ಕೋಲಿ ಎಸ್ ಟಿ ಸೇರ್ಪಡೆಗೆ ಜಾತಿ ಅಡ್ಡಿ: ಚಿಂಚನಸೂರ

ಕೋಲಿ ಸಮಾಜಕ್ಕೆ ಮೀಸಲಾತಿ ನೀಡುವುದಕ್ಕಾಗಿ ಬಿಜೆಪಿ ಸರ್ಕಾರ ಬದ್ಧವಾಗಿದೆ.

Team Udayavani, Mar 3, 2021, 6:12 PM IST

ಕೋಲಿ ಸಮಾಜಕ್ಕೆ ಮೀಸಲಾತಿ ನೀಡುವುದಕ್ಕಾಗಿ ಬಿಜೆಪಿ ಸರ್ಕಾರ ಬದ್ಧವಾಗಿದೆ

ಚಿಂಚೋಳಿ: ಕೋಲಿ ಕಬ್ಬಲಿಗ ಸಮಾಜವನ್ನು ಎಸ್‌ಟಿಗೆ ಸೇರ್ಪಡೆಗೊಳಿಸಲು ಗಂಗಾಮತ, ಮೀನುಗಾರ, ಮೊಗವೀರ ಜಾತಿಗಳು ಅಡ್ಡಿಯಾಗಿರುವುದರಿಂದ ಸೇರ್ಡಡೆಗೆ ಹಿನ್ನೆಡೆ ಉಂಟಾಗುತ್ತಿದೆ ಎಂದು ಮಾಜಿ ಸಚಿವ, ರಾಜ್ಯ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹೇಳಿದರು.

ತಾಲೂಕಿನ ಚಂದ್ರಂಪಳ್ಳಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 901 ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸಲು ಗಂಗಾವತಿ, ಯಾನಾಗುಂದಿಯಲ್ಲಿ ಬೃಹತ್‌ ಸಮಾವೇಶ ನಡೆಸಿದ್ದೇನೆ ಎಂದರು.

1991-92ರಲ್ಲಿ ಗಂಗಾವತಿಯಲ್ಲಿ ನಡೆಸಿದ ಸಮಾವೇಶದಲ್ಲಿ ಆಗಿನ ಮುಖ್ಯಮಂತ್ರಿ ಎಂ. ವೀರಪ್ಪ ಮೋಯ್ಲಿ ನಮ್ಮ ಸಮಾಜವನ್ನು ಪ್ರವರ್ಗ-1ಕ್ಕೆ ಸೇರ್ಪಡೆ ಮಾಡಿದರು. ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಡಳಿತದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. ಆದರೆ ಕೇಂದ್ರ ಸರ್ಕಾರ ಗಂಗಾಮತ, ಮೊಗವೀರ, ಮೀನುಗಾರ ಜಾತಿಗಳನ್ನು ಕಬ್ಬಲಿಗ ಜಾತಿಗೆ ಸೇರಿಸುವುದಿಲ್ಲವೆಂದು ರಾಜ್ಯ ಸರ್ಕಾರದ ವರದಿ ತಿರಸ್ಕರಿಸಿತು ಎಂದು ವಿವರಿಸಿದರು.

ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸಿದರೆ ನನ್ನ ಹೆಸರೇ ಎಲ್ಲೆಡೆ ಕೇಳಿಬರುತ್ತದೆ ಎನ್ನುವ ಕಾರಣದಿಂದಾಗಿ ನಮ್ಮ ಸಮಾಜದಲ್ಲಿ ಇರುವವರೇ ನನ್ನ ಕಾಲೆಳೆಯುತ್ತಿದ್ದಾರೆ. ನಾನು ಮಾಡಿದ ಸಾಧನೆಯನ್ನು ಯಾರೂ ಹೇಳುತ್ತಿಲ್ಲ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸಲು ಮನಸ್ಸು ಮಾಡಲಿಲ್ಲ. ಆದರೀಗ ಎಸ್‌ಟಿಗೆ ಸೇರ್ಪಡೆಯಾಗುವ ಕಾಲ ಸನ್ನಿಹಿತವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಅಮಿತ್‌ ಶಾ ನಮಗೆ ನ್ಯಾಯ ಒದಗಿಸಲಿದ್ದಾರೆ ಎಂದರು.

ಕಾಡಾ ಅಧ್ಯಕ್ಷ ಶರಣಪ್ಪ ತಳವಾರ ಮಾತನಾಡಿ, ಕೋಲಿ ಸಮಾಜಕ್ಕೆ ಮೀಸಲಾತಿ ನೀಡುವುದಕ್ಕಾಗಿ ಬಿಜೆಪಿ ಸರ್ಕಾರ ಬದ್ಧವಾಗಿದೆ. ಹಿಂದಿನ ಸರ್ಕಾರಗಳು ಕೋಲಿ ಸಮಾಜವನ್ನು ಕಡೆಗಾಣಿಸಿದ್ದವು ಎಂದು ಹೇಳಿದರು. ಕಾಂಗ್ರೆಸ್‌ ಮುಖಂಡ ಸುಭಾಸ ರಾಠೊಡ, ಕೋಲಿ ಸಮಾಜದ ಮುಖಂಡರಾದ ಲಕ್ಷ್ಮಣ ಆವಂಟಿ, ರವಿರಾಜ ಕೊರವಿ, ತಾಲೂಕು ಕೋಲಿ ಸಮಾಜದ ಅಧ್ಯಕ್ಷ ಗಿರಿರಾಜ ನಾಟಿಕಾರ, ವಿಜಯಕುಮಾರ ವೀರಟ್ಟಿ ಮಾತನಾಡಿದರು.

ರಟಕಲ್‌ ಗೌರಿಗುಡ್ಡದ ಪೂಜ್ಯ ಸಿದ್ಧ ಶಿವಯೋಗಿ ಸಾನ್ನಿಧ್ಯ ವಹಿಸಿದ್ದರು. ಪ್ರದೀಪ ತುಮಕುಂಟಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನರಸಪ್ಪ ಮೊಗಡಂಪಳ್ಳಿ, ಶಿವಪ್ಪ, ಭೀಮಶೆಟ್ಟಿ ಮುರುಡಾ, ರಾಜರೆಡ್ಡಿ ಪಾಟೀಲ, ಹಣಮಂತ, ಅಶೋಕ ಭಜಂತ್ರಿ, ಲಕ್ಷಿಕಾಂತ, ಶಿವಪುತ್ರಪ್ಪ ನೆಲ್ಲಿ ಇನ್ನಿತರರು ಭಾಗವಹಿಸಿದ್ದರು. ಬಕ್ಕಪ್ಪ ಬೋನಸಪುರ ಸ್ವಾಗತಿಸಿದರು, ಗೋಪಾಲ ನಿರೂಪಿಸಿದರು, ಶಿವಕುಮಾರ ವಂದಿಸಿದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.