ಬ್ರಿಮ್ಸ್ ಅವ್ಯವಸ್ಥೆಗೆ ಶೀಘ್ರ ಲಗಾಮು

ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಸಭೆ  ಖಾಲಿ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ

Team Udayavani, Jun 15, 2020, 12:33 PM IST

1-June-09

ಬೀದರ: ಬ್ರಿಮ್ಸ್‌ ಬೋಧಕ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ| ಕೆ.ಸುಧಾಕರ ಮಾತನಾಡಿದರು.

ಬೀದರ: ಶೀಘ್ರ ಬೆಂಗಳೂರಿನಲ್ಲಿ ಉನ್ನತಮಟ್ಟದ ಅಧಿಕಾರಿಗಳ ಸಭೆಗೆ ವ್ಯವಸ್ಥೆ ಮಾಡಿಸಿ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್‌) ಸುಧಾರಣೆ ಬಗ್ಗೆ ಚರ್ಚಿಸಿ ಅವ್ಯವಸ್ಥೆಗೆ ಲಗಾಮು ಹಾಕುವುದಾಗಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ|ಕೆ. ಸುಧಾಕರ ಹೇಳಿದರು.

ನಗರದ ಬ್ರಿಮ್ಸ್‌ ಬೋಧಕ ಆಸ್ಪತ್ರೆ ಸಭಾಂಗಣದಲ್ಲಿ ರವಿವಾರ ನಡೆದ ಸಭೆಯಲ್ಲಿ ಬ್ರಿಮ್ಸ್‌ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಎಲ್ಲ ಶಾಸಕರು ಅಸಮಾಧಾನ ಹೊರ ಹಾಕಿದಾಗ ಬ್ರಿಮ್ಸ್‌ನ್ನು ಸರಿದಾರಿಗೆ ತರಲು ತಾವು ಈ ವಿಷಯವನ್ನು ಸವಾಲಾಗಿ ಸ್ವೀಕರಿಸುವುದಾಗಿ ಭರವಸೆ ನೀಡಿದರು.

ಆಸ್ಪತ್ರೆ ಯಾವ ಪುರುಷಾರ್ಥಕ್ಕೆ: 13 ವರ್ಷದ ಬ್ರಿಮ್ಸ್‌ಗೆ ಈವರೆಗೆ ಆಡಾಳಿತಾಧಿಕಾರಿ ಇಲ್ಲ ಎಂದರೆ ಹೇಗೆ? ಒಟ್ಟು ಮಂಜೂರಾದ 1085 ಹುದ್ದೆಗಳ ಪೈಕಿ ಇದುವರೆಗೆ 389 ಹುದ್ದೆಗಳು ಭರ್ತಿಯೇ ಆಗಿಲ್ಲ ಅಂದರೆ ಹೇಗೆ ಎಂದು ಪ್ರಶ್ನಿಸಿದ ಸಚಿವರು, ಜನರಿಗೆ ಅನುಕೂಲವಾಗುತ್ತಿಲ್ಲ ಎಂದರೆ ನೂರಾರು ಕೋಟಿ ಹಣ ವ್ಯಯಿಸಿ ನಿರ್ಮಿಸಿದ ಆಸ್ಪತ್ರೆ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ರಿಮ್ಸ್‌ನಲ್ಲಿ ಇದುವರೆಗೆ ಖಾಲಿ ಇರುವ 5 ಪ್ರೋಪೆಸರ್‌, 3 ಅಸೋಸಿಯೇಟ್‌ ಪ್ರೋಪೆಸರ್‌ ಮತ್ತು 8 ಅಸಿಸ್ಟಂಟ್‌ ಗಳ ಹುದ್ದೆಗಳ ನೇಮಕಾತಿ ನಡೆಯುವ ಪ್ರಕ್ರಿಯೆ ಶೀಘ್ರ ಆರಂಭವಾಗಬೇಕು ಎಂದು ನಿರ್ದೇಶನ ನೀಡಿದರು. ಬ್ರಿಮ್ಸ್‌ನಲ್ಲಿ 71 ಗ್ರೂಪ್‌ ಎ, 1 ಗ್ರೂಪ್‌ ಬಿ, 135 ಗ್ರೂಪ್‌ ಸಿ, 82 ಗ್ರೂಪ್‌ ಡಿ. ಸೇರಿ 289 ಹುದ್ದೆಗಳು ಹಾಗೂ ಬ್ರಿಮ್ಸ್‌ ಬೋಧಕ ಆಸ್ಪತ್ರೆಯಲ್ಲಿ ಗ್ರೂಪ್‌ ಎ 12, ಗ್ರೂಪ್‌ ಬಿ 2, ಗ್ರೂಪ್‌ ಸಿ. 71 ಮತ್ತು ಗ್ರೂಪ್‌ ಡಿ. 15 ಸೇರಿ 100 ಹುದ್ದೆಗಳು ಸೇರಿ ಒಟ್ಟು 389 ಹುದ್ದೆಗಳು ಭರ್ತಿಯಾಗುವುದು ಬಾಕಿ ಇದೆ ಎಂದು ಬ್ರಿಮ್ಸ್‌ ನಿರ್ದೇಶಕರು ಪ್ರಾತ್ಯಕ್ಷಿಕೆ ಮೂಲಕ ಸಭೆಗೆ ಮಾಹಿತಿ ನೀಡಿದರು.

