ಗ್ರಾಮೀಣ ಶೈಕ್ಷಣಿಕ ವ್ಯವಸ್ಥೆ ಬದಲಾವಣೆಗೆ ಕ್ರಮ

Team Udayavani, May 5, 2022, 3:01 PM IST

12education

ಆಳಂದ: ಸಮಾನ ಶಿಕ್ಷಣದಿಂದ ಸಮಾನ ಅವಕಾಶಗಳು ದೊರಯುತ್ತವೆ ಅವುಗಳನ್ನು ಸರಿಯಾಗಿ ಬಳಸಿಕೊಂಡರೆ ಶಿಕ್ಷಣದ ಸಾರ್ಥಕತೆ ಮನದಟ್ಟಾಗುತ್ತದೆ ಎಂದು ಶಾಸಕ ಸುಭಾಷ್‌ ಗುತ್ತೇದಾರ ಹೇಳಿದರು.

ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಡಿ ಮಂಜೂರಾದ ರೂ. 41 ಲಕ್ಷ ರೂ.ಗಳ 4 ಶಾಲಾ ತರಗತಿ ಕೋಣೆಗಳ ನಿರ್ಮಾಣದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮೀಣ ಮಕ್ಕಳ ಶಿಕ್ಷಣ ವ್ಯವಸ್ಥೆ ಕ್ರಾಂತಿಕಾರಕ ಬದಲಾವಣೆಗಾಗಿ ತಾಲೂಕಿನಾದ್ಯಂತ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಹಳ ವರ್ಷಗಳ ಹಿಂದೆ ಕಟ್ಟಿದ ಶಾಲೆಗಳಿಗೆ ಕಾಯಕಲ್ಪ ನೀಡುವ ಹಂತವಾಗಿ ಶಾಲಾ ಕೋಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಭೌತಿಕ ಸಂಪನ್ಮೂಲ ಭರ್ತಿಯಾಗಿ ವಿದ್ಯಾರ್ಥಿಗಳು ಶಾಲೆಗಳತ್ತ ಹೆಜ್ಜೆ ಹಾಕುತ್ತಾರೆ ಎಂದು ಅಭಿಪ್ರಾಯಪಟ್ಟರು.

ಶೈಕ್ಷಣಿಕ ವ್ಯವಸ್ಥೆ ಸುಧಾರಿಸದ ಹೊರತು ಸಾಮಾಜಿಕ ವ್ಯವಸ್ಥೆ ಬದಲಾಗುವುದಿಲ್ಲ. ಅದಕ್ಕಾಗಿ ಸರ್ವರಿಗೂ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಶ್ರಮಿಸುತ್ತಿವೆ. ಅದರಂಗವಾಗಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ನೂರಾರು ಯೋಜನೆಗಳು ಚಾಲ್ತಿಯಲ್ಲಿವೆ. ಇದರ ಲಾಭವನ್ನು ಸಮಾಜದ ಜನತೆ ಪಡೆಯಬೇಕು ಎಂದು ಕರೆ ನೀಡಿದರು.

ರುದ್ರವಾಡಿ ಗ್ರಾಮದ ಜನರ ಆಶಯದಂತೆ ಶಾಲಾ ಕೋಣೆಗಳು ನಿರ್ಮಾಣವಾಗಿದ್ದು ಮುಂದಿನ ದಿನಗಳಲ್ಲಿ ಗ್ರಾಮದ ಇತರೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಅಲ್ಲದೇ ಬಹಳ ವರ್ಷಗಳ ಬೇಡಿಕೆಯಾದ ಬಬಲೇಶ್ವರ-ರುದ್ರವಾಡಿ ರಸ್ತೆಗೆ ಅನುದಾನ ಮಂಜೂರಿ ಮಾಡಿ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಪ್ರಕಾಶ ಭೂಸಣಗೆ, ಗ್ರಾಮದ ಮುಖಂಡರಾದ ಗುರುನಾಥ ಹೀರಾ, ಬಸವರಾಜ ಮೂಲಗೆ, ಶ್ರೀಧರ ಕೊಟ್ಟರ್ಕಿ, ವಿಠೊಬಾ ಕಾಮಶೆಟ್ಟಿ, ರಘುನಾಥ ಪಾಟೀಲ, ಸಾಯಬಣ್ಣ ಪೂಜಾರಿ, ಕಾಶಿನಾಥ ಕೊಟ್ಟರ್ಕಿ, ಗೌತಮ ವಾಘ್ಮೋರೆ, ಆಕಾಶ ವಾಘ್ಮೋರೆ,  ರಾಜಕುಮಾರ, ಶಿವಲಿಂಗ ಡಿಗ್ಗಿ, ಶಿವಪ್ರಕಾಶ ಹೀರಾ, ಲೋಕೋಪಯೋಗಿ ಇಲಾಖೆಯ ಅಭಿಯಂತರ ಸಂದೀಪ, ರುದ್ರವಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.