್ವ ಇಲಾಖೆ ಹಂಪಿ ವಿಭಾಗದ ಅಧೀಕ್ಷಕ ನಿಖೀಲ್‌ ದಾಸ್‌, ಸೇಡಂ ಸಹಾಯಕ ಆಯುಕ್ತೆ ಅಶ್ವಿ‌ಜಾ ಡಿ.ವಿ, ತಹಶೀಲ್ದಾರ್‌ ಉಮಾಕಾಂತ ಹಳ್ಳೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರ, ವಿಠ್ಠಲ ನಾಯಕ, ನಿವೇದಿತಾ ದಹಿಹಂಡೆ, ಗುರುಲಿಂಗ ಚಂದನ್‌, ಶಿವರಾಮ ಪವಾರ, ರಮೇಶಗೌಡ ಉಳಂಡಗೇರಾ, ಭೀಮರೆಡ್ಡಿಗೌಡ ಕುರಾಳ, ರವಿ ಕಾರಬಾರಿ, ಅರವಿಂದ ಚವ್ಹಾಣ, ವೀರಣ್ಣ ಯಾರಿ, ರಾಹುಲ್‌ ಸಿಂಧಗಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.