ಸಂಸದ ಭಗವಂತ ಖೂಬಾ ಮಾತನಾಡಿ, ಹಲವಾರು ಭಾರಿ ಆಸ್ಪತ್ರೆಗೆ ಭೇಟಿ ನೀಡಿದರೂ ಸುಧಾರಣೆಯಾಗುತ್ತಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿ ಅಸಮಾಧಾನ ತೋರಿದರು. ಆಸ್ಪತ್ರೆಗೆ ನೂರಾರು ಕೋಟಿ ರೂ ಖರ್ಚು ಮಾಡಿದ್ದರೂ ಜನತೆಗೆ ಇಲ್ಲಿ ಸರಿಯಾಗಿ ಚಿಕಿತ್ಸೆ ಸಿಗದೇ ಸೊಲ್ಲಾಪುರ, ಹೈದ್ರಾಬಾದ್‌ ಹೋಗುವಂತಾಗಿದೆ ಎಂದು ಶಾಸಕ ರಹೀಂ ಖಾನ್‌ ತಿಳಿಸಿದರು.

ಬ್ರಿಮ್ಸ್‌ ಸುಧಾರಣೆ ವಿಷಯ ಹತ್ತಾರು ವರ್ಷಗಳ ಕಾಲ ಸಭೆಗಳಿಗೆ ಮಾತ್ರ ಸೀಮಿತವಾಗುತ್ತಿದೆ. ಸುಧಾರಣೆಯಾಗಿಲ್ಲ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಇಲ್ಲಿ ಸರಿಯಾದ ಆಡಳಿತ ವ್ಯವಸ್ಥೆಯಿಲ್ಲ. ಇಲ್ಲಿನ ಸಮಸ್ಯೆ ನಿಮ್ಮಿಂದಾದರೂ ತೊಲಗಲಿ ಎಂದು ಶಾಸಕ ಬಿ.ನಾರಾಯಣರಾವ್‌ ಅವರು ಧನಿಗೂಡಿಸಿದರು. ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಡಿಸಿ ಆರ್‌. ರಾಮಚಂದ್ರನ್‌ ಇದ್ದರು.

ಟಾಪ್ ನ್ಯೂಸ್

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆರಗ ಜ್ಞಾನೇಂದ್ರ

ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ನಿರ್ದೇಶನ: ಆರಗ ಜ್ಞಾನೇಂದ್ರ

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10center

ಗ್ರಾಮ ಒನ್‌ ಕೇಂದ್ರದ ಲಾಭ ಪಡೆಯಿರಿ: ಶಾಸಕ ಖಾಶೆಂಪುರ

9muncipal

ಪುರಸಭೆ ಆಡಳಿತ ವಿರುದ್ಧ ಶಾಸಕರ ಅಸಮಾಧಾನ

16buddha

ಬೌದ್ಧ ಮಹಾಸಭೆಯಲ್ಲಿ ಅವ್ಯವಹಾರ ನಡೆದಿಲ್ಲ

15students

ವಿದ್ಯಾರ್ಥಿಗಳಿಗೆ ಶಿಷ್ಯವೇತನ ತಲುಪಿಸಿ: ಖಂಡ್ರೆ

25rice

ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ವಾಹನ ಜಪ್ತಿ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

15kasapa

ಕಸಾಪಕ್ಕೆ ವಾಹನ ನೀಡಲು ಕ್ರಮ: ಮುರುಗೇಶ ನಿರಾಣಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

14bus

ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಕ್ಕೆ ತೇಲ್ಕೂರ್‌ಗೆ ಒತ್ತಾಯ

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